ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್ ಡೌನ್ ವಿಸ್ತರಣೆ ಮಾಡಿ; ಕೆಲವು ವಿನಾಯಿತಿ ನೀಡಿದ ಮಮತಾ ಬ್ಯಾನರ್ಜಿ

|
Google Oneindia Kannada News

ಕೋಲ್ಕತ್ತಾ, ಮೇ 18 : ಕೊರೊನಾ ಹರಡದಂತೆ ಜಾರಿಗೊಳಿಸುವ ಲಾಕ್ ಡೌನ್‌ ಅನ್ನು ಪಶ್ಚಿಮ ಬಂಗಾಳದಲ್ಲಿ ಮೇ 31ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೆ ದಾಖಲಾದ ಕೊರೊನಾ ಪ್ರಕರಣಗಳ ಸಂಖ್ಯೆ 2677.

ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದರು. ಹಾಗೆಯೇ ಲಾಕ್ ಡೌನ್ ನಿಯಮದಲ್ಲಿ ಕೆಲವೊಂದು ವಿನಾಯಿತಿಗಳನ್ನು ನೀಡಲಾಗಿದೆ ಎಂದರು.

ಪಶ್ಚಿಮ ಬಂಗಾಳದಲ್ಲಿ ಲಾಕ್‌ಡೌನ್‌ ವಿನಾಯಿತಿ, ಏನೆಲ್ಲ ಇರುತ್ತೆ?ಪಶ್ಚಿಮ ಬಂಗಾಳದಲ್ಲಿ ಲಾಕ್‌ಡೌನ್‌ ವಿನಾಯಿತಿ, ಏನೆಲ್ಲ ಇರುತ್ತೆ?

ರಾಜ್ಯದಲ್ಲಿ ಖಾಸಗಿ ಕಂಪನಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಒಂದು ವೇಳೆ ಖಾಸಗಿ ಕಂಪನಿಗಳು ಮಾಲ್‌ನಲ್ಲಿ ಕಚೇರಿ ಹೊಂದಿದ್ದರೂ ಶೇ 50ರಷ್ಟು ಸಿಬ್ಬಂದಿ ಜೊತೆ ಕೆಲಸ ಮಾಡಬಹುದು. ಒಂದು ದಿನ ಶೇ 50 ಮತ್ತೊಂದು ದಿನ ಉಳಿದ ಐವತ್ತರಷ್ಟು ಸಿಬ್ಬಂದಿ ಕೆಲಸ ಮಾಡಬೇಕು.

ಪಾಕಿಸ್ತಾನದ ಫೋಟೋ ಬಳಸಿ ಪಶ್ಚಿಮ ಬಂಗಾಳದ ಹಿಂಸಾಚಾರಕ್ಕೆ ಬಣ್ಣ ಪಾಕಿಸ್ತಾನದ ಫೋಟೋ ಬಳಸಿ ಪಶ್ಚಿಮ ಬಂಗಾಳದ ಹಿಂಸಾಚಾರಕ್ಕೆ ಬಣ್ಣ

 West Bengal Extends COVID 19 Lock Down Till May 31

ಸಲೂನ್‌ಗಳನ್ನು ತೆರೆಯಲು ಸಹ ಅನುಮತಿ ನೀಡಲಾಗಿದೆ. ಆರು ಜನರಿಗೆ ಕಟಿಂಗ್, ಶೇವಿಂಗ್ ಮಾಡಿದ ಬಳಿಕ ಉಪಕರಣಗಳನ್ನು ಸ್ಯಾನಿಟೈಸ್ ಮಾಡಬೇಕು ಎಂದು ಷರತ್ತಿ ವಿಧಿಸಲಾಗಿದೆ. ಕ್ರೀಡಾ ಚಟುವಟಿಕೆ ಆರಂಭಿಸಲು ಅನುಮತಿ ನೀಡಲಾಗಿದೆ. ಆದರೆ, ಜನರು ಸೇರುವಂತಿಲ್ಲ.

ಪಶ್ಚಿಮ ಬಂಗಾಳಕ್ಕೆ ವಿಮಾನ ಸೇವೆ ಬೇಡ; ಮಮತಾ ಪತ್ರ ಪಶ್ಚಿಮ ಬಂಗಾಳಕ್ಕೆ ವಿಮಾನ ಸೇವೆ ಬೇಡ; ಮಮತಾ ಪತ್ರ

ಹೋಟೆಲ್‌ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಆದರೆ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಕಡ್ಡಾಯವಾಗಿದೆ. ಅಂತರರಾಜ್ಯ ಬಸ್‌ಗಳ ಸಂಚಾರಕ್ಕೂ ಅವಕಾಶವನ್ನು ನೀಡಲಾಗಿದೆ.

"ಪಶ್ಚಿಮ ಬಂಗಾಳದಲ್ಲಿ ನಾವು ಕರ್ಫ್ಯೂ ಜಾರಿಗೊಳಿಸುತ್ತಿಲ್ಲ. ಆದರೆ, ಲಾಕ್ ಡೌನ್ ಮೇ 31ರ ತನಕ ಜಾರಿಯಲ್ಲಿ ಇರುತ್ತದೆ. ಕೆಲವು ವಿನಾಯಿತಿಗಳು ಸಹ ಸಿಗಲಿವೆ" ಎಂದು ಮಮತಾ ಬ್ಯಾನರ್ಜಿ ಹೇಳಿದರು.

English summary
West Bengal CM Mamata Banerjee announced that lock down extended till May 31, 2020. Some relaxation in lock down in the state
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X