ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೆಚ್ಚಿದ ಮಳೆ; ತುಂಗಭದ್ರಾ ಜಲಾಶಯದಿಂದ 2 ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ

By ಕೊಪ್ಪಳ ಪ್ರತಿನಿಧಿ
|
Google Oneindia Kannada News

ಕೊಪ್ಪಳ, ಅಕ್ಟೋಬರ್ 22: ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವ ಕಾರಣ ಜಲಾಶಯಕ್ಕೆ ಒಳಹರಿವು ಹೆಚ್ಚಿದ್ದು, ಜಲಾಶಯದಿಂದ ನದಿಗೆ ಹೆಚ್ಚಿನ ನೀರನ್ನು ಹರಿಬಿಡಲಾಗುತ್ತಿದೆ.

ಮಂಗಳವಾರ 1,55,431 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, 33 ಕ್ರಸ್ಟ್ ಗೇಟ್ ಗಳಿಂದ 2,01,000 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ.

ಬೆಳಗಾವಿಯಲ್ಲಿ ಮಳೆ ಬಿರುಸಾಗುವ ಸಾಧ್ಯತೆ; ಮಲಪ್ರಭಾ ತಟದ ಹಳ್ಳಿಗಳಲ್ಲಿ ಹೈ ಅಲರ್ಟ್ಬೆಳಗಾವಿಯಲ್ಲಿ ಮಳೆ ಬಿರುಸಾಗುವ ಸಾಧ್ಯತೆ; ಮಲಪ್ರಭಾ ತಟದ ಹಳ್ಳಿಗಳಲ್ಲಿ ಹೈ ಅಲರ್ಟ್

ಜಿಲ್ಲೆಯಾದ್ಯಂತ ಸೋಮವಾರದಿಂದ ಮಳೆ ಹೆಚ್ಚಾಗಿದೆ. ಹೀಗಾಗಿ ಜಲಾಶಯದ ಒಳಹರಿವು, ಹೊರಹರಿವಿನ ಪ್ರಮಾಣದಲ್ಲೂ ಭಾರೀ ಏರಿಕೆಯಾಗಿದೆ. ಈ ನೀರಿನಿಂದಾಗಿ ಕಂಪ್ಲಿ ಸೇತುವೆ ಮುಳುಗಡೆಯಾಗಿದ್ದು, ಕಂಪ್ಲಿ- ಚಿಕ್ಕಜಂತಗಲ್ ಸಂಪರ್ಕ ಕಡಿತಗೊಂಡಿದೆ. ಜೊತೆಗೆ ಬೀದರ್, ಕಲಬುರಗಿ, ರಾಯಚೂರು, ಹೈದರಾಬಾದ್, ಮಂತ್ರಾಲಯ ಸೇರಿದಂತೆ ಪ್ರಮುಖ ನಗರಗಳಿಗೆ ಸಂಪರ್ಕ ಕಡಿತಗೊಂಡಿದೆ.

2 Lakh Cusecs Of Water Release From Tungabhadra Reservoir

ಗೋಕಾಕ್ ನಲ್ಲಿ ಬಂಡೆ ಉರುಳುವ ಭೀತಿ; ಎನ್ ಡಿಆರ್ ಎಫ್ ತಂಡ ಭೇಟಿಗೋಕಾಕ್ ನಲ್ಲಿ ಬಂಡೆ ಉರುಳುವ ಭೀತಿ; ಎನ್ ಡಿಆರ್ ಎಫ್ ತಂಡ ಭೇಟಿ

ಗಂಗಾವತಿ ತಾಲೂಕಿನ ವಿರೂಪಾಪುರಗಡ್ಡಿಯೂ ಜಲಾವೃತಗೊಳ್ಳುತ್ತಿದೆ. ಕಳೆದ ಬಾರಿ ಪ್ರವಾಹ ಸಂಭವಿಸಿದ್ದ ಸಂದರ್ಭ ನೂರಾರು ಜನ ಪ್ರವಾಸಿಗರು ನಡುಗಡ್ಡೆಯಲ್ಲಿ ಸಿಲುಕಿಕೊಂಡಿದ್ದರು. ಈ ಬಾರಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದು ನದಿ ಪಾತ್ರದ ಜನರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಿದೆ.

English summary
Due to heavy rainfall in the Tungabhadra basin, inflow to the reservoir has been increased and more water is being released into the river from the reservoir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X