ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳ ಚುನಾವಣೆ: ಸುವೇಂದು ಅಧಿಕಾರಿ ಸೇರಿ 57 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

|
Google Oneindia Kannada News

ಕೋಲ್ಕತ್ತಾ, ಮಾರ್ಚ್ 06: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಇಂದು ಬಿಜೆಪಿಯು 57 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು 57 ಅಭ್ಯರ್ಥಿಗಳ ಹೆಸರಿಗೆ ಒಪ್ಪಿಗೆ ಸೂಚಿಸಿದೆ. ಅದರಲ್ಲಿ ಭಾರತೀಯ ಕ್ರಿಕೆಟ್ ಮಾಜಿ ಆಟಗಾರ ಅಶೋಕ್ ದಿಂಡಾ, ಮಾಜಿ ಐಪಿಎಸ್ ಅಧಿಕಾರಿ ಭಾರತಿ ಘೋಷ್ ಸೇರಿದಂತೆ ಹಲವು ಅಭ್ಯರ್ಥಿಗಳಿದ್ದಾರೆ.

 West Bengal Elections: BJP Declares List Of 57 Candidates, Suvendu To Fight Mamata In Nandigram

ಬಿಜೆಪಿಯು ಶನಿವಾರ 57 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 11ರವರೆಗೆ ಎರಡು ಹಂತಗಳ ಚುನಾವಣೆ ನಡೆಯಲಿದೆ. ಒಟ್ಟು 8 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಹೊರಬೀಳಲಿದೆ.

ಪಶ್ಚಿಮ ಬಂಗಾಳ ಚುನಾವಣೆ: ಮಮತಾ ವಿರುದ್ಧ ಸುವೇಂದು ಅಧಿಕಾರಿ ಸ್ಪರ್ಧೆ?ಪಶ್ಚಿಮ ಬಂಗಾಳ ಚುನಾವಣೆ: ಮಮತಾ ವಿರುದ್ಧ ಸುವೇಂದು ಅಧಿಕಾರಿ ಸ್ಪರ್ಧೆ?

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ನಂದಿಗ್ರಾಮದಿಂದ ಸ್ಪರ್ಧಿಸಲಿದ್ದು, ಮಮತಾ ಆಪ್ತರಾಗಿದ್ದ , ಹಾಗೂ ಇತ್ತೀಚೆಗೆ ಟಿಎಂಸಿಯಿಂದ ಬಿಜೆಪಿಗೆ ಸೇರ್ಪಡೆಯಾಗಿರುವ ಸುವೇಂದು ಅಧಿಕಾರಿಗೆ ನಂದಿ ಗ್ರಾಮದಿಂದಲೇ ಟಿಕೆಟ್ ನೀಡಲಾಗಿದ್ದು, ಮಮತಾ ಹಾಗೂ ಸುವೇಂದು ಅಧಿಕಾರಿ ನಡುವೆ ಸ್ಪರ್ಧೆ ನಡೆಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಮಾರ್ಚ್ 27ಕ್ಕೆ ಮೊದಲ ಹಂತದಲ್ಲಿ ಚುನಾವಣೆ ಆರಂಭಗೊಳ್ಳಲಿದೆ. ಏಪ್ರಿಲ್ 29ಕ್ಕೆ ಅಂತಿಮ ಹಂತದ ಚುನಾವಣೆ ನಡೆಯಲಿರುವುದಾಗಿ ಆಯೋಗ ತಿಳಿಸಿದೆ. ಮೇ 2ಕ್ಕೆ ಚುನಾವಣಾ ಫಲಿತಾಂಶ ಹೊರಬೀಳಲಿದೆ.

ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಪುದುಚೇರಿ ವಿಧಾನಸಭೆಗಳಲ್ಲಿ ತಕ್ಷಣವೇ ನೀತಿ ಸಂಹಿತೆ ಜಾರಿಗೆ ಬರಲಿದೆ. 5 ರಾಜ್ಯಗಳಲ್ಲಿನ 824 ಕ್ಷೇತ್ರಗಳಲ್ಲಿ 18.68 ಕೋಟಿ ಮತದಾರರಿದ್ದಾರೆ. ಚುನಾವಣಾ ಆಯೋಗದ ಸಹಾಯವಾಣಿ ಸಂಖ್ಯೆ 1950 ಬಳಸಲು ಸೂಚಿಸಲಾಗಿದೆ. ಮತದಾನಕ್ಕೆ 1 ಗಂಟೆ ಹೆಚ್ಚಿನ ಅವಧಿ ನೀಡಲಾಗಿದೆ.

ಮೊಯ್ನಾ ಕ್ಷೇತ್ರದಿಂದ ಕ್ರಿಕೆಟಿಗ ಅಶೋಕ್ ದಿಂಡಾ ಅವರಿಗೆ ಹಾಗೂ ಡೆಬ್ರಾ ಕ್ಷೇತ್ರದಿಂದ ಮಾಜಿ ಐಪಿಎಸ್ ಅಧಿಕಾರಿ ಭಾರತಿ ಘೋಷ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ನಿನ್ನೆಯಷ್ಟೇ ಎಂಟು ಹಂತದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ 291 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಆಡಳಿತರೂಢ ಟಿಎಂಸಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಿಂದ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದೆ. ಇದರೊಂದಿಗೆ ನಂದಿಗ್ರಾಮ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ.

English summary
BJP on Saturday announced its list of candidates for the first two phases of the West Bengal Assembly elections to be held on March 27 and April 1. Elections to Bengal's 294-member Assembly will be held in eight phases with the results to be declared on May 2.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X