• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಸಾವು: 12 ತಾಸು ಬಂದ್‌ಗೆ ಬಿಜೆಪಿ ಕರೆ

|

ಕೋಲ್ಕತ್ತ, ನವೆಂಬರ್ 19: ಪಶ್ಚಿಮ ಬಂಗಾಳದಲ್ಲಿ ನಡೆದ ಬಿಜೆಪಿ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿ 12 ತಾಸುಗಳ ಬಂದ್‌ಗೆ ಕರೆ ನೀಡಲಾಗಿದೆ.

ಕೋಚ್ ಬೆಹಾರ್ ನಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆದು ಸಾವನ್ನಪ್ಪಿದ ನಂತರ ಈ ಬಂದ್ ನಡೆಸಲಾಗುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರನ್ನು ನಿರಂತರವಾಗಿ ಟಿಎಂಸಿ ಪಕ್ಷದವರು ಹತ್ಯೆ ಮಾಡುತ್ತಿದ್ದರೂ ಪೊಲೀಸರು ಏನನ್ನು ಮಾಡುತ್ತಿಲ್ಲ. ಇಂತಹ ಹತ್ಯೆಗಳನ್ನು ಪ್ರತಿಭಟಿಸಿ ಇಂದು ಬಂದ್ ನಡೆಸಲಾಗುತ್ತಿದೆ ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಅಸೆಂಬ್ಲಿ ಚುನಾವಣೆ: ಪ್ರಮುಖ ನಿರ್ಧಾರ ತೆಗೆದುಕೊಂಡ ಅಮಿತ್ ಶಾ

ಬೆಳಂಬೆಳಿಗ್ಗೆ ರಸ್ತೆಗಿಳಿದ ಬಿಜೆಪಿ ಕಾರ್ಯಕರ್ತರು, ಟೈರುಗಳಿಗೆ ಬೆಂಕಿ ಹಚ್ಚಿ ಟಿಎಂಸಿ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಶ್ಚಿಮ ಬಂಗಾಳದ ಪುರ್ಬಾ ಮದಿನಿಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರು ಶವವಾಗಿ ಪತ್ತೆಯಾಗಿದ್ದು, ಟಿಎಂಸಿ "ಗೂಂಡಾಗಳು" ಬಿಜೆಪಿ ಕಾರ್ಯಕರ್ತನನ್ನು ಕೊಲೆ ಮಾಡಿದ್ದಾರೆ ಎಂದು ಕೇಸರಿ ಪಕ್ಷ ಆರೋಪಿಸಿದೆ. ಹೀಗಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ಬಿಜೆಪಿ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಆಡಳಿತರೂಢ ಟಿಎಂಸಿ, ಆರೋಪ ಆಧಾರರಹಿತ ಎಂದು ಹೇಳಿದೆ. ಜಿಲ್ಲೆಯ ಇಟಾಬೆಡಿಯಾ ಪ್ರದೇಶದಲ್ಲಿ ಬುಧವಾರ ರಾತ್ರಿ ಬಿಜೆಪಿ ಕಾರ್ಯಕರ್ತ ಗೋಕುಲ್ ಜನ ಅವರ ಶವ ಪತ್ತೆಯಾಗಿದ್ದು, ಪ್ರಕರಣದ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾಂತಿ ಭಗಬನ್‌ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತ ಗೋಕುಲ್ ಜನ ಅವರನ್ನು ಟಿಎಂಸಿ ಗೂಂಡಾಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿತ್ತು.

ಜನ ಅವರು ರಾಜಕೀಯ ದ್ವೇಷಕ್ಕೆ ಬಲಿಯಾಗಿದ್ದಾರೆ. ಆದರೆ ಸ್ಥಳೀಯ ಪೊಲೀಸರು ಹಂತಕರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ಸಯಂತನ್ ಬಸು ಅವರು ಆರೋಪಿಸಿದ್ದರು.

English summary
West Bengal: 12-hour Bandh call given by state BJP after their party worker was allegedly beaten to death in Cooch Behar. "Our workers are constantly being killed by TMC but police is not doing anything. So, today's bandh is our protest against such killings," says a BJP worker.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X