ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಚುನಾವಣೆ ಮತ್ತು ಕ್ಷೇತ್ರದ ಮಾಹಿತಿ

|
Google Oneindia Kannada News

ಕೋಲ್ಕತ್ತಾ, ಮಾರ್ಚ್ 30: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಎರಡನೇ ಹಂತದ ಚುನಾವಣೆ ಕದನ ಕುತೂಹಲವನ್ನು ಕೆರಳಿಸಿದೆ. ಮಾರ್ಚ್ 27ರಂದು 30 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಏಪ್ರಿಲ್ 1ರಂದು ಎರಡನೇ ಹಂತದಲ್ಲಿ 30 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಎರಡನೇ ಹಂತದ ಚುನಾವಣೆಯಲ್ಲಿ ಇಡೀ ರಾಜ್ಯದ ದೃಷ್ಟಿ ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದ ಮೇಲೆ ನೆಟ್ಟಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಇತ್ತೀಚಿಗಷ್ಟೇ ಟಿಎಂಸಿ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ನಡುವೆ ತೀವ್ರ ಪೈಪೋಟಿ ನಡೆದಿದೆ.

"ಮಮತಾ ಬ್ಯಾನರ್ಜಿ ಗೆದ್ದರೆ ಪಶ್ಚಿಮ ಬಂಗಾಳವೇ ಮಿನಿ ಪಾಕಿಸ್ತಾನ"!

ದಕ್ಷಿಣ 24 ಪರಗಣ, ಬಂಕುರಾ ಮತ್ತು ಪೂರ್ವ ಮೇದಿನಿಪುರ್ ಜಿಲ್ಲೆಯ 30 ವಿಧಾನಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. 30 ಕ್ಷೇತ್ರಗಳಲ್ಲಿ 171 ಅಭ್ಯರ್ಥಿಗಳು ಕಣದಲ್ಲಿದ್ದು, 152 ಪುರುಷ ಮತ್ತು 19 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. 30 ಕ್ಷೇತ್ರಗಳಲ್ಲಿ ಕೇವಲ ಶೇ.11ರಷ್ಟು ಮಹಿಳಾ ಅಭ್ಯರ್ಥಿಗಳು ಮಾತ್ರ ಕಣದಲ್ಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ವಿಧಾನಸಭಾ ಚುನಾವಣೆ ಮತ್ತು ಕ್ಷೇತ್ರಗಳ ವಿಶೇಷತೆ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.

ನಂದಿಗ್ರಾಮ್ ಕ್ಷೇತ್ರದ ಮೇಲೆ ಎಲ್ಲರ ಲಕ್ಷ್ಯ

ನಂದಿಗ್ರಾಮ್ ಕ್ಷೇತ್ರದ ಮೇಲೆ ಎಲ್ಲರ ಲಕ್ಷ್ಯ

ಪಶ್ಚಿಮ ಬಂಗಾಳ 2ನೇ ಹಂತದ ಚುನಾವಣೆಯಲ್ಲಿ ನಂದಿಗ್ರಾಮ್ ವಿಧಾನಸಭಾ ಕ್ಷೇತ್ರ ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಸ್ಪರ್ಧೆಯಿಂದಷ್ಟೇ ರಾಜ್ಯದ ಲಕ್ಷ್ಯ ಸೆಳೆದಿದೆ. 2011ರ ಚುನಾವಣೆಯಲ್ಲಿ ಟಿಎಂಸಿ ಅಧಿಕಾರಕ್ಕೆರಲು ಈ ಕ್ಷೇತ್ರವೇ ಪ್ರಮುಖ ಪಾತ್ರ ವಹಿಸಿತ್ತು. 2007ರಲ್ಲಿ ನಂದಿಗ್ರಾಮ್ ಕ್ಷೇತ್ರದಲ್ಲಿ ನಡೆದ ಭೂ-ಸ್ವಾಧೀನ ವಿರೋಧಿ ಕಾಯ್ದೆ ವಿರುದ್ಧದ ಹೋರಾಟದಲ್ಲಿ ಸುವೇಂದು ಅಧಿಕಾರಿ ಮುನ್ನಲೆಯಲ್ಲಿ ಕಾಣಿಸಿಕೊಂಡಿದ್ದರು. ಇದರ ಪ್ರತಿಫಲವಾಗಿ 34 ವರ್ಷಗಳಿಂದ ಅಧಿಕಾರದ ಚುಕ್ಕಾಣಿ ಹಿಡಿದ ಎಡಪಕ್ಷದ ಸರ್ಕಾರವನ್ನು ಹಿಂದಿಕ್ಕಿ 2011ರಲ್ಲಿ ಟಿಎಂಸಿ ಸರ್ಕಾರ ರಚಿಸುವಲ್ಲಿ ಯಶಸ್ವಿಯಾಯಿತು.

