• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಶ್ಚಿಮ ಬಂಗಾಳದಲ್ಲಿ ನಟಿ ಶ್ರಬಂತಿ ಚಟರ್ಜಿ ಬಿಜೆಪಿಗೆ ಸೇರ್ಪಡೆ

|

ಕೋಲ್ಕತ್ತಾ, ಮಾರ್ಚ್.01: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೊಸ್ತಿಲಿನಲ್ಲೇ ಬಂಗಾಳದ ಖ್ಯಾತ ನಟಿ ಶ್ರಬಂತಿ ಚಟರ್ಜಿ ಅವರು ಸೋಮವಾರ ಭಾರತೀಯ ಜನತಾ ಪಾರ್ಟಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಬಂಗಾಳದ ಖ್ಯಾತ ನಟಿ ಶ್ರಬಂತಿ ಚಟರ್ಜಿ ಅವರನ್ನು ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಅವರು ಪಕ್ಷಕ್ಕೆ ಬರ ಮಾಡಿಕೊಂಡರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಸಹ ಉಪಸ್ಥಿತರಿದ್ದರು.

ಸಮೀಕ್ಷೆ: ಚುನಾವಣಾ ನಿರತ ಮುಂದಿನ ಸಿಎಂ ಯಾರಾಗಬೇಕು?

ಪಶ್ಚಿಮ ಬಂಗಾಳದಲ್ಲಿ ಈಗ ಸಾಕಷ್ಟು ಕಡೆಗಳಿಂದ ಜನರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಇಂದು ಪಕ್ಷಕ್ಕೆ ಸೇರ್ಪಡೆಯಾದ ನಟಿ ಶ್ರಬಂತಿ ಚಟರ್ಜಿಯವರನ್ನು ನಾನು ಪಕ್ಷಕ್ಕೆ ಆಹ್ವಾನಿಸುತ್ತೇವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ:

ಕಳೆದ ಫೆಬ್ರವರಿ.26ರಂದು ನಾಲ್ಕು ರಾಜ್ಯ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಧಾನಸಭಾ ಚುನಾವಣೆ ನಡೆಸುವುದಕ್ಕೆ ಕೇಂದ್ರ ಚುನಾವಣಾ ಆಯೋಗವು ದಿನಾಂಕ ಘೋಷಿಸಿತು. ಈ ಪೈಕಿ ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಿಗೆ ಎಂಟು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಮಾರ್ಚ್.27ರಿಂದ ಆರಂಭವಾಗಲಿರುವ ಚುನಾವಣೆಯು ಏಪ್ರಿಲ್.29ರಂದು ಮುಕ್ತಾಯಗೊಳ್ಳಲಿದ್ದು, ಮೇ.02ರಂದು ಫಲಿತಾಂಶ ಹೊರ ಬೀಳಲಿದೆ.

English summary
West Bengal: Actor Srabanti Chatterjee Joins BJP Before Elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X