ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್-ಎಡಪಕ್ಷ ಸೀಟು ಹಂಚಿಕೆಗೆ ಸಭೆ

|
Google Oneindia Kannada News

ಕೋಲ್ಕತ್ತಾ, ಫೆಬ್ರವರಿ.15: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆೆಲೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಪ್ರದೇಶ ಕಾಂಗ್ರೆಸ್ ಸಮಿತಿ ಮತ್ತು ಎಡಪಕ್ಷಗಳ ಜಿಲ್ಲಾ ಘಟಕಗಳ ಸದಸ್ಯರೊಂದಿಗೆ ಸೋಮವಾರ ಮಹತ್ವದ ಸಭೆ ನಡೆಸಲಾಯಿತು.

ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಎಡಪಕ್ಷಗಳ ಜೊತೆಗೆ ಸೀಟು ಹಂಚಿಕೆ ಸೇರಿದಂತೆ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತು ಚರ್ಚೆ ನಡೆಸಲಾಯಿತು ಎಂದು ತಿಳಿದು ಬಂದಿದೆ.

ನಮ್ಮ ಆಟ ಈಗ ಶುರುವಾಗಿದೆ; ತೃಣಮೂಲ ಕಾಂಗ್ರೆಸ್‌ಗೆ ದಿಲೀಪ್ ಘೋಷ್ ಎಚ್ಚರಿಕೆನಮ್ಮ ಆಟ ಈಗ ಶುರುವಾಗಿದೆ; ತೃಣಮೂಲ ಕಾಂಗ್ರೆಸ್‌ಗೆ ದಿಲೀಪ್ ಘೋಷ್ ಎಚ್ಚರಿಕೆ

ಕಾಂಗ್ರೆಸ್ ಮತ್ತು ಎಡ ಪಕ್ಷಗಳಲ್ಲಿ ಯಾವುದಕ್ಕೆ ಎಷ್ಟು ಕ್ಷೇತ್ರಗಳನ್ನು ಬಿಟ್ಟುಕೊಡುವುದು ಎನ್ನುುವುದರ ಬಗ್ಗೆ ಮುಂದಿನ ವಾರ ನಡೆಯಲಿರುವ ಹಲವು ಸುತ್ತುಗಳ ಸಭೆಯ ನಂತರದಲ್ಲಿ ನಿರ್ಧಾರವಾಗಲಿದೆ. 293 ಕ್ಷೇತ್ರಗಳ ಪೈಕಿ 193 ವಿಧಾನಸಭಾ ಕ್ಷೇತ್ರಗಳ ಬಗ್ಗೆ ಈಗಾಗಲೇ ಎರಡು ಸುತ್ತಿನ ಸಭೆಯಲ್ಲಿ ಚರ್ಚಿಸಲಾಗಿದೆ.

West Bengal Congress To Hold Meeting Regarding Seat-Sharing And Election Preparedness

ಪಶ್ಚಿಮ ಬಂಗಾಳದಲ್ಲಿ ಈ ಹಿಂದಿನ ಮತದಾರರ ತೀರ್ಪು:

ಪಶ್ಚಿಮ ಬಂಗಾಳದಲ್ಲಿ ಇನ್ನು ಕೆಲವೇ ತಿಂಗಳುಗಳಲ್ಲಿ 294 ವಿಧಾನಸಭಾ ಕ್ಷೇತ್ರಗಳಿಗೆ 2021ರಲ್ಲೇ ಚುನಾವಣೆ ನಡೆಯಲಿದೆ. ಕಳೆದ ಬಾರಿ 2016ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 44, ಎಡಪಕ್ಷ 33, ಟಿಎಂಸಿ 211 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದರೆ, ಬಿಜೆಪಿ 3 ಸ್ಥಾನದಲ್ಲಿ ಗೆಲುವು ಸಾಧಿಸಿತ್ತು. ಆದರೆ ಇತ್ತೀಚಿಗೆ ನಡೆದ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ 18 ಅಭ್ಯರ್ಥಿಗಳು ಜಯ ಸಾಧಿಸಿದ್ದರು.

English summary
West Bengal Congress To Hold Meeting Regarding Seat-Sharing And Election Preparedness.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X