ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪಚುನಾವಣೆ: ಮಮತಾ ವಿರುದ್ದ ಕಾಂಗ್ರೆಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವ ಸಾಧ್ಯತೆ

|
Google Oneindia Kannada News

ಕೋಲ್ಕತ್ತಾ, ಸೆಪ್ಟೆಂಬರ್‌ 06: ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಳಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರೀಕ್ಷೆಯಂತೆಯೇ ಭವಾನಿಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.ಆದರೆ ಸೆಪ್ಟೆಂಬರ್ 30ಕ್ಕೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭವಾನಿಪುರ ಕ್ಷೇತ್ರದಲ್ಲಿ ತನ್ನ ಯಾವುದೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದಿರುವ ಸಾಧ್ಯತೆ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಕೋವಿಡ್​-19 ಪ್ರಕರಣ ಕಡಿಮೆಯಾಗಿರುವ ಹಿನ್ನೆಲೆ ಚುನಾವಣಾ ಆಯೋಗ ಚುನಾವಣೆ ನಡೆಸಲು ಮುಂದಾಗಿದೆ. ಈ ಹಿನ್ನೆಲೆ ಪಶ್ಚಿಮ ಬಂಗಾಳದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯನ್ನು ಘೋಷಣೆ ಮಾಡಿದೆ. ಈ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್‌ ಈ ಮೂರು ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಿರೀಕ್ಷೆಯಂತೆಯೇ ಭವಾನಿಪುರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ತೃಣಮೂಲ ಕಾಂಗ್ರೆಸ್‌ ಸ್ಪರ್ಧೆಗೆ ಇಳಿಸಿದೆ.

ಪಶ್ಚಿಮ ಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ಭವಾನಿಪುರದಿಂದ ಕಣಕ್ಕೆಪಶ್ಚಿಮ ಬಂಗಾಳ ಉಪಚುನಾವಣೆ: ಮಮತಾ ಬ್ಯಾನರ್ಜಿ ಭವಾನಿಪುರದಿಂದ ಕಣಕ್ಕೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರ ಭವಾನಿಪುರದಲ್ಲಿ ಸ್ಪರ್ಧಿಸಿರಲಿಲ್ಲ. ಬದಲಾಗಿ ನಂದಿಗ್ರಾಮ ಕ್ಷೇತ್ರದಲ್ಲಿ ಸ್ಪರ್ಧಿಸಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲನ್ನುಂಡಿದ್ದರು. ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಸೋಲು ಕಂಡಿದ್ದರೂ ಕೂಡಾ ಟಿಎಂಸಿ ಭರ್ಜರಿ ವಿಜಯವನ್ನು ಕಂಡಿತ್ತು. ಈ ಹಿನ್ನೆಲೆ ಮಮತಾ ಬ್ಯಾನರ್ಜೀಯನ್ನೇ ಮತ್ತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಟಿಎಂಸಿ ಪಕ್ಷವು ಆಯ್ಕೆ ಮಾಡಿತ್ತು. ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾಗಿ ಮುಂದುವರಿಯಲು ಶಾಸಕರಾಗಿರುವುದು ಅನಿವಾರ್ಯವಾಗಿದೆ. ಹಾಗೆಯೇ ನವೆಂಬರ್ 5ರ ಒಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿದೆ.

West Bengal Bypoll: Congress unlikely to field candidate against Mamata in Bhabanipur

ಈ ಹಿನ್ನೆಲೆಯಿಂದಾಗಿ ಮಮತಾ ಬ್ಯಾನರ್ಜಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಲು ಭವಾನಿಪುರದ ಶಾಸಕ ಸ್ಥಾನಕ್ಕೆ ಶೋಭನ್‌ದೇವ್‌ ಚಟ್ಟೋಪಾಧ್ಯಾಯ ರಾಜೀನಾಮೆ ನೀಡಿದ್ದರು. ಸೆಪ್ಟೆಂಬರ್ 30ಕ್ಕೆ ಉಪಚುನಾವಣೆ ನಿಗದಿಯಾಗಿದೆ. ಈ ನಡುವೆ ಕಾಂಗ್ರೆಸ್‌ ಈ ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಲಾಗಿದೆ. ಬಿಜೆಪಿಯನ್ನು ಸೋಲಿಸಲು ಮಮತಾ ಬ್ಯಾನರ್ಜಿಯನ್ನು ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಮಾಡುವ ಹಿನ್ನೆಲೆ ಕಾಂಗ್ರೆಸ್‌ ಈಗ ಈ ಭವಾನಿಪುರ ಕ್ಷೇತ್ರದಲ್ಲಿ ತನ್ನ ಯಾವುದೇ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದಿರುವ ಸಾಧ್ಯತೆ ಇದೆ.

