ಪಶ್ಚಿಮ ಬಂಗಾಳದ ಪ್ರತಿ ಹಂತದ ಚುನಾವಣೆಯಲ್ಲೂ ಮೋದಿಯಿಂದ 2 ರ‍್ಯಾಲಿ?

ಕೋಲ್ಕತ್ತ, ಮಾರ್ಚ್ 04: ಪ್ರತಿಷ್ಠಿತ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಗಳ ಮೂಲಕ ಮತ ಪ್ರಮಾಣ ಏರಿಕೆಗೆ ಬಿಜೆಪಿ ಮುಂದಾಗಿದೆ.
ಒಟ್ಟು 8 ಹಂತಗಳಲ್ಲಿ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕ ಪ್ರಧಾನಿ ನರೇಂದ್ರ ಮೋದಿಯಿಂದ 12 ರಿಂದ 16 ಪ್ರಚಾರ ಸಭೆ ನಡೆಯುವ ಸಾಧ್ಯತೆ ಇದೆ.

ಪ್ರತಿ ಹಂತದ ಮತದಾನಕ್ಕೂ ಮುನ್ನ ತಲಾ 2 ಪ್ರಚಾರ ಸಭೆಯನ್ನು ಮೋದಿ ನಡೆಸುವ ಸಾಧ್ಯತೆ ಇದೆ, ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರಕ್ಕೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಯ ಪ್ರಚಾರ ಸಭೆಯ ವೇಳಾ ಪಟ್ಟಿ ಇನ್ನು ಅಧಿಕೃತವಾಗಿ ಪ್ರಕಟಗೊಂಡಿಲ್ಲ.

ಆದರೆ, ಬಿಜೆಪಿ ಮೂಲಗಳ ಪ್ರಕಾರ ಪ್ರತಿ ಹಂತದ ಮತದಾನಕ್ಕೂ ಮುನ್ನ ತಲಾ 2 ಪ್ರಚಾರ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಸಮ್ಮತಿಸಿದ್ದಾರೆ ಎನ್ನಲಾಗಿದೆ. ಬಿಹಾರ, ಉತ್ತರ ಪ್ರದೇಶ ಸೇರಿ ಇತರೆ ರಾಜ್ಯಗಳ ಚುನಾವಣೆ ಸಂದರ್ಭದಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಇದೇ ಮಾದರಿಯ ಚುನಾವಣಾ ಕಾರ್ಯತಂತ್ರ ರೂಪಿಸಿದ್ದರು.

West Bengal Elections 2021: PM Modi Likely To Address 16 Rallies

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 12 ಪ್ರಚಾರ ಸಭೆಗಳನ್ನು ನಡೆಸಿದ್ದರು. ಈ 12 ಪ್ರಚಾರ ಸಭೆಗಳ ಮೂಲಕ 110 ವಿಧಾನಸಭಾ ಕ್ಷೇತ್ರಗಳನ್ನು ಸಂಪರ್ಕಿಸಲಾಗಿತ್ತು.

ಇವುಗಳಲ್ಲಿ ಶೇ.56ರಷ್ಟು ಕ್ಷೇತ್ರಗಳನ್ನು ಬಿಜೆಪಿ ಗೆದ್ದಿತ್ತು, ಕಳೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೋದಿ 110 ಕ್ಷೇತ್ರಗಳಿಗೆ ಸಂಬಂಧಿಸಿ 23 ಪ್ರಚಾರ ಸಭೆಗಳನ್ನು ನಡೆಸಿದ್ದರು. ಅವುಗಳಲ್ಲಿ ಬಿಜೆಪಿ 99 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

ಹೀಗಾಗಿ ಪಶ್ಚಿಮ ಬಂಗಾಳದಲ್ಲೂ ಮೋದು ಜನಪ್ರಿಯತೆಯನ್ನು ಬಳಸಿಕೊಂಡು ಮತ ಯಾಚನೆಗೆ ಬಿಜೆಪಿ ತಯಾರಿ ನಡೆಸುತ್ತಿದೆ. ಮಾರ್ಚ್ 27ಕ್ಕೆ ಮೊದಲ ಹಂತದಲ್ಲಿ ಚುನಾವಣೆ ಆರಂಭಗೊಳ್ಳಲಿದೆ. ಏಪ್ರಿಲ್ 29ಕ್ಕೆ ಅಂತಿಮ ಹಂತದ ಚುನಾವಣೆ ನಡೆಯಲಿರುವುದಾಗಿ ಆಯೋಗ ತಿಳಿಸಿದೆ. ಮೇ 2ಕ್ಕೆ ಚುನಾವಣಾ ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+