ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ: ಪಶ್ಚಿಮ ಬಂಗಾಳದಲ್ಲಿ ಮೂಕಪ್ರೇಕ್ಷಕನಾದ ಕಾಂಗ್ರೆಸ್

|
Google Oneindia Kannada News

ಕೋಲ್ಕತ್ತಾ, ಸೆಪ್ಟೆಂಬರ್ 11: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧೆಯ ಕಾರಣದಿಂದ ರಂಗೇರಿರುವ ಭವಾನಿಪುರ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಕಣದಿಂದ ಹಿಂದೆ ಸರಿಯುವ ಮೂಲಕ ಕಾಂಗ್ರೆಸ್ ಮತ್ತೆ ಮೂಕಪ್ರೇಕ್ಷಕನಾಗುತ್ತಿದೆ.

ಮತ ವಿಭಜನೆಯಿಂದ ಮತ್ತೆ ಬಿಜೆಪಿ ಮೇಲುಗೈ ಆಗುವುದನ್ನು ತಪ್ಪಿಸುವ ಸಲುವಾಗಿ, ಭವಾನಿಪುರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಅಭ್ಯರ್ಥಿಯನ್ನು ಹಾಕದಿರಲು ಕಾಂಗ್ರೆಸ್ ನಿರ್ಧರಿಸಿದೆ.

 ಭವಾನಿಪುರ ಉಪಚುನಾವಣೆ: ಮಮತಾ ಎದುರು ವಕೀಲೆ ಪ್ರಿಯಾಂಕ ಟಿಬ್ರೆವಾಲ್‌ ಕಣಕ್ಕೆ ಭವಾನಿಪುರ ಉಪಚುನಾವಣೆ: ಮಮತಾ ಎದುರು ವಕೀಲೆ ಪ್ರಿಯಾಂಕ ಟಿಬ್ರೆವಾಲ್‌ ಕಣಕ್ಕೆ

ರಾಷ್ಟ್ರೀಯ ರಾಜಕಾರಣದಲ್ಲಿ ಇದು ಬಿಜೆಪಿ ವಿರೋಧಿ ನಡೆಯಾಗಿ ಕಾಣಿಸಿದರೂ ಪಶ್ಚಿಮ ಬಂಗಾಳದಲ್ಲಿ ಇದು ಕಾಂಗ್ರೆಸ್‌ನ ಅಸ್ತಿತ್ವಕ್ಕೆ ಮತ್ತೊಂದು ಪೆಟ್ಟು ನೀಡುವ ಕ್ರಮವಾಗಿದೆ. ಈಗಾಗಲೇ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತೆ ಆಗಿದೆ.

West Bengal Congress Demotivated As Party Watches Bypoll Match From Gallery

ಆದರೆ ಈ ಉಪಚುನಾವಣೆಯಿಂದ ಹಿಂದೆ ಸರಿಯುವ ನಡೆಯು ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯ ಕೆಡಿಸುವ ಕ್ರಮವಾಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಸೆಪ್ಟೆಂಬರ್ 30ರಂದು ನಡೆಯಲಿರುವ ಭವಾನಿಪುರ ವಿಧಾನಸಭಾ ಉಪಚುನಾವಣೆಗೆ ಶುಕ್ರವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಾಮಪತ್ರ ಸಲ್ಲಿಸಿದ್ದು ದೀದಿಗೆ ಎದುರಾಳಿಯಾಗಿ ಬಿಜೆಪಿಯಿಂದ ಪ್ರಿಯಾಂಕಾ ಟಿಬ್ರೂವಾಲ್ ಸ್ಪರ್ಧಿಸಲಿದ್ದಾರೆ.

ಪ್ರಿಯಾಂಕಾ ಟಿಬ್ರೆವಾಲ್ ಮತ್ತು ಎಡರಂಗದ ಶ್ರೀಜಿಬ್ ಬಿಸ್ವಾಸ್ ವಿರುದ್ಧ ಮಮತಾ ಬ್ಯಾನರ್ಜಿ ಸ್ಪರ್ಧಿಸಲಿದ್ದಾರೆ. ಅಕ್ಟೋಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ.

