ಪಶ್ಚಿಮ ಬಂಗಾಳ ಚುನಾವಣೆಗಾಗಿ ಕಾಂಗ್ರೆಸ್ ಎಡಪಕ್ಷ ಮೈತ್ರಿ
ಕೋಲ್ಕತಾ, ಡಿ. 24: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗಾಗಿ ಎಡಪಕ್ಷಗಳ ಜೊತೆ ಚುನಾವಣಾ ಮೈತ್ರಿ ಹೊಂದುವುದಾಗಿ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಘೋಷಿಸಿದ್ದಾರೆ.
''ಪಶ್ಚಿಮ ಬಂಗಾಳದಲ್ಲಿ ಎಡಪಕ್ಷಗಳ ಜೊತೆ ಮೈತ್ರಿ ಹೊಂದಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಕೈಗೊಂಡಿದೆ'' ಎಂದು ಚೌಧರಿ ಟ್ವೀಟ್ ಮಾಡಿದ್ದಾರೆ.
2021ರಲ್ಲಿ ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ಜೊತೆಗೆ ಮಾರ್ಚ್ -ಏಪ್ರಿಲ್ ತಿಂಗಳಲ್ಲಿ ಪಶ್ಚಿಮ ಬಂಗಾಳ ರಾಜ್ಯದ ವಿಧಾನಸಭೆಗೆ ಚುನಾವಣೆ ನಡೆಯಬೇಕಿದೆ.

ಕಳೆದ ಅಕ್ಟೋಬರ್ ತಿಂಗಳಲ್ಲಿ ಎಡಪಕ್ಷಗಳು ಮುಂಬರುವ ಚುನಾವಣೆಯಲ್ಲಿ ಮೈತ್ರಿ ಸಾಧ್ಯತೆ ಬಗ್ಗೆ ಘೋಷಣೆ ಹೊರಡಿಸಿದ್ದವು. ಕಾಂಗ್ರೆಸ್ ಸೇರಿದಂತೆ ಎಲ್ಲಾ ಸೆಕ್ಯುಲರ್ ಪಕ್ಷಗಳು ಒಂದುಗೂಡಿ ಸ್ಪರ್ಧಿಸಲಿವೆ ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications