ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ಭವಾನಿಪುರದಿಂದ ಕಣಕ್ಕೆ

|
Google Oneindia Kannada News

ಕೋಲ್ಕತ್ತಾ, ಸೆಪ್ಟೆಂಬರ್‌ 05: ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಳಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಹೆಸರು ಕೂಡಾ ಇದೆ.

ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಎಂಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮಮತಾ ಬ್ಯಾನರ್ಜಿ ನಿರೀಕ್ಷೆಯಂತೆಯೇ ಭವಾನಿಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಸೆಪ್ಟೆಂಬರ್ 30ಕ್ಕೆ ಉಪಚುನಾವಣೆ ನಿಗದಿಯಾಗಿದೆ.

ಮತ್ತೆ ಟಿಎಂಸಿ ಸೇರಿದ ಬಿಜೆಪಿಯ ನಾಲ್ಕನೇ ಶಾಸಕ; ಕೇಸರಿ ಪಕ್ಷಕ್ಕೆ ಶಾಕ್!ಮತ್ತೆ ಟಿಎಂಸಿ ಸೇರಿದ ಬಿಜೆಪಿಯ ನಾಲ್ಕನೇ ಶಾಸಕ; ಕೇಸರಿ ಪಕ್ಷಕ್ಕೆ ಶಾಕ್!

ಇನ್ನುಳಿದ ಎರಡು ಕ್ಷೇತ್ರಗಳಾದ ಮುರ್ಷಿದಾಬಾದ್‌ನ ಜಂಗೀಪುರ ಕ್ಷೇತ್ರದಲ್ಲಿ ಮಾಜಿ ಸಚಿವ ಜಾಕಿರ್ ಹುಸೇನ್, ಸಮ್‌ಸೇರ್‌ಗಂಜ್ ಕ್ಷೇತ್ರದಿಂದ ಅಮಿರುಲ್ ಇಸ್ಲಾಂ ಕಣಕ್ಕೆ ಇಳಿಸಲಾಗಿದೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಟ್ವೀಟ್ ಮಾಡಿದೆ. ಈ ಎರಡೂ ಕ್ಷೇತ್ರಗಳ ಶಾಸಕರು ಕೋವಿಡ್‌ನಿಂದಾಗಿ ಸಾವನ್ನಪ್ಪಿದ್ದಾರೆ. ಹೀಗಾಗಿ ಉಪಚುನಾವಣೆ ನಡೆಯುತ್ತಿದೆ.

West Bengal assembly bypolls: CM Mamata Banerjee named TMC candidate from Bhabanipur

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರ ಭವಾನಿಪುರದಲ್ಲಿ ಸ್ಪರ್ಧಿಸಿರಲಿಲ್ಲ. ಬದಲಾಗಿ ನಂದಿಗ್ರಾಮ ಕ್ಷೇತ್ರದಲ್ಲಿ ಸ್ಪರ್ಧಿಸಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲನ್ನುಂಡಿದ್ದರು. ಬಳಿಕ ಮಮತಾ ಬ್ಯಾನರ್ಜಿ ಮೇ 5ಕ್ಕೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಆದರೆ ನವೆಂಬರ್ 5ರ ಒಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿದೆ. ಈ ಹಿನ್ನೆಲೆಯಿಂದಾಗಿ ಮಮತಾ ಬ್ಯಾನರ್ಜಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಲು ಭವಾನಿಪುರದ ಶಾಸಕ ಸ್ಥಾನಕ್ಕೆ ಶೋಭನ್‌ದೇವ್‌ ಚಟ್ಟೋಪಾಧ್ಯಾಯ ರಾಜೀನಾಮೆ ನೀಡಿದ್ದರು. ಸೆಪ್ಟೆಂಬರ್ 30ಕ್ಕೆ ಉಪಚುನಾವಣೆ ನಿಗದಿಯಾಗಿದೆ.

ಇನ್ನು ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಸೋಲು ಕಂಡಿದ್ದರೂ ಕೂಡಾ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅಧಿಕ ಬಹುಮತ ಪಡೆದು ಪಶ್ಚಿಮ ಬಂಗಾಳ ರಾಜ್ಯವನ್ನು ತನ್ನ ತೆಕ್ಕೆಯಲ್ಲೇ ಉಳಿಸಿಕೊಂಡಿದೆ. ಈ ಕಾರಣದಿಂದಾಗಿ ಮಮತಾ ಬ್ಯಾನರ್ಜಿಯನ್ನೇ ಮುಖ್ಯಮಂತ್ರಿಯಾಗಿ ಟಿಎಂಸಿ ಪಕ್ಷ ಆಯ್ಕೆ ಮಾಡಿತ್ತು. ಈ ಹಿನ್ನೆಲೆ ಮಮತಾ ಬ್ಯಾನರ್ಜಿಗೆ ಶಾಸಕರಾಗಿ ಆಯ್ಕೆಯಾಗುವುದು ಅನಿವಾರ್ಯವಾಗಿದೆ. ಈ ಕಾರಣದಿಂದಾಗಿ ತಮ್ಮ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ.

ದೀದಿ ಇಲ್ಲದೆ ಬದುಕಲಾಗದು - ಮತ್ತೆ ಟಿಎಂಸಿ ಸೇರ್ಪಡೆಗೆ ಬಿಜೆಪಿಯ ಸೋನಾಲಿ ಒಲವು ದೀದಿ ಇಲ್ಲದೆ ಬದುಕಲಾಗದು - ಮತ್ತೆ ಟಿಎಂಸಿ ಸೇರ್ಪಡೆಗೆ ಬಿಜೆಪಿಯ ಸೋನಾಲಿ ಒಲವು

ರಾಜ್ಯದಲ್ಲಿ ಕೋವಿಡ್​-19 ಪ್ರಕರಣ ಕಡಿಮೆಯಾಗಿರುವ ಹಿನ್ನೆಲೆ ಚುನಾವಣಾ ಆಯೋಗ ಚುನಾವಣೆ ನಡೆಸಲು ಮುಂದಾಗಿದೆ. ಟಿಎಂಸಿ ಈ ಮೂರು ಕ್ಷೇತ್ರದಲ್ಲೂ ಗೆಲುವು ಸಾಧಿಸುವ ಉತ್ಸಾಹವನ್ನು ಹೊಂದಿದೆ. ನಾವು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದೇವೆ ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಕುನಾಲ್​​ ಘೋಷ್​ ತಿಳಿಸಿದ್ದಾರೆ.

(ಒನ್ ಇಂಡಿಯಾ ಸುದ್ದಿ)

English summary
West Bengal Chief Minister Mamata Banerjee will contest from Bhabanipur in the upcoming by-election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X