Video: ಸಿಎಂ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು
ಕೋಲ್ಕತ್ತಾ, ಮಾರ್ಚ್.10: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ನಂದಿಗ್ರಾಮ್ ಕ್ಷೇತ್ರದ ಟಿಎಂಸಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ದಿನವೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿ ಬುಧವಾರ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಬೇಕಿತ್ತು. ಆದರೆ ಮಮತಾ ಬ್ಯಾನರ್ಜಿ ಅವರ ಕಾಲಿಗೆ ಗಾಯವಾದ ಹಿನ್ನೆಲೆ ಕೋಲ್ಕತ್ತಾದ ಎಸ್ಎಸ್ ಕೆಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ.
#WATCH West Bengal CM Mamata Banerjee brought to SSKM Hospital, Kolkata pic.twitter.com/8KVoBOPkHj
— ANI (@ANI) March 10, 2021
ಮಮತಾ ಬ್ಯಾನರ್ಜಿ ಅವರ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಇದರ ಬೆನ್ನಲ್ಲೇ ಘಟನೆಗೆ ಸಂಬಂಧಿಸಿದಂತೆ ವರದಿ ನೀಡಲು ಸ್ಥಳೀಯ ಆಡಳಿತಾಧಿಕಾರಿಗಳಿಗೆ ಚುನಾವಣಾ ಆಯೋಗವು ಸೂಚನೆ ನೀಡಿದೆ.

ಸಿಎಂ ಮೇಲೆ ಏನಿದು ಹಲ್ಲೆಯ ಪ್ರಕರಣ:
ಮೂಲಗಳ ಪ್ರಕಾರ, ಬಿರುಲಿಯಾ ಬಜಾರ್‌ನಲ್ಲಿ ಮಮತಾ ಬ್ಯಾನರ್ಜಿಯವರು ಸ್ಥಳೀಯ ಜನರೊಂದಿಗೆ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಕೆಲವು ದುಷ್ಕರ್ಮಿಗಳು ತಳ್ಳಿದ್ದರಿಂದ ಅವರ ಕಾಲಿಗೆ ಗಾಯವಾಗಿದೆ. ಇನ್ನೊಂದು ಕಡೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲಿನ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.












Click it and Unblock the Notifications