ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಆಯೋಗದ ನೋಟಿಸ್

ಕೋಲ್ಕತ್ತಾ, ಏಪ್ರಿಲ್ 07: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಒಂದು ಸಮುದಾಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದೆ.

ಬಿಜೆಪಿ ನಿಯೋಗ ನೀಡಿರುವ ದೂರನ್ನು ಪರಿಗಣಿಸಿರುವ ಚುನಾವಣಾ ಆಯೋಗ ನೋಟಿಸ್ ಜಾರಿಗೊಳಿಸಿದೆ. ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಮುಂದಿನ 48 ಗಂಟೆಗಳಲ್ಲಿ ಚುನಾವಣಾ ಆಯೋಗ ನೀಡಿರುವ ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ.

ಕಳೆದ ಏಪ್ರಿಲ್ 3ರಂದು ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಮಮತಾ ಬ್ಯಾನರ್ಜಿ ಅವರು ಭಾಗವಹಿಸಿದ್ದರು. ಅಂದು ಮುಸ್ಲಿಂ ಸಮುದಾಯದ ಮತಗಳನ್ನು ಒಡೆಯುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯು ಜನಪ್ರತಿನಿಧಿಗಳ ಕಾಯ್ದೆಯಡಿ ನಿಯಮದ ಉಲ್ಲಂಘನೆ ಆಗುತ್ತದೆ ಎಂದು ಚುನಾವಣಾ ಆಯೋಗವು ನೋಟಿಸ್ ನಲ್ಲಿ ತಿಳಿಸಿದೆ.

West Bengal: EC Notice To TMC Chief Mamata Banerjee For Allegedly Violating Model Code

ಪಶ್ಚಿಮ ಬಂಗಾಳದಲ್ಲಿ 3ನೇ ಹಂತದ ಚುನಾವಣೆ:

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಎರಡು ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮಾರ್ಚ್ 27ರಂದು ಮೊದಲ ಹಂತದ ಚುನಾವಣೆ, ಏಪ್ರಿಲ್ 1ರಂದು ಎರಡನೇ ಹಂತದ ಚುನಾವಣೆ ನಡೆದಿದೆ. ರಾಜ್ಯದಲ್ಲಿ 31 ವಿಧಾನಸಭಾ ಕ್ಷೇತ್ರಗಳಿಗೆ 3ನೇ ಹಂತದಲ್ಲಿ ಮತದಾನ ನಡೆದಿದೆ. ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+