2ಬಿ ಮೀಸಲಾತಿ ರದ್ದು: ಕೊಪ್ಪಳದಲ್ಲಿ ಮುಸ್ಲಿಂ ಸಮುದಾಯದಿಂದ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ
ಕೊಪ್ಪಳ, ಮಾರ್ಚ್, 27: ಮುಸ್ಲಿಂ ಸಮುದಾಯದ 2B ಮೀಸಲಾತಿ ರದ್ದು ಮಾಡಲು ಸರ್ಕಾರ ನಿರ್ಧಾರ ಮಾಡಿದ್ದು, ಇದರಿಂದ ಆಕ್ರೋಶಗೊಂಡ ಮುಸ್ಲಿಂ ಸಮುದಾಯ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದೆ.
#Muslim community protested in #Koppal demanding to reinstate 2B reservation which was taken away by state govt. #Karnataka govt has put them in EWS category. #Karnataka #KarnatakaElection2023 pic.twitter.com/G78DRSPIhG
— Imran Khan (@KeypadGuerilla) March 27, 2023
ನಗರದ ಗಡಿಯಾರ ಕಂಬದಿಂದ ಅಶೋಕ ವೃತ್ತದವರೆಗೂ ಪ್ರತಿಭಟನೆ ನಡೆಸಿದ್ದು, ಈ ವೇಳೆ ಸಾವಿರಾರು ಸಂಖ್ಯೆಯ ಮುಸ್ಲಿಂ ಸಮುದಾಯದ ಮುಖಂಡರು ಭಾಗಿಯಾಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಒಬಿಸಿ ಮೀಸಲಾತಿ ಪಟ್ಟಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ. 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಈ ಮೀಸಲಾತಿಯನ್ನು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಕ್ಕೆ ತಲಾ ಶೇ. 2ರಷ್ಟು ಹಂಚಿಕೆ ಮಾಡಲು ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ. 2ಬಿಯಲ್ಲಿದ್ದ ಮುಸ್ಲಿಂ ಸಮುದಾಯವನ್ನು ಶೇ.10