ಪ್ರಮುಖ ಅಭ್ಯರ್ಥಿಗಳಿಂದ ಗಮನ ಸೆಳೆದ ನಂದಿಗ್ರಾಮ್ ಕ್ಷೇತ್ರ

ಪ್ರಮುಖ ಅಭ್ಯರ್ಥಿಗಳಿಂದ ಗಮನ ಸೆಳೆದ ನಂದಿಗ್ರಾಮ್ ಕ್ಷೇತ್ರ

ನಂದಿಗ್ರಾಮ್ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಮಮತಾ ಬ್ಯಾನರ್ಜಿ, ಬಿಜೆಪಿ ಅಭ್ಯರ್ಥಿಯಾಗಿ ಸುವೇಂದು ಅಧಿಕಾರಿ ಸ್ಪರ್ಧೆಗೆ ಇಳಿದಿದ್ದಾರೆ. ಇಬ್ಬರು ಘಟಾನುಘಟಿ ಸ್ಪರ್ಧಿಗಳ ಮಧ್ಯೆ ಭಾರತೀಯ ಕಮ್ಯುನಿಷ್ಟ್ ಪಕ್ಷದ ಅಭ್ಯರ್ಥಿಯಾಗಿ ಮೀನಾಕ್ಷಿ ಮುಖರ್ಜಿ ಪೈಪೋಟಿ ನೀಡಲು ಕಣಕ್ಕಿಳಿದಿದ್ದಾರೆ.

ಬಿಜೆಪಿ ನಂದಿಗ್ರಾಮದ ಮತದಾರರಲ್ಲಿ ಭಯ ಹುಟ್ಟಿಸುತ್ತಿದೆ: ಮಮತಾ ಬ್ಯಾನರ್ಜಿಬಿಜೆಪಿ ನಂದಿಗ್ರಾಮದ ಮತದಾರರಲ್ಲಿ ಭಯ ಹುಟ್ಟಿಸುತ್ತಿದೆ: ಮಮತಾ ಬ್ಯಾನರ್ಜಿ

2019ರಲ್ಲಿ ಬಿಜೆಪಿಗೆ ಮಣೆ ಹಾಕಿದ ಮತದಾರ

2019ರಲ್ಲಿ ಬಿಜೆಪಿಗೆ ಮಣೆ ಹಾಕಿದ ಮತದಾರ

ಪಶ್ಚಿಮ ಬಂಗಾಳದಲ್ಲಿ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾರರು ಭಾರತೀಯ ಜನತಾ ಪಕ್ಷಕ್ಕೆ ಮಣೆ ಹಾಕಿದರು. 18 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದರು. ಅಲ್ಲದೇ, ಶೇ.40ರಷ್ಟು ಮತಗಳು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಚಲಾವಣೆಗೊಂಡಿದ್ದರು. ಈ ಅಂಕಿ-ಅಂಶಗಳಿಂದ ರಾಜ್ಯದಲ್ಲಿ ಬಿಜೆಪಿಯ ಕಡೆ ಮತದಾರರು ಒಲವು ತೋರುತ್ತಿದ್ದಾರೆಯೇ ಎಂಬ ಅನುಮಾನವನ್ನು ಹುಟ್ಟು ಹಾಕುವಂತಿತ್ತು.

