ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ನರೇಂದ್ರ ಮೋದಿಗೆ ನೋಟಿಸ್; ಮಮತಾ ಬ್ಯಾನರ್ಜಿ ತಿರುಗೇಟು!?

|
Google Oneindia Kannada News

ಕೋಲ್ಕತ್ತಾ, ಏಪ್ರಿಲ್ 08: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾದಲ್ಲಿ ನನ್ನ ವಿರುದ್ಧ 10 ಶೋಕಾಸ್ ನೋಟಿಸ್ ಜಾರಿಗೊಳಿಸಿದರೂ ಅಷ್ಟೊಂದು ಮುಖ್ಯ ಎನಿಸುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ದಮ್ಜೂರ್ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ನಾನು ಎಲ್ಲರೂ ಒಗ್ಗಟ್ಟಾಗಿ ಮತ ಚಲಾಯಿಸಿ ಎಂದು ಹೇಳುತ್ತಿದ್ದೇನೆ. ಇದರಲ್ಲಿ ಯಾವುದೇ ವಿಭಜನೆ ಮಾತು ಬಂದಿಲ್ಲ ಎಂದರು.

"ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪ್ರಚಾರಕ್ಕೆ ಅವಕಾಶ ನೀಡಿದರೆ ರಕ್ತಪಾತ"

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿನಿತ್ಯ ಹಿಂದೂ ಮುಸ್ಲಿಂ ಎಂಬು ಮಾತನಾಡುತ್ತಾರೆ. ಅವರ ವಿರುದ್ಧ ಎಷ್ಟು ನೋಟಿಸ್ ಜಾರಿಗೊಳಿಸಿದ್ದೀರಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನೆ ಮಾಡಿದ್ದಾರೆ.

ಎಲ್ಲ ಧರ್ಮೀಯರ ಪರವಾಗಿದ್ದೀನಿ ಎಂದ ದೀದಿ

ಎಲ್ಲ ಧರ್ಮೀಯರ ಪರವಾಗಿದ್ದೀನಿ ಎಂದ ದೀದಿ

ಚುನಾವಣಾ ಆಯೋಗ ನೀಡಿರುವ ನೋಟಿಸ್ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಂದಿಗ್ರಾಮ್ ಮುಸ್ಲಿಮರನ್ನು ಪಾಕಿಸ್ತಾನಿಗಳು ಎಂದು ಕರೆದವರ ವಿರುದ್ಧ ಎಷ್ಟು ನೋಟಿಸ್ ನೀಡಿದ್ದೀರಿ ಎಂದು ಪ್ರಶ್ನಿಸಿದರು. ಅಲ್ಲದೇ, ತಾವು ಎಲ್ಲ ಧರ್ಮೀಯರ ಪರವಾಗಿದ್ದೀನಿ ಎಂದು ಹೇಳಿದರು. ಹಿಂದೂ, ಮುಸ್ಲಿಂ, ಸಿಖ್, ಕ್ಪಿಶ್ಚಿಯನ್ ಹಾಗೂ ದಲಿತರ ಪರವಾಗಿಯೂ ಇದ್ದೇನೆ ಎಂದು ತಿರುಗೇಟು ನೀಡಿದರು.

ಚುನಾವಣಾ ಆಯೋಗದಿಂದ ಬುಧವಾರ ದೀದಿಗೆ ನೋಟಿಸ್ ಜಾರಿ

ಚುನಾವಣಾ ಆಯೋಗದಿಂದ ಬುಧವಾರ ದೀದಿಗೆ ನೋಟಿಸ್ ಜಾರಿ

ಒಂದು ಸಮುದಾಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಬುಧವಾರ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿತ್ತು. ಬಿಜೆಪಿ ನಿಯೋಗ ನೀಡಿರುವ ದೂರನ್ನು ಪರಿಗಣಿಸಿರುವ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದ್ದು, ಮುಂದಿನ 48 ಗಂಟೆಗಳಲ್ಲಿ ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಲಾಗಿತ್ತು.

ದೀದಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದ್ದೇಕೆ?

ದೀದಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದ್ದೇಕೆ?

ಕಳೆದ ಏಪ್ರಿಲ್ 3ರಂದು ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಮಮತಾ ಬ್ಯಾನರ್ಜಿ ಅವರು ಭಾಗವಹಿಸಿದ್ದರು. ಅಂದು ಮುಸ್ಲಿಂ ಸಮುದಾಯದ ಮತಗಳನ್ನು ಒಡೆಯುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಜನಪ್ರತಿನಿಧಿಗಳ ಕಾಯ್ದೆಯಡಿ ನಿಯಮದ ಉಲ್ಲಂಘನೆ ಆಗುತ್ತದೆ ಎಂದು ಚುನಾವಣಾ ಆಯೋಗವು ನೋಟಿಸ್ ನಲ್ಲಿ ತಿಳಿಸಿತ್ತು.

ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳ ದಿನಾಂಕ

ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳ ದಿನಾಂಕ

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಎರಡು ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮಾರ್ಚ್ 27ರಂದು ಮೊದಲ ಹಂತದ ಚುನಾವಣೆ, ಏಪ್ರಿಲ್ 1ರಂದು ಎರಡನೇ ಹಂತದ ಚುನಾವಣೆ ನಡೆದಿದೆ. ರಾಜ್ಯದಲ್ಲಿ 31 ವಿಧಾನಸಭಾ ಕ್ಷೇತ್ರಗಳಿಗೆ 3ನೇ ಹಂತದಲ್ಲಿ ಮತದಾನ ನಡೆದಿದೆ. ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.

English summary
West Bengal Assembly Election 2021: Chief Minister Mamata Banerjee First Reaction About Election Commission Notice
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X