ನಂದಿಗ್ರಾಮ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಈ ಉಪಚುನಾವಣೆಯಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

ಬ್ಯಾನರ್ಜಿ ಭವಾನಿಪುರದ ನಿವಾಸಿಯಾಗಿದ್ದು, 2011 ಮತ್ತು 2016ರಲ್ಲಿ ಎರಡು ಬಾರಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು.

ಈ ವರ್ಷದ ಏಪ್ರಿಲ್-ಮೇ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಿಂದ ಬಿಜೆಪಿ ನಾಯಕ ಮತ್ತು ಅವರ ಮಾಜಿ ಆಪ್ತರಾದ ಸುವೇಂದು ಅಧಿಕಾರಿಯ ವಿರುದ್ಧ ಮಮತಾ ಸೋತಿದ್ದರು.

ಕೋಲ್ಕೊತಾ ನಗರಪಾಲಿಕೆ ಚುನಾವಣೆಯಲ್ಲಿ 2015ರಲ್ಲಿ ಎಂಟಾಲಿ ವಾರ್ಡ್‌ ಹಾಗೂ 2021ರ ವಿಧಾನಸಭೆ ಚುನಾವಣೆಯಲ್ಲಿ ಎಂಟಾಲಿ ಕ್ಷೇತ್ರದಿಂದಲೇ ಸ್ಪರ್ಧಿಸಿದ್ದ ಅವರು, ಎರಡೂ ಚುನಾವಣೆಗಳಲ್ಲಿ ಟಿಎಂಸಿ ಅಭ್ಯರ್ಥಿ ವಿರುದ್ಧ ಪರಾಜಯ ಹೊಂದಿದ್ದರು. ಇದೀಗ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ಕಣಕ್ಕಿಳಿಸಿದೆ. ಈ ಮೂಲಕ ಪ್ರಿಯಾಂಕ ಪಶ್ಚಿಮ ಬಂಗಾಳದ ಸಿಎಂ ವಿರುದ್ಧ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಇನ್ನು ಮಮತಾ ಬ್ಯಾನರ್ಜಿ ವಿರುದ್ಧ ಪ್ರಿಯಾಂಕಾ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್‌ನ ಉಪ ಮುಖ್ಯ ಸಚೇತಕ ತಪಸ್‌ ರಾಯ್‌ ಅವರು, ''ಮುಖ್ಯಮಂತ್ರಿ ವಿರುದ್ಧ ಬಿಜೆಪಿಯಿಂದ ಯಾರೇ ನಿಂತರೂ ಠೇವಣಿ ಕಳೆದುಕೊಳ್ಳುವುದು ನಿಶ್ಚಿತ,'' ಎಂದಿದ್ದಾರೆ.

ಇನ್ನು ಭವಾನಿಪುರ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡದೇ ಇರಲು ಕಾಂಗ್ರೆಸ್‌ ತೀರ್ಮಾನಿಸಿದೆ. ಸಿಪಿಐ(ಎಂ) ವಕೀಲ ಶ್ರೀಜಿಬ್‌ ಬಿಸ್ವಾಸ್‌ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಿದೆ.

ವಿವಿಧ ಕಾರಣಗಳಿಂದ ತೆರವಾಗಿರುವ ರಾಜ್ಯಸಭೆಯ ಏಳು ಸ್ಥಾನಗಳಿಗೆ ಅ.4ರಂದು ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗವು ಗುರುವಾರ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ತಮಿಳುನಾಡಿನಲ್ಲಿಎರಡು ಹಾಗೂ ಪಶ್ಚಿಮ ಬಂಗಾಳ, ಅಸ್ಸಾಂ, ಮಧ್ಯಪ್ರದೇಶ, ಮಹಾರಾಷ್ಟ್ರ, ಪುದುಚೇರಿಗಳ ತಲಾ ಒಂದು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಕರ್ನಾಟಕ ರಾಜ್ಯಪಾಲರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿಥಾವರ್‌ಚಂದ್‌ ಗೆಹ್ಲೋಟ್‌ ರಾಜೀನಾಮೆ ನೀಡಿದ್ದರಿಂದ ಮಧ್ಯಪ್ರದೇಶದ ಸ್ಥಾನ ತೆರವಾಗಿದೆ. ಅಸ್ಸಾಂನಲ್ಲಿಬಿಜೆಪಿಯ ಕೇಂದ್ರ ಸಚಿವ ಸರ್ಬಾನಂದ ಸೊನೊವಾಲ್‌ ಅವರನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ.

2020 ರಲ್ಲಿ ಪಶ್ಚಿಮ ಬಂಗಾಳದ ಭಾರತೀಯ ಜನತಾ ಯುವ ಮೋರ್ಚಾದ ಉಪಾಧ್ಯಕ್ಷೆಯಾಗಿ ಪ್ರಿಯಾಂಕ ಟಿಬ್ರೆವಾಲ್‌ ಆಯ್ಕೆಯಾಗಿದ್ದಾರೆ. ಇನ್ನು 2021 ರಲ್ಲಿ ವಕೀಲೆ ಪ್ರಿಯಾಂಕ ಟಿಬ್ರೆವಾಲ್‌ ಇಂತಲಿ ಕ್ಷೇತ್ರದಲ್ಲಿ ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸಿದ್ದು ಆದರೆ ಟಿಎಂಸಿಯ ಸ್ವರ್ಣ ಕಮಲ್‌ ಸಹಾ ಎದುರು 58,257 ಮತಗಳ ಅಂತರದ ಸೋಲನ್ನುಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಭರ್ಜರಿ ಜಯವನ್ನು ಗಳಿಸಿದ ಬಳಿಕ ಮೂರನೇ ಬಾರಿಗೆ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರ ಭವಾನಿಪುರದಲ್ಲಿ ಸ್ಪರ್ಧಿಸಿರಲಿಲ್ಲ.

ಬದಲಾಗಿ ನಂದಿಗ್ರಾಮ ಕ್ಷೇತ್ರದಲ್ಲಿ ಸ್ಪರ್ಧಿಸಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲನ್ನುಂಡಿದ್ದರು. ಬಳಿಕ ಮಮತಾ ಬ್ಯಾನರ್ಜಿ ಮೇ 5ಕ್ಕೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಆದರೆ ನವೆಂಬರ್ 5 ರ ಒಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿದೆ

ಈ ಹಿನ್ನೆಲೆಯಿಂದಾಗಿ ಮಮತಾ ಬ್ಯಾನರ್ಜಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಲು ಭವಾನಿಪುರದ ಶಾಸಕ ಸ್ಥಾನಕ್ಕೆ ಶೋಭನ್‌ದೇವ್‌ ಚಟ್ಟೋಪಾಧ್ಯಾಯ ರಾಜೀನಾಮೆ ನೀಡಿದ್ದರು. ಸೆಪ್ಟೆಂಬರ್ 30ಕ್ಕೆ ಉಪಚುನಾವಣೆ ನಿಗದಿಯಾಗಿದ್ದು, ಮಮತಾ ಬ್ಯಾನರ್ಜಿ ವಿರುದ್ದ ಬಿಜೆಪಿಯಿಂದ ವಕೀಲೆ ಸ್ಪರ್ಧೆಗೆ ಇಳಿದಿದ್ದಾರೆ.

English summary
Even as all political parties in West Bengal are gearing up for the Bhabanipur bypoll, the Congress is going to watch the match from the galleries as the Grand Old Party hasn’t put its hat in the ring.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X