ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಹಾಗೂ ಪತ್ನಿಗೆ ಕೊವಿಡ್-19

|
Google Oneindia Kannada News

ಕೋಲ್ಕತ್ತಾ, ಮೇ 19: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಹೋಮ್ ಐಸೋಲೇಷನ್ ನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಬುದ್ಧದೇವ್ ಭಟ್ಟಾಚಾರ್ಯ ಅವರ ಪತ್ನಿ ಮೀರಾ ಭಟ್ಟಾಚಾರ್ಯ ಅವರಿಗೂ ಸಹ ಕೊವಿಡ್-19 ಸೋಂಕು ಪತ್ತೆಯಾಗಿದ್ದು, ಮಂಗಳವಾರ ಸಂಜೆ ಅವರನ್ನು ಕೋಲ್ಕತ್ತಾದ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಮುಂದಿನ 2 ವಾರಗಳಲ್ಲಿ ಈ ರಾಜ್ಯಗಳಲ್ಲಿ ಹೆಚ್ಚಾಗಲಿದೆಯಂತೆ ಕೊರೊನಾ ಪ್ರಕರಣಮುಂದಿನ 2 ವಾರಗಳಲ್ಲಿ ಈ ರಾಜ್ಯಗಳಲ್ಲಿ ಹೆಚ್ಚಾಗಲಿದೆಯಂತೆ ಕೊರೊನಾ ಪ್ರಕರಣ

ಮಂಗಳವಾರ ಬೆಳಗ್ಗೆ ಬುದ್ಧದೇವ್ ಭಟ್ಟಾಚಾರ್ಯ ಮತ್ತು ಅವರ ಪತ್ನಿ ಮೀರಾ ಭಟ್ಟಾಚಾರ್ಯ ಅವರ ಮಾದರಿ ಸಂಗ್ರಹಿಸಲಾಗಿದ್ದು, ಕೊವಿಡ್-19 ತಪಾಸಣೆ ನಡೆಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ. ವೈದ್ಯರ ತಂಡವು ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡುತ್ತಿದೆ ಎಂದು ಮೂಲಗಳು ತಿಳಿಸಿವೆ.

West Bengal Ex-CM Buddhadeb Bhattacharya And His Wife Test Positive For COVID-19

ಪಶ್ಚಿಮ ಬಂಗಾಳದಲ್ಲಿ ಕೊರೊನಾವೈರಸ್:

ರಾಜ್ಯದಲ್ಲಿ ಒಂದೇ ದಿನ 19,428 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 11,71,861ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 145 ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದು, ಈವರೆಗೂ 13,576 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 1,31,793 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.

English summary
West Bengal Ex-CM Buddhadeb Bhattacharya And His Wife Test Positive For COVID-19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X