ಜುಲೈ 31ರ ತನಕ ಲಾಕ್ ಡೌನ್ ವಿಸ್ತರಣೆ; ಮೆಟ್ರೋ, ರೈಲು ಇಲ್ಲ
ಕೋಲ್ಕತ್ತಾ, ಜೂನ್ 24 : ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಜಾರಿಯಲ್ಲಿದೆ. ಪಶ್ಚಿಮ ಬಂಗಾಳ ಸರ್ಕಾರ ಜುಲೈ 31ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
Recommended Video
ಬುಧವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಚೇರಿಯಿಂದ ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದೆ. ಜುಲೈ 31ರ ತನಕ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಈ ಅವಧಿಯಲ್ಲಿ ಕೋಲ್ಕತ್ತಾದಲ್ಲಿ ಮೆಟ್ರೋ ರೈಲುಗಳ ಸಂಚಾರ ಇರುವುದಿಲ್ಲ. ರಾಜ್ಯದ ಇತರೆ ಜಿಲ್ಲೆಗಳಲ್ಲಿ ರೈಲುಗಳ ಸಂಚಾರ ಇರುವುದಿಲ್ಲ. ಶಾಲೆ ಮತ್ತು ಕಾಲೇಜುಗಳು ಬಾಗಿಲು ತೆರೆಯುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೊರೊನಾ ವೈರಸ್ ಸೋಂಕಿತರು ಇರುವ ಪ್ರದೇಶಗಳಲ್ಲಿ ಮಾತ್ರ ರಾಜ್ಯದಲ್ಲಿ ಈಗ ಲಾಕ್ ಡೌನ್ ಜಾರಿಯಲ್ಲಿದೆ. ಅದು ಜೂನ್ 30ರ ತನಕ ಜಾರಿಯಲ್ಲಿರುತ್ತದೆ.
ಕೇಂದ್ರ ಗೃಹ ಇಲಾಖೆ ಘೋಷಣೆ ಮಾಡಿರುವ 5ನೇ ಹಂತದ ಲಾಕ್ ಡೌನ್ (ಅನ್ ಲಾಕ್ 1) ಜೂನ್ 30ರಂದೇ ಅಂತ್ಯಗೊಳ್ಳಲಿದೆ. ಜುಲೈ 1 ರಿಂದ 31ರ ತನಕ ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ಜಾರಿಯಲ್ಲಿ ಇರುತ್ತದೆ.
ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 14,728. 580 ಜನರು ಇದುವರೆಗೂ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 9,218.












Click it and Unblock the Notifications