ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಸರ್ಕಾರ

ಕೋಲ್ಕತ್ತಾ, ಏಪ್ರಿಲ್ 13 : ಪಶ್ಚಿಮ ಬಂಗಾಳದಲ್ಲಿ ಭಾನುವಾರ ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.

ರಾಜ್ಯದಲ್ಲಿ ಇದುವರೆಗೂ 152 ಕೊರೊನಾ ಪ್ರಕರಣಗಳು ದಾಖಲಾಗಿವೆ. 7 ಜನರು ಇದುವರೆಗೂ ಮೃತಪಟ್ಟಿದ್ದಾರೆ. ಭಾನುವಾರ ಯಾವುದೇ ಹೊಸ ಪ್ರಕರಣಗಳು ದಾಖಲಾಗದಿದ್ದರೂ ಇಬ್ಬರು ರೋಗಿಗಳು ಸಾವನ್ನಪ್ಪಿದ್ದಾರೆ. ಸೋಂಕು ಹರಡದಂತೆ ತಡೆಯಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಪಶ್ಚಿಮ ಬಂಗಳಾ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಜೀವ್ ಸಿನ್ಹಾ ಭಾನುವಾರ ಸಂಜೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಹಲವು ರಾಜ್ಯಗಳು ಸಾರ್ವಜನಿಕ ಸ್ಥಳದಲ್ಲಿ ಸಂಚಾರ ನಡೆಸುವವರು ಮಾಸ್ಕ್ ಧರಿಸಬೇಕು ಎಂದು ಆದೇಶ ನೀಡಿದೆ.

West Bengal Govt Orders Wearing Masks Mandatory

ಬಾಯಿ ಮತ್ತು ಮೂಗು ಮುಚ್ಚುವಂತಹ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳದಲ್ಲಿ ಸಂಚಾರ ನಡೆಸುವಾಗ ಮಾಸ್ಕ್ ಇಲ್ಲವಾದಲ್ಲಿ ದುಪ್ಪಟ್ಟಾ, ಕರವಸ್ತ್ರ ಕಟ್ಟಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಕೊರೊನಾ ಸೋಂಕಿತರ ಸಂಖ್ಯೆಯ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ಗೊಂದಲ ಉಂಟಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 134 ಮಾತ್ರ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ.

ರಾಜ್ಯ ಸರ್ಕಾರದ ಅಧೀನದಲ್ಲಿರುವ ಆಸ್ಪತ್ರೆಯ 22 ಸಿಬ್ಬಂದಿಗಳು ಕ್ವಾರಂಟೈನ್‌ನಲ್ಲಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+