ವ್ಹೀಲ್ ಚೇರ್‌ನಲ್ಲಿ ಕುಳಿತೇ ಪ್ರಚಾರಕ್ಕೆ ತೆರಳಲಿರುವ ಮಮತಾ ಬ್ಯಾನರ್ಜಿ
ಕೋಲ್ಕತಾ, ಮಾರ್ಚ್ 14: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಾಲಿಗೆ ಉಂಟಾದ ಗಾಯಕ್ಕೆ ಸೂಕ್ತ ಚಿಕಿತ್ಸೆ ಪಡೆದು, ಆಸ್ಪತ್ರೆಯಿಂದ ವ್ಹೀಲ್ ಚೇರ್‌ನಲ್ಲಿ ಕುಳಿತು ಹೊರ ಬಂದಿದ್ದಾರೆ. ಜೊತೆಗೆ ಇಂದಿನಿಂದಲೇ ಚುನಾವಣಾ ಪ್ರಚಾರವನ್ನು ಮುನ್ನಡೆಸುವುದಾಗಿ ಘೋಷಿಸಿದ್ದಾರೆ. ವ್ಹೀಲ್ ಚೇರ್‌ನಲ್ಲಿ ಕುಳಿತೇ ಪ್ರಚಾರಕ್ಕೆ ತೆರಳಲು ಸಜ್ಜಾಗಿದ್ದಾರೆ.
ಈ ನಡುವೆ ಇಂದು ಚುನಾವಣಾ ಪ್ರಣಾಳಿಕೆಯನ್ನು ಇಂದು ಪ್ರಕಟಿಸುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಪಕ್ಷ ತಿಳಿಸಿದ್ದು, ಮುಂದಿನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾಲಿಗೆ ಉಂಟಾಗಿರುವ ಗಾಯವು ಕಾರಿನ ಬಾಗಿಲು ತಾಗಿರುವ ಕಾರಣದಿಂದ ಆಗಿದೆ ಎಂದು ಚುನಾವಣಾ ಆಯೋಗಕ್ಕೆ ಈಗಾಗಲೇ ಅಧಿಕೃತ ಮಾಹಿತಿ ನೀಡಲಾಗಿದೆ.

ರೋಡ್ ಶೋಗೆ ತೆರಳಿರುವ ಮಮತಾ:
ಗಾಂಧಿ ಮೂರ್ತಿಯಿಂದ ಹಜ್ರಾ ಪ್ರದೇಶದಲ್ಲಿ ನಿಗದಿಯಾಗಿರುವ ರೋಡ್ ಶೋನಲ್ಲಿ ಮಮತಾ ಪಾಲ್ಗೊಳ್ಳುತ್ತಿದ್ದು, ವ್ಹೀಲ್ ಚೇರ್‌ನಲ್ಲಿ ಕುಳಿತೇ ಪ್ರಚಾರ ನಡೆಸಿ, ಮತಯಾಚಿಸಲಿದ್ದಾರೆ ಎಂದು ಟಿಎಂಸಿ ತಿಳಿಸಿದೆ.
ಪಶ್ಚಿಮ ಮಿಡ್ನಾಪುರ್ ಜಿಲ್ಲೆಯ ನಂದಿಗ್ರಾಮದ ಬಿರುಲಿಯಾ ಬಜಾರ್ ಬಳಿ ಹಲ್ಲೆ ನಡೆದಿದೆ ಎಂದು ಮಮತಾ ಆರೋಪ ಮಾಡಿದ್ದರು. ಕಾಲು ಹಾಗೂ ಸೊಂಟಕ್ಕೆ ಪೆಟ್ಟಾಗಿದ್ದರಿಂದ ಎಸ್ ಎಸ್ ಕೆಎಂ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಮತಾ ಕಾಣಿಸಿಕೊಳ್ಳುತ್ತಿದ್ದಾರೆ.
294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಗೆ ಮಾರ್ಚ್ 27ರಿಂದ ಆರಂಭಗೊಂಡು 8 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಹೊರಬರಲಿದೆ.












Click it and Unblock the Notifications