ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 31ರ ತನಕ ಲಾಕ್ ಡೌನ್ ವಿಸ್ತರಣೆ; ಮೆಟ್ರೋ, ರೈಲು ಇಲ್ಲ

|
Google Oneindia Kannada News

ಕೋಲ್ಕತ್ತಾ, ಜೂನ್ 24 : ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಜಾರಿಯಲ್ಲಿದೆ. ಪಶ್ಚಿಮ ಬಂಗಾಳ ಸರ್ಕಾರ ಜುಲೈ 31ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

Recommended Video

ಮೋದಿಯನ್ನು ಹೊಗಳಿದ ಚೀನಾ | China Praising Narendra Modi | Oneindia Kannada

ಬುಧವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಚೇರಿಯಿಂದ ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದೆ. ಜುಲೈ 31ರ ತನಕ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್ ಆಗಿರುವ ಪ್ರದೇಶಗಳು? ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್ ಆಗಿರುವ ಪ್ರದೇಶಗಳು?

West Bengal Extended Lock Down Till July 31

ಈ ಅವಧಿಯಲ್ಲಿ ಕೋಲ್ಕತ್ತಾದಲ್ಲಿ ಮೆಟ್ರೋ ರೈಲುಗಳ ಸಂಚಾರ ಇರುವುದಿಲ್ಲ. ರಾಜ್ಯದ ಇತರೆ ಜಿಲ್ಲೆಗಳಲ್ಲಿ ರೈಲುಗಳ ಸಂಚಾರ ಇರುವುದಿಲ್ಲ. ಶಾಲೆ ಮತ್ತು ಕಾಲೇಜುಗಳು ಬಾಗಿಲು ತೆರೆಯುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಜೂನ್ 30ರವರೆಗೆ ಲಾಕ್‌ಡೌನ್ ವಿಸ್ತರಿಸಿದ ಮಮತಾ ಬ್ಯಾನರ್ಜಿಪಶ್ಚಿಮ ಬಂಗಾಳದಲ್ಲಿ ಜೂನ್ 30ರವರೆಗೆ ಲಾಕ್‌ಡೌನ್ ವಿಸ್ತರಿಸಿದ ಮಮತಾ ಬ್ಯಾನರ್ಜಿ

ಕೊರೊನಾ ವೈರಸ್ ಸೋಂಕಿತರು ಇರುವ ಪ್ರದೇಶಗಳಲ್ಲಿ ಮಾತ್ರ ರಾಜ್ಯದಲ್ಲಿ ಈಗ ಲಾಕ್ ಡೌನ್ ಜಾರಿಯಲ್ಲಿದೆ. ಅದು ಜೂನ್ 30ರ ತನಕ ಜಾರಿಯಲ್ಲಿರುತ್ತದೆ.

ಅಂಫಾನ್ ಚಂಡಮಾರುತದಿಂದ ಪಶ್ಚಿಮ ಬಂಗಾಳಕ್ಕೆ ಆದ ನಷ್ಟವೆಷ್ಟು? ಅಂಫಾನ್ ಚಂಡಮಾರುತದಿಂದ ಪಶ್ಚಿಮ ಬಂಗಾಳಕ್ಕೆ ಆದ ನಷ್ಟವೆಷ್ಟು?

ಕೇಂದ್ರ ಗೃಹ ಇಲಾಖೆ ಘೋಷಣೆ ಮಾಡಿರುವ 5ನೇ ಹಂತದ ಲಾಕ್ ಡೌನ್ (ಅನ್ ಲಾಕ್ 1) ಜೂನ್ 30ರಂದೇ ಅಂತ್ಯಗೊಳ್ಳಲಿದೆ. ಜುಲೈ 1 ರಿಂದ 31ರ ತನಕ ಪಶ್ಚಿಮ ಬಂಗಾಳದಲ್ಲಿ ಲಾಕ್ ಡೌನ್ ಜಾರಿಯಲ್ಲಿ ಇರುತ್ತದೆ.

ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 14,728. 580 ಜನರು ಇದುವರೆಗೂ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 9,218.

English summary
West Bengal has been extended lock down till July 31, 2020. During this time schools and colleges will stay shut and train and metro services will not run.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X