ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳದಲ್ಲಿ ಕಾನೂನು ಸಚಿವರಿಂದಲೇ ಕಾನೂನು ಉಲ್ಲಂಘನೆ!

|
Google Oneindia Kannada News

ಕೋಲ್ಕತ್ತಾ, ಆಗಸ್ಟ್.24: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಜನಪ್ರತಿನಿಧಿಗಳೇ ಪಾಲನೆ ಮಾಡುತ್ತಿಲ್ಲ.

Recommended Video

ದುಬೈನ ಕೋಣೆಗಳಲ್ಲಿ ಬಂಧಿಯಾದ RCB ಆಟಗಾರರು | Oneindia Kannada

ಪಶ್ಚಿಮ ಬಂಗಾಳದಲ್ಲಿ ಒಂದು ಕಡೆ ಪ್ರತಿನಿತ್ಯ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಇಂಥ ಸಂದಿಗ್ಧ ಸ್ಥಿತಿಯಲ್ಲೂ ರಾಜ್ಯದ ಕಾನೂನು ಸಚಿವ ಮೊಲೊಯ್ ಘಟಕ್ ಅವರೇ ಕಾನೂನು ಉಲ್ಲಂಘನೆ ಮಾಡಿದ್ದಾರೆ.

West Bengal Law Minister Violated The Covid-19 Rules

ಪ.ಬಂಗಾಳದಲ್ಲಿ ಟಿವಿ ನೋಡಿದರೆ, ಸಂಗೀತ ಕೇಳಿದರೆ, ಕೇರಂ ಆಡಿದರೆ ದಂಡಪ.ಬಂಗಾಳದಲ್ಲಿ ಟಿವಿ ನೋಡಿದರೆ, ಸಂಗೀತ ಕೇಳಿದರೆ, ಕೇರಂ ಆಡಿದರೆ ದಂಡ

ಭಾನುವಾರ ಅಸನ್ಸೋಲ್ ಪ್ರದೇಶದ ರೈಲಪಾರ್ ಪ್ರದೇಶದಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ನೂರಾರು ಸಂಖ್ಯೆಯಲ್ಲಿ ನೆರೆದ ವಿದ್ಯಾರ್ಥಿಗಳು ಮತ್ತು ಪೋಷಕರ ನಡುವೆ ಸಾಮಾಜಿಕ ಅಂತರವೇ ಕಂಡು ಬರಲಿಲ್ಲ.

ಕಾನೂನು ಸಚಿವರಿಂದಲೇ ಕಾನೂನಿನ ಸ್ಪಷ್ಟ ಉಲ್ಲಂಘನೆ:

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಕಾನೂನು ಸಚಿವ ಮೊಲೊಯ್ ಘಟಕ್ ಅವರು ಕಾನೂನಿನ ಸ್ಪಷ್ಟ ಉಲ್ಲಂಘನೆ ಮಾಡಿದ್ದಾರೆ. ನೂರಾರು ಸಂಖ್ಯೆಯಲ್ಲಿ ಪೋಷಕರನ್ನು ಒಂದೇ ಕಡೆಗೆ ಸೇರಿಸಿದ್ದು, ಈ ಪೈಕಿ ಸಾಕಷ್ಟು ಜನರು ಮಾಸ್ಕ್ ಧರಿಸಿರಲಿಲ್ಲ. ಜೊತೆಗೆ ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಏನೆಂಬುದೇ ಗೊತ್ತಿರದಂತಾ ಪರಿಸ್ಥಿತಿಯಿತ್ತು.

English summary
West Bengal Law Minister Violated The Covid-19 Rules At School Students Programme.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X