ಭವಾನಿಪುರ ಉಪ ಚುನಾವಣೆ; ಮಮತಾ ಬ್ಯಾನರ್ಜಿ ಜಯಭೇರಿ

ಕೋಲ್ಕತ್ತಾ, ಅಕ್ಟೋಬರ್ 03; ಇಡೀ ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣೆಯಲ್ಲಿ 58 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಗೆಲವು ಸಾಧಿಸಿದ್ದಾರೆ.

ಫಲಿತಾಂಶ ಪ್ರಕಟವಾದ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ, "ನಾನು ಭವಾನಿಪುರ ಉಪ ಚುನಾವಣೆಯಲ್ಲಿ 58,832 ಮತಗಳ ಅಂತರದಲ್ಲಿ ಗೆದ್ದಿದ್ದೇನೆ. ಪ್ರತಿ ವಾರ್ಡ್‌ನಲ್ಲಿಯೂ ಗೆಲುವು ಸಾಧಿಸಿದ್ದೇನೆ. ಇಲ್ಲಿರುವ ಶೇ 46ರಷ್ಟು ಜನರು ಬೆಂಗಾಲಿಗಳಲ್ಲ. ಆದರೂ ಅವರೆಲ್ಲಾ ನನಗೆ ಮತ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಆರಂಭವಾದ ಬಳಿಕ ಕೇಂದ್ರ ಸರ್ಕಾರ ನಮ್ಮನ್ನು ಅಧಿಕಾರದಿಂದ ಕೆಳಗಿಳಿಸಲು ಷಡ್ಯಂತ್ರ ಮಾಡಿದೆ. ನಮಗೆ ಮತ ನೀಡಿದ ಜನರಿಗೆ ನಾನು ಅಭಾರಿಯಾಗಿದ್ದೇನೆ" ಎಂದರು.

ಮಮತಾ ಎದುರಾಳಿಯಾಗಿದ್ದ ಪ್ರಿಯಾಂಕಾ ಟಿಬ್ರೆವಾಲ್ 25 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಬಿಜೆಪಿ ಉಪ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ.

19ನೇ ಸುತ್ತು ಪೂರ್ಣ; ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ 19ನೇ ಸುತ್ತು ಪೂರ್ಣಗೊಂಡಿದೆ. 52,017 ಮತಗಳ ಮುನ್ನಡೆ ಪಡೆದ ಮಮತಾ ಬ್ಯಾನರ್ಜಿ.

4 ಸುತ್ತಿನ ಮತ ಎಣಿಕೆ ಬಾಕಿ; ಭವಾನಿಪುರ ಕ್ಷೇತ್ರದ 17ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ.
45,738 ಮತಗಳ ಮುನ್ನಡೆಯನ್ನು ಪಡೆದ ಮಮತಾ ಬ್ಯಾನರ್ಜಿ ಪಡೆದಿದ್ದಾರೆ. ಕೇವಲ 4 ಸುತ್ತಿನ ಮತ ಎಣಿಕೆ ಮಾತ್ರ ಬಾಕಿ ಇದೆ.

34 ಸಾವಿರ ಮತಗಳ ಮುನ್ನಡೆ; ಭವಾನಿಪುರ ಉಪ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ 11ನೇ ಸುತ್ತಿನ ಎಣಿಕೆ ಬಳಿಕ 34,000 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಭಾರೀ ಮುನ್ನಡೆ ಪಡೆದ ಮಮತಾ; ಭವಾನಿಪುರ ಉಪ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, 9ನೇ ಸುತ್ತು ಮುಕ್ತಾಯಗೊಂಡಿದೆ. ಮಮತಾ ಬ್ಯಾನರ್ಜಿ 28,825 ಮತಗಳ ಮುನ್ನಡೆ ಪಡೆದಿದ್ದಾರೆ. ಟಿಎಂಸಿ ಪಕ್ಷದ ಕಾರ್ಯಕರ್ತರ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

881 ಮತಗಳು; ಭವಾನಿಪುರ ಉಪ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ 3680 ಮತಗಳ ಮುನ್ನಡೆ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ 881 ಮತ ಪಡೆದಿದ್ದಾರೆ.

ಮಮತಾ ಮುನ್ನಡೆ; ಕೇಂದ್ರ ಚುನಾವಣಾ ಆಯೋಗ 10.30ಕ್ಕೆ ನೀಡಿದ ಮಾಹಿತಿಯಂತೆ 2 ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯ ಪ್ರಿಯಾಂಕಾ ಟಿಬ್ರೆವಾಲ್ ವಿರುದ್ಧ 2,377 ಮತಗಳ ಮುನ್ನಡೆಯನ್ನು ಪಡೆದುಕೊಂಡಿದ್ದಾರೆ

ಭಾನುವಾರ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಒಟ್ಟು 21 ರೌಂಡ್ ಎಣಿಕೆ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಾಗುವ ನಿರೀಕ್ಷೆ ಇದೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಗೆದ್ದು ಸರ್ಕಾರ ರಚನೆ ಮಾಡಿದೆ.

ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ನಂದಿಗ್ರಾಮದಲ್ಲಿ ಚುನಾವಣೆಯಲ್ಲಿ ಸೋಲು ಕಂಡ ಅವರು ನವೆಂಬರ್ 5ರೊಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿದೆ. ಆದ್ದರಿಂದ ಭವಾನಿಪುರ ಕ್ಷೇತ್ರದಲ್ಲಿ ಅವರು ಉಪ ಚುನಾವಣೆ ಕಣಕ್ಕಿಳಿದಿದ್ದಾರೆ.

Bhawanipur

ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್, ಸಿಪಿಐ(ಎಂ) ನಿಂದ ಶ್ರೀಜಿಬ್ ಬಿಸ್ವಾಸ್ ಅಭ್ಯರ್ಥಿಗಳು. ಕಾಂಗ್ರೆಸ್ ಪಕ್ಷ ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ. ಸೆಪ್ಟೆಂಬರ್ 30ರಂದು ಉಪ ಚುನಾವಣೆ ಮತದಾನ ನಡೆದಿತ್ತು.

ಮುಖ್ಯಮಂತ್ರಿಯಾಗಿರುವ ಮಮತಾ ಬ್ಯಾನರ್ಜಿ ಶಾಸಕರಾಗಿ ಆಯ್ಕೆಯಾಗಬೇಕು ಎಂಬ ಕಾರಣಕ್ಕೆ ಹಿಂದಿನ ಚುನಾವಣೆಯಲ್ಲಿ ಭವಾನಿಪುರದಲ್ಲಿ ಗೆದ್ದಿದ್ದ ಸೋವನ್‌ದೇವ್ ಚಟ್ಟೋಪಾಧ್ಯಾಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೆವಾಲ್ ಮತ್ತು ಮಮತಾ ಬ್ಯಾನರ್ಜಿ ನಡುವೆ ಪ್ರಬಲ ಪೈಪೋಟಿ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+