ಪಶ್ಚಿಮ ಬಂಗಾಳ ಕಾಂಗ್ರೆಸ್ ಅಭ್ಯರ್ಥಿ ಕೊರೊನಾ ಸೋಂಕಿಗೆ ಬಲಿ

ಕೋಲ್ಕತ್ತಾ, ಏಪ್ರಿಲ್ 15: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಶಮ್‌ಶೇರ್ ಗುಂಜ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಜೌಲ್ ಹಕ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಚಿಕಿತ್ಸೆಗೆ ಸ್ಪಂದಿಸದೇ, ಗುರುವಾರ ಮುಂಜಾನೆ 5 ಗಂಟೆ ವೇಳೆಗೆ ನಿಧನರಾದರು. ಸಂಶೇರ್‌ಗಂಜ್‌ನಲ್ಲಿ ಏಪ್ರಿಲ್ 26ಕ್ಕೆ ಚುನಾವಣೆ ನಿಗದಿಯಾಗಿತ್ತು. ಏಪ್ರಿಲ್ 26 ರಂದು 7 ನೇ ಹಂತದಲ್ಲಿ ಮತದಾನ ನಡೆಯಲಿದೆ.

ಕೊರೊನಾ‌ ಸೋಂಕು ಇರುವುದು ದೃಢಪಟ್ಟ ನಂತರ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಶ್ಚಿಮ ಬಂಗಾಳದ ಸಂಶೇರ್‌ಗಂಜ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರೆಜೌಲ್‌ ಹಕ್ ಗುರುವಾರ ಮುಂಜಾನೆ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

West Bengal Polls: Congress Candidate Who Tested Covid Positive Dies In Kolkata

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ರೆಜೌಲ್‌ ಹಕ್‌ ಕಣಕ್ಕಿಳಿದಿದ್ದರು. ಕೆಲವು ದಿನಗಳ ಹಿಂದೆ ಅವರಿಗೆ ಕೋವಿಡ್‌ ಇರುವುದು ದೃಢಪಟ್ಟಿತ್ತು. ಬುಧವಾರ ಅವರು ಜಂಗಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯ ಸ್ಥಿತಿ ಗಂಭೀರವಾದ ನಂತರ ರೆಜೌಲ್ ಅವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪಶ್ಚಿಮ ಬಂಗಾಳದಲ್ಲಿ ಒಟ್ಟು 8 ಹಂತಗಳಲ್ಲಿ ಮತದಾನ ನಡೆಯಲಿದ್ದು ಈಗಾಗಲೇ 4 ಹಂತದ ಮತದಾನ ಮುಕ್ತಾಯಗೊಂಡಿದೆ. ಮೇ 2 ರಂದು ಫಲಿತಾಂಶ ಹೊರಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+