ಟಿಎಂಸಿ ಪ್ರಾಬಲ್ಯ ಹೊಂದಿರುವ ದಕ್ಷಿಣದ 24 ಪರಗಣ

ಟಿಎಂಸಿ ಪ್ರಾಬಲ್ಯ ಹೊಂದಿರುವ ದಕ್ಷಿಣದ 24 ಪರಗಣ

ಎರಡನೇ ಹಂತದ ಚುನಾವಣೆಯಲ್ಲಿ ದಕ್ಷಿಣದ 24 ಪರಗಣ ಜಿಲ್ಲೆ ಕೂಡಾ ಒಂದಾಗಿದೆ. ಜಿಲ್ಲೆಯ 31 ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಅತಿಹೆಚ್ಚು ಪ್ರಾಬಲ್ಯವನ್ನು ಹೊಂದಿದೆ. ಅಲ್ಪಸಂಖ್ಯಾತ ಸಮುದಾಯವೇ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಈ ಜಿಲ್ಲೆಯಲ್ಲಿ 29 ರಿಂದ 30 ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿ ಅಭ್ಯರ್ಥಿಗಳೇ ಹಿಡಿತ ಸಾಧಿಸಿದ್ದಾರೆ.

ಪೂರ್ವ, ಪಶ್ಚಿಮ, ಮೇದಿನಿಪುರ ಜಿಲ್ಲೆಯಲ್ಲಿ ಟಿಎಂಸಿಯದ್ದೇ ಆಟ

ಪೂರ್ವ, ಪಶ್ಚಿಮ, ಮೇದಿನಿಪುರ ಜಿಲ್ಲೆಯಲ್ಲಿ ಟಿಎಂಸಿಯದ್ದೇ ಆಟ

ಪಶ್ಚಿಮ ಬಂಗಾಳದಲ್ಲಿ ಪೂರ್ವ ಮೇದಿನಿಪುರ ಮತ್ತು ಪಶ್ಚಿಮ ಮೇದಿನಿಪುರ ಜಿಲ್ಲೆಗಳಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವೇ ಹಿಡಿತವನ್ನು ಹೊಂದಿದೆ. ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಟಿಎಂಸಿ ಅಭ್ಯರ್ಥಿಗಳಿಗೆ ಜಿಲ್ಲೆಯ ಜನರು ಮತ ನೀಡಿ ಗೆಲ್ಲಿಸಿದ್ದಾರೆ. ಬಂಕುರಾ ಮತ್ತು ಪಶ್ಚಿಮ ಮೇದಿನಿಪುರ ಜಿಲ್ಲೆಯ ಬಹುತೇಕ ಕ್ಷೇತ್ರಗಳಿಗೆ ಮೊದಲ ಹಂತದಲ್ಲೇ ಚುನಾವಣೆ ನಡೆದಾಗಿದೆ.

ಪಶ್ಚಿಮ ಬಂಗಾಳದಲ್ಲಿ ದಾಖಲೆ ಪ್ರಮಾಣದ ಮತದಾನ

ಪಶ್ಚಿಮ ಬಂಗಾಳದಲ್ಲಿ ದಾಖಲೆ ಪ್ರಮಾಣದ ಮತದಾನ

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27ರಂದು ರಾಜ್ಯದ 30 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ. ಮೊದಲ ಹಂತದಲ್ಲಿ ಶೇ.79.79ರಷ್ಟು ಮತದಾನ ನಡೆದಿರುವುದಾಗಿ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಏಪ್ರಿಲ್ 1 ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್ 6, ಏಪ್ರಿಲ್ 10, ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.

English summary
West Bengal Elections: High Profile Constituencies To Look Out For In Second Phase Of Polling.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X