ಈ ನಡುವೆ ಬಿಜೆಪಿಯ ಕಾಲೆಳೆದಿರುವ ತೃಣಮೂಲ ಕಾಂಗ್ರೆಸ್‌ನ ನಾಯಕ ಮದನ್‌ ಮಿತ್ರಾ, "ಭವಾನಿಪುರ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯನ್ನು ಸ್ಪರ್ಧೆಗೆ ಇಳಿಸುವ ಮೂಲಕ ಬಿಜೆಪಿ ಸುಮ್ಮನ್ನೇ ತನ್ನ ಹಣವನ್ನು ಖರ್ಚು ಮಾಡಬಾರದು," ಎಂದು ವ್ಯಂಗ್ಯವಾಡಿದ್ದಾರೆ.

ಮತ್ತೆ ಟಿಎಂಸಿ ಸೇರಿದ ಬಿಜೆಪಿಯ ನಾಲ್ಕನೇ ಶಾಸಕ; ಕೇಸರಿ ಪಕ್ಷಕ್ಕೆ ಶಾಕ್!ಮತ್ತೆ ಟಿಎಂಸಿ ಸೇರಿದ ಬಿಜೆಪಿಯ ನಾಲ್ಕನೇ ಶಾಸಕ; ಕೇಸರಿ ಪಕ್ಷಕ್ಕೆ ಶಾಕ್!

"ಭವಾನಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸಲಿದ್ದಾರೆ. ಈ ಕ್ಷೇತ್ರದಲ್ಲಿ ನಿಮ್ಮ ಅಭ್ಯರ್ಥಿಯನ್ನು ಹಾಕುವ ಮೂಲಕ ನಿಮ್ಮ ಹಣವನ್ನು ಸುಮ್ಮನೇ ಹಾಳು ಮಾಡಬೇಡಿ," ಎಂದು ಬಿಜೆಪಿಗೆ ತೃಣಮೂಲ ಕಾಂಗ್ರೆಸ್‌ನ ನಾಯಕ ಮದನ್‌ ಮಿತ್ರಾ ಟಾಂಗ್‌ ನೀಡಿದ್ದಾರೆ.

ಇನ್ನುಳಿದ ಎರಡು ಕ್ಷೇತ್ರಗಳಾದ ಮುರ್ಷಿದಾಬಾದ್‌ನ ಜಂಗೀಪುರ ಕ್ಷೇತ್ರ ಹಾಗೂ ಸಮ್‌ಸೇರ್‌ಗಂಜ್ ಕ್ಷೇತ್ರದಲ್ಲೂ ಟಿಎಂಸಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಮುರ್ಷಿದಾಬಾದ್‌ನ ಜಂಗೀಪುರ ಕ್ಷೇತ್ರದಲ್ಲಿ ಮಾಜಿ ಸಚಿವ ಜಾಕಿರ್ ಹುಸೇನ್, ಸಮ್‌ಸೇರ್‌ಗಂಜ್ ಕ್ಷೇತ್ರದಿಂದ ಅಮಿರುಲ್ ಇಸ್ಲಾಂ ಕಣಕ್ಕೆ ಇಳಿಸಲಾಗಿದೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಟ್ವೀಟ್ ಮಾಡಿದೆ. ಈ ಎರಡೂ ಕ್ಷೇತ್ರಗಳ ಶಾಸಕರು ಕೋವಿಡ್‌ನಿಂದಾಗಿ ಸಾವನ್ನಪ್ಪಿದ್ದಾರೆ. ಹೀಗಾಗಿ ಉಪಚುನಾವಣೆ ನಡೆಯುತ್ತಿದೆ.

(ಒನ್‌ ಇಂಡಿಯಾ ಸುದ್ದಿ)

English summary
West Bengal Bypoll: Congress unlikely to field candidate against Mamata Banerje in Bhabanipur. Read on.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X