• search
  • Live TV
ಕೋಲ್ಕತಾ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಮತಾ ಬ್ಯಾನರ್ಜಿ ಕಿರಿಯ ಸಹೋದರ ಕೊರೊನಾ ಸೋಂಕಿಗೆ ಬಲಿ

|

ಕೋಲ್ಕತಾ, ಮೇ 15: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಕಿರಿಯ ಸಹೋದರ ಆಶಿಮ್ ಬ್ಯಾನರ್ಜಿಯವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಈ ನಡುವೆ ಶುಕ್ರವಾರ ಒಂದೇ ದಿನ ಪಶ್ಚಿಮ ಬಂಗಾಳದಲ್ಲಿ 20,846 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,94,802ಕ್ಕೆ ಏರಿಕೆಯಾಗಿದೆ. ಈ ನಡುವೆ 24 ಗಂಟೆಗಳಲ್ಲಿ ರಾಜ್ಯದಲ್ಲಿ 136 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಕೂಡ 12,993ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ವೈದ್ಯಕೀಯ ಆಕ್ಸಿಜನ್: 2 ದಿನದಲ್ಲಿ 2ನೇ ಬಾರಿ ಪ್ರಧಾನಿಗೆ ದೀದಿ ಪತ್ರವೈದ್ಯಕೀಯ ಆಕ್ಸಿಜನ್: 2 ದಿನದಲ್ಲಿ 2ನೇ ಬಾರಿ ಪ್ರಧಾನಿಗೆ ದೀದಿ ಪತ್ರ

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಆಶಿಮ್ ಬ್ಯಾನರ್ಜಿಯವಕು ಕೋಲ್ಕತಾದ ಮೆಡಿಕಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಭಾರತ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,26,098 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ವೇಳೆ 3,890 ಕೊವಿಡ್-19 ಸೋಂಕಿತರು ಸಾವನ್ನಪ್ಪಿದ್ದು, 3,53,299 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಶುಕ್ರವಾರದ ವೇಳೆಗೆ ಭಾರತದಲ್ಲಿ ಒಟ್ಟು 2,43,72,907 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,04,32,898 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 2,66,207 ಜನರು ಬಲಿಯಾಗಿದ್ದಾರೆ.

ಇದರ ಹೊರತಾಗಿ ದೇಶದಲ್ಲಿ ಇನ್ನೂ 36,73,802 ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ದೇಶದಲ್ಲಿ 18,04,57,579 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
West Bengal Chief Minister Mamata Banerjee’s younger brother Ashim Banerjee died due to COVID-19 on Saturday (May 15, 2021).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X