ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ 'ಬರ': ಸಯಂತಿಕಾ ಬ್ಯಾನರ್ಜಿ!

|
Google Oneindia Kannada News

ಕೋಲ್ಕತ್ತಾ, ಏಪ್ರಿಲ್ 05: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಅಭ್ಯರ್ಥಿಗಳ ಕೊರತೆ ಹೆಚ್ಚಾಗಿದೆ ಎಂದು ನಟಿ ಹಾಗೂ ಟಿಎಂಸಿ ಮುಖಂಡರಾದ ಸಯಂತಿಕಾ ಬ್ಯಾನರ್ಜಿ ಕಿಡಿ ಕಾರಿದ್ದಾರೆ.

ಬಿಜೆಪಿಯು ಸಾಮಾನ್ಯ ಜನರಿಗೆ ಪಶ್ಚಿಮ ಬಂಗಾಳದಲ್ಲಿ ಪಕ್ಷದ ಟಿಕೆಟ್ ನೀಡುತ್ತಿಲ್ಲ. ಅದರ ಬದಲಿಗೆ ಈಗಾಗಲೇ ಸಂಸದರಾಗಿರುವ ಬಿಜೆಪಿ ನಾಯಕರಿಗೆ ವಿಧಾನಸಭಾ ಚುನಾವಣೆಯ ಟಿಕೆಟ್ ನೀಡಲಾಗುತ್ತಿದೆ ಎಂದರು.

ಒಂದೇ ಕಾಲಿನಲ್ಲಿ ಬಂಗಾಳ ಗೆದ್ದು ಎರಡು ಕಾಲಿನಲ್ಲಿ ದೆಹಲಿ ಗೆಲ್ಲುವೆ; ಮಮತಾ ಬ್ಯಾನರ್ಜಿಒಂದೇ ಕಾಲಿನಲ್ಲಿ ಬಂಗಾಳ ಗೆದ್ದು ಎರಡು ಕಾಲಿನಲ್ಲಿ ದೆಹಲಿ ಗೆಲ್ಲುವೆ; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಗೆಲ್ಲುವುದಕ್ಕಾಗಿ ಬಿಜೆಪಿಯು ಹಾಲಿ ಸಂಸದರಿಗೆ ಟಿಕೆಟ್ ನೀಡುತ್ತಿದೆ. ಇದರ ಜೊತೆ ಸ್ಟಾರ್ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯು ಏನೇ ಕಸರತ್ತು ಮಾಡಿದರೂ, ರಾಜ್ಯದಲ್ಲಿ ಚುನಾವಣೆ ನಂತರ ಮತ್ತೊಮ್ಮೆ ಮಮತಾ ಬ್ಯಾನರ್ಜಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಯಂತಿಕಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

West Bengal: BJP MPs Contesting In MLA Polls Because Of Candidates Shortage

ಪಶ್ಚಿಮ ಬಂಗಾಳದಲ್ಲಿ 3ನೇ ಹಂತದ ಮತದಾನ:

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಎರಡು ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಏಪ್ರಿಲ್ 6ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.

English summary
West Bengal: BJP MPs Contesting In MLA Polls Because Of Candidates Shortage, Says TMC Leader Sayantika Banerjee.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X