ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್-ಎಡಪಕ್ಷಗಳ ನಡುವೆ ಸೀಟು ಹಂಚಿಕೆ ಅಂತಿಮ!

ಕೋಲ್ಕತ್ತಾ, ಫೆಬ್ರವರಿ.16: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಈಗಾಗಲೇ ತೀರ್ಮಾನ ಅಂತಿಮಗೊಳಿಸಲಾಗಿದೆ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್-ಎಡಪಕ್ಷಗಳ ಜಿಲ್ಲಾ ಘಟಕಗಳ ಸದಸ್ಯರೊಂದಿಗೆ ಸೋಮವಾರ ಮಹತ್ವದ ಸಭೆ ನಡೆಸಲಾಯಿತು. ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದು, ಅಬ್ಬಾಸ್ ಸಿದ್ದಿಕಿ ನೇತೃತ್ವದ ಇಂಡಿಯನ್ ಸೆಕ್ಯೂಲರ್ ಫ್ರೆಂಟ್ ಕೂಡಾ ಕಾಂಗ್ರೆಸ್ ಮತ್ತು ಎಡಪಕ್ಷಗಳ ಒಕ್ಕೂಟದ ಭಾಗವಾಗಿರಲಿದೆ ಎಂದರು.

2021ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಎಡಪಕ್ಷ ಮತ್ತು ಇಂಡಿಯನ್ ಸೆಕ್ಯೂಲರ್ ಫ್ರೆಂಟ್ ಪಕ್ಷಗಳು ಒಗ್ಗಟ್ಟಾಗಿ ಸ್ಪರ್ಧೆಗೆ ಇಳಿಯಲಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಚನ್ ಚೌಧರಿ ತಿಳಿಸಿದ್ದಾರೆ.

West Bengal Election: Abbas Siddiquis ISF, Secular Parties To Be Part Of In Left-Congress Alliance

ಪಶ್ಚಿಮ ಬಂಗಾಳದಲ್ಲಿ ಬದಲಾವಣೆ ಗಾಳಿ:

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಬಿಜೆಪಿ ಮತ್ತು ಟಿಎಂಸಿ ನಡುವಿನ ಹೋರಾಟದಂತೆ ಬಿಂಬಿಸಲಾಗುತ್ತಿದೆ. ರಾಜ್ಯದಲ್ಲಿ ಇದೀಗ ಬದಲಾವಣೆ ಗಾಳಿ ಬೀಸಿದೆ. ಕಾಂಗ್ರೆಸ್-ಎಡಪಕ್ಷಗಳು ಸಹ ಬಲವಾಗಿದ್ದು, ಈ ಬಾರಿ ರಾಜ್ಯದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ ಎಂದು ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇನ್ನು ಕೆಲವೇ ತಿಂಗಳುಗಳಲ್ಲಿ 294 ವಿಧಾನಸಭಾ ಕ್ಷೇತ್ರಗಳಿಗೆ 2021ರಲ್ಲೇ ಚುನಾವಣೆ ನಡೆಯಲಿದೆ. ಕಳೆದ ಬಾರಿ 2016ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 44, ಎಡಪಕ್ಷ 33, ಟಿಎಂಸಿ 211 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದರೆ, ಬಿಜೆಪಿ 3 ಸ್ಥಾನದಲ್ಲಿ ಗೆಲುವು ಸಾಧಿಸಿತ್ತು. ಆದರೆ ಇತ್ತೀಚಿಗೆ ನಡೆದ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ 18 ಅಭ್ಯರ್ಥಿಗಳು ಜಯ ಸಾಧಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+