ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಕೋಲ್ಕತ್ತಾ, ಮಾರ್ಚ್ 21: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.

ನವದೆಹಲಿಯಲ್ಲಿ ಬಿಜೆಪಿ ಚುನಾವಣಾ ಪಕ್ಷದ ಪ್ರಣಾಳಿಕೆ ಬಿಡುಗಡೆಗೊಳಿಸಿದ ಅವರು, ಬಿಜೆಪಿ ಪ್ರಣಾಳಿಕೆಯನ್ನು ಸಂಕಲ್ಪ ಪತ್ರ ಎಂದು ಕರೆದಿದ್ದಾರೆ. ಹೆಣ್ಣು ಮಕ್ಕಳಿಗೆ ಎಲ್‌ಕೆಜಿಯಿಂದ ಪಿಜಿವರೆಗೂ ಉಚಿತ ಶಿಕ್ಷಣವನ್ನು ನೀಡುವುದಾಗಿ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆ ಅಡಿಯಲ್ಲಿ 3 ವರ್ಷದಿಂದ ಮಮತಾ ಬ್ಯಾನರ್ಜಿ ಅವರು ರೈತರಿಗೆ ನೀಡದ 18,000 ರೂಪಾಯಿ ಹಣವನ್ನು ಯಾವುದೇ ಕಡಿತವಿಲ್ಲದೆ 75 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

West Bengal Assembly Election 2021: BJP Releases Election Manifesto

ನಿರಾಶ್ರಿತರಿಗೆ ಪ್ರತಿ ವರ್ಷ 10 ಸಾವಿರ ರೂಪಾಯಿ:

ಪಶ್ಚಿಮ ಬಂಗಾಳದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ನಡೆಯುವ ಮೊದಲ ಸಚಿವ ಸಂಪುಟದಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳಿಸಲಾಗುತ್ತದೆ. ಕಳೆದ 70 ವರ್ಷಗಳಿಂದ ನೆಲೆಸಿರುವ ನಿರಾಶ್ರಿತರಿಗೆ ಪೌರತ್ವ ನೀಡಲಾಗುವುದು. ರಾಜ್ಯದ ನಿರಾಶ್ರಿತರಿಗೆ ಮುಂದಿನ 5 ವರ್ಷಗಳವರೆಗೂ ಪ್ರತಿ ವರ್ಷ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.

ರಾಜ್ಯದ ಜನರು ಉತ್ತಮ ರೀತಿ ಚಿಕಿತ್ಸೆ ಪಡೆಯುವುದಕ್ಕಾಗಿ ಕೋಲ್ಕತ್ತಾಗೆ ಹೋಗಬೇಕಿಲ್ಲ. ಉತ್ತರ ಬಂಗಾಳದಲ್ಲಿ ಮೂರು ಏಮ್ಸ್ ಆಸ್ಪತ್ರೆಗಳನ್ನು ನಿರ್ಮಿಸಲಾಗುವುದು. ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ವ್ಯವಸ್ಥೆ ಜಾರಿಗೊಳಿಸುವುದಕ್ಕಾಗಿ ರಾಜ್ಯದ ಎಲ್ಲ ಸರ್ಕಾರಿ ಉದ್ಯೋಗಗಳಿಗೆ ಸಿಇಟಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27, ಏಪ್ರಿಲ್ 1, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+