• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಟಾರ್ಗೆಟ್ 250! ಬಂಗಾಳ ವಿಧಾನಸಭೆ ಚುನಾವಣೆಗೆ ಅಣಿಯಾಗುತ್ತಿರುವ ಬಿಜೆಪಿ

|

ಕೋಲ್ಕತ್ತಾ, ಜೂನ್ 10: ಲೋಕಸಭೆ ಚುನಾವಣೆಯ ಅಭೂತಪೂರ್ವ ಪ್ರದರ್ಶನದ ನಂತರ ಹುಮ್ಮಸ್ಸಿನಲ್ಲಿರುವ ಬಿಜೆಪಿ ಕೋಲ್ಕತ್ತದ ವಿಧಾನಸಭೆ ಚುನಾವಣೆಯಲ್ಲೂ ಅತ್ಯುತ್ತಮ ಪ್ರದರ್ಶನ ತೋರಲು ಕಾರ್ಯತಂತ್ರ ರೂಪಿಸುತ್ತಿದೆ.

ಒಟ್ಟು 294 ಕ್ಷೇತ್ರಗಳ ವಿಧಾನಸಭೆಯಲ್ಲಿ ಕನಿಷ್ಠ 250 ಸ್ಥಾನಗಳಲ್ಲಾದರೂ ಗೆಲ್ಲಲೇ ಬೇಕೆಂಬ ಗುರಿಯನ್ನು ಬಿಜೆಪಿ ಹೊಂದಿದ್ದು, ಅದಕ್ಕಾಗಿ ಇಂದಿನಿಂದಲೇ ಕಾರ್ಯತಂತ್ರ ರೂಪಿಸಿಕೊಳ್ಳಲು ಮುಂದಾಗಿದೆ. 2021ರಲ್ಲಿ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯಲಿದ್ದು, ಬೇರುಮಟ್ಟದಿಂದ ಪಕ್ಷವನ್ನು ಸಂಘಟಿಸಲು ಬಿಜೆಪಿ ಎರಡು ವರ್ಷಗಳ ಕಾಲಾವಕಾಶವಿದೆ.

ಪಶ್ಚಿಮ ಬಂಗಾಳದಲ್ಲಿ ಅಚ್ಚರಿ, ಮತದಾರನ ಚಿತ್ತ 'ಎಡದಿಂದ ಬಲ'ಕ್ಕೆ!

ಕೇವಲ ಬಿಜೆಪಿಯಿಂದ ಮಾತ್ರ ಅಷ್ಟೊಂದು ಕ್ಷೇತ್ರಗಳಲ್ಲಿ ಜಯಗಳಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತ ಪಕ್ಷ, ತೃಣಮೂಲ ಕಾಂಗ್ರೆಸ್ ನಾಯಕರನ್ನೂ ತನ್ನತ್ತ ಸೆಳೆಯುವ ಪ್ರಯತ್ನದಲ್ಲಿದೆ. ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಕೆಲವು ಶಾಸಕರು ಈಗಾಗಲೇ ಬಿಜೆಪಿ ಸೇರಿದ್ದು, ಇನ್ನೂ ಹಲವರನ್ನು ಬಿಜೆಪಿಗೆ ಸೇರಿಸಿಕೊಂಡರೆ ತನ್ನ ಗುರಿಯನ್ನು ತಲುಪುವುದು ಬಿಜೆಪಿಗೆ ಸುಲಭವಾಗಲಿದೆ ಎಂಬುದು ಲೆಕ್ಕಾಚಾರ.

ಬಿಜೆಪಿ ಅಧಿಕಾರಕ್ಕೆ ಬಂದರೆ ಬಂಗಾಳಿಗ ಅಗತ್ಯವನ್ನು ಅರಿತು, ಕೈಗಾರಿಕೀಕರಣದ ಮೂಲಕ ಉದ್ಯೋಗಾವಕಾಶ ಸೃಷ್ಟಿಸುವ ನಾಗರಿಕತ್ವ(ತಿದ್ದುಪಡಿ) ವಿಧೇಯಕ ಮತ್ತು ಎನ್ ಆರ್ ಸಿ(ನ್ಯಾಶ್ನಲ್ ರಿಜಿಸ್ಟರ್ ಆಫ್ ಸಿಟಿಜನ್) ಯನ್ನು ಜಾರಿಗೆ ತರುವ ಕೆಲಸವನ್ನು ಮಾಡುವುದಾಗಿ ಬಜೆಪಿ ಭರವಸೆ ನೀಡುವ ಸಾಧ್ಯತೆ ಇದೆ.

ಬಿಜೆಪಿಯ ಗೆಲುವಿಗೆ ಪಣತೊಟ್ಟವರಲ್ಲಿ ಮಮತಾ ಬ್ಯಾನರ್ಜಿಗೆ ಅಗ್ರಸ್ಥಾನ!

ಲೋಕಸಭೆ ಚುನಾವಣೆಯಲ್ಲಿ 23 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ಹೊಂದಿದ್ದ ಬಿಜೆಪಿ 18 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ವಿಧಾನಸಭೆ ಚುನಾವಣೆಯಲ್ಲಿ 250 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದ್ದು, ಬಹುಮತ ಪಡೆದು ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿದೆ.

ಆದರೆ ಪಶ್ಚಿಮ ಬಂಗಾಳದಲ್ಲಿ ಮತ್ತೆ ತನ್ನದೇ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ತೃಣಮೂಲ ಕಾಂಗ್ರೆಸ್ ವಿಶ್ವಾಸ ವ್ಯಕ್ತಪಡಿಸಿದೆ.

English summary
BJP is preparing for West Bengal assembly elections which will be held in 2021. BJP is implementing some strategy to win at least 250 seats in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X