ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಪ್ಪಳ ಲೋಕಸಭಾ ಕ್ಷೇತ್ರ : 17 ಲಕ್ಷ ಮತದಾರರು, ಏ.23ಕ್ಕೆ ಮತದಾನ

|
Google Oneindia Kannada News

ಕೊಪ್ಪಳ, ಮಾರ್ಚ್ 22 : ಕೊಪ್ಪಳ ಲೋಕಸಭಾ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 17 ಲಕ್ಷ ಮತದಾರರಿದ್ದು, ಏಪ್ರಿಲ್ 23ರಂದು ಮತದಾನ ನಡೆಯಲಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಎಂಬುದು ಪವಿತ್ರ ಕಾರ್ಯವಾಗಿದ್ದು ಮತದಾರರು ಏಪ್ರಿಲ್ 23 ರಂದು ನಡೆಯುವ ಮತದಾನದಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ಹುಡುಕುವುದು ಹೇಗೆ?ಮತದಾರರ ಪಟ್ಟಿಯಲ್ಲಿ ಹೆಸರು ಹುಡುಕುವುದು ಹೇಗೆ?

ಮತದಾನಕ್ಕೂ ಮುನ್ನ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ? ಎಂಬುದನ್ನು ಪರಿಶೀಲಿಸಿಕೊಳ್ಳಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ. ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳಿವೆ.

ಕೊಪ್ಪಳ ಕ್ಷೇತ್ರ ಪರಿಚಯಕೊಪ್ಪಳ ಕ್ಷೇತ್ರ ಪರಿಚಯ

17 lakh voters in Koppal Lok sabha seat

ಕೊಪ್ಪಳ ಜಿಲ್ಲೆಯ ಎಲ್ಲಾ 5 ವಿಧಾನಸಭಾ ಕ್ಷೇತ್ರಗಳು, ರಾಯಚೂರು ಜಿಲ್ಲೆಯ ಸಿಂಧನೂರು, ಮಸ್ಕಿ ಹಾಗೂ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಕ್ಷೇತ್ರವನ್ನು ಕೊಪ್ಪಳ ಲೋಕಸಭಾ ಕ್ಷೇತ್ರ ಒಳಗೊಂಡಿದೆ.

ಮದುವೆ, ಹುಟ್ಟುಹಬ್ಬ ಆಯೋಜಿಸಲು ಆಯೋಗದ ಅನುಮತಿ ಬೇಕಿಲ್ಲಮದುವೆ, ಹುಟ್ಟುಹಬ್ಬ ಆಯೋಜಿಸಲು ಆಯೋಗದ ಅನುಮತಿ ಬೇಕಿಲ್ಲ

ಒಟ್ಟು 8 ವಿಧಾನಸಭಾ ಕ್ಷೇತ್ರಗಳಿಂದ 8,53,745 ಪುರುಷ, 8,62,903 ಮಹಿಳಾ ಹಾಗೂ 112 ಇತರೆ ಮತದಾರರು ಸೇರಿ ಪ್ರಸ್ತುತ 17,16,760 ಮತದಾರರಿದ್ದಾರೆ. ಒಟ್ಟು 2033 ಮತಗಟ್ಟೆಗಳಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದೆ.

ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಮತದಾರರ ಪಟ್ಟಿಯಲ್ಲಿ ಹೆಸರನ್ನು ಹೂಂದಿರಬೇಕಾಗುತ್ತದೆ. ಭಾವಚಿತ್ರವಿರುವ ಮತದಾರರ ಪಟ್ಟಿ ಇರಲಿದ್ದು ಚುನಾವಣಾ ಆಯೋಗ ನೀಡಿರುವ ಗುರುತಿನ ಚೀಟಿಯ ಜೊತೆಗೆ ಇತರೆ 11 ಭಾವಚಿತ್ರವಿರುವ ಗುರುತಿನ ಚೀಟಿಗಳಲ್ಲಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶ ನೀಡಲಾಗಿದೆ.

70 ಲಕ್ಷ ಚುನಾವಣಾ ವೆಚ್ಚ : ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣಾ ವೆಚ್ಚವನ್ನು ಗರಿಷ್ಠ ರೂ. 70 ಲಕ್ಷಗಳಿಗೆ ಮಿತಿಗೊಳಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಚುನಾವಣೆ ವೆಚ್ಚ ಭರಿಸಲು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಒಂದು ಪ್ರತ್ಯೇಕವಾದ ಹೊಸ ಖಾತೆಯನ್ನು ತೆರೆಯಬೇಕು.

ಎಲ್ಲಾ ವೆಚ್ಚಗಳನ್ನು ಪ್ರತ್ಯೇಕವಾಗಿ ತೆರೆದ ಖಾತೆಯಿಂದಲೇ ಭರಿಸಬೇಕು. ರೂ. 10 ಸಾವಿರ ಮೇಲ್ಪಟ್ಟು ಯಾವುದೇ ವೆಚ್ಚ ಭರಿಸಿದ್ದಲ್ಲಿ, ಅದನ್ನು ನಗದು ರಹಿತವಾಗಿ ಆರ್‌ಟಿಜಿಎಸ್, ಚೆಕ್, ಡಿಡಿ, ನೆಫ್ಟ್ ಅಥವಾ ಇತರೆ ಎಲೆಕ್ಟ್ರಾನಿಕ್ ವಿಧಾನದ ಮೂಲಕ ಪಾವತಿಸಬೇಕು.

English summary
Koppal Lok sabaha seat has 1716760 voters total all 8 assembly seats. Election will be held in April 23, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X