ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಶ್ಚಿಮ ಬಂಗಾಳದಲ್ಲಿ ನರೇಂದ್ರ ಮೋದಿ, ಅಮಿತ್ ಶಾ ಮತಬೇಟೆ

|
Google Oneindia Kannada News

ಕೋಲ್ಕತ್ತಾ, ಏಪ್ರಿಲ್ 12: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ಸೋಮವಾರ ರಾಜ್ಯದ ಹಲವು ಪ್ರದೇಶಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಸೋಮವಾರ ಮಧ್ಯಾಹ್ನ 12 ಗಂಟೆಗೆ ಪೂರ್ವ ಬರ್ಧಾಮನ್ ಜಿಲ್ಲೆಯ ತಾತಿಲ್ ಸಾಯಿ ಸೆಂಟರ್‌ನಲ್ಲಿ ಪ್ರಧಾನಮಂತ್ರಿ ಮೋದಿ ಚುನಾವಣಾ ಪ್ರಚಾರದ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1.40ಕ್ಕೆ ನಾಡಿಯಾ ಜಿಲ್ಲೆಯ ಕಲ್ಯಾಣಿ ವಿಶ್ವವಿದ್ಯಾಲಯದ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

 ಬಂಗಾಳದಲ್ಲಿ ಮೋದಿ ಗೆಲುವು ಖಚಿತ; ವೈರಲ್ ಆದ ಪ್ರಶಾಂತ್ ಕಿಶೋರ್ ಆಡಿಯೋ ಕ್ಲಿಪ್ ಬಂಗಾಳದಲ್ಲಿ ಮೋದಿ ಗೆಲುವು ಖಚಿತ; ವೈರಲ್ ಆದ ಪ್ರಶಾಂತ್ ಕಿಶೋರ್ ಆಡಿಯೋ ಕ್ಲಿಪ್

ಮಧ್ಯಾಹ್ನ 3.10ಕ್ಕೆ ಉತ್ತರ 24 ಪರಗಣ ಜಿಲ್ಲೆಯ ಬರಸತ್ ಪ್ರದೇಶದಲ್ಲಿ ಪ್ರಚಾರ ನಡೆಸಲಿದ್ದಾರೆ. ಇದಕ್ಕೂ ಮೊದಲು ಬೆಳಗ್ಗೆ 11.30ಕ್ಕೆ ಕಾಲಿಂಪಾಂಗ್ ಜಿಲ್ಲೆಯಲ್ಲಿ ಪ್ರಧಾನಿ ಮೋದಿ ಮತ್ತು ಸಚಿವ ಅಮಿತ್ ಶಾ ಜಂಟಿಯಾಗಿ ರೋಡ್ ಶೋದಲ್ಲಿ ಭಾಗವಹಿಸಲಿದ್ದಾರೆ.

West Bengal: PM Narendra Modi, Amit Shah To Hold Election Campaign In State

ಅಮಿತ್ ಶಾ ಪ್ರಚಾರದ ಬಗ್ಗೆ ಮಾಹಿತಿ:

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆ ಹೆಂತಾಬಾದ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಧುಪ್ಗುರಿ ಪ್ರದೇಶದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಷಣ ಮಾಡಲಿದ್ದಾರೆ. ತದನಂತರ ಸಿಲಿಗುರಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ.

ರಾಜ್ಯದಲ್ಲಿ ಇನ್ನೂ ನಾಲ್ಕು ಹಂತದ ಚುನಾವಣೆ ಬಾಕಿ:

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಎರಡು ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಮಾರ್ಚ್ 27ರಂದು ಮೊದಲ ಹಂತ, ಏಪ್ರಿಲ್ 1ರಂದು ಎರಡನೇ ಹಂತ, ಏಪ್ರಿಲ್ 6ರಂದು ಮೂರನೇ ಹಂತ, ಏಪ್ರಿಲ್ 10ರಂದು ನಾಲ್ಕನೇ ಹಂತದ ಮತದಾನ ನಡೆದಿದೆ. ಉಳಿದಂತೆ ಏಪ್ರಿಲ್ 17, ಏಪ್ರಿಲ್ 22, ಏಪ್ರಿಲ್ 26 ಮತ್ತು ಏಪ್ರಿಲ್ 29ರಂದು ಮತದಾನ ನಡೆಯಲಿದೆ. ಅಂತಿಮ ಫಲಿತಾಂಶ ಮೇ 2ರಂದು ಹೊರ ಬೀಳಲಿದೆ.

English summary
West Bengal Assembly Election 2021: PM Narendra Modi, Amit Shah To Hold Several Election Campaign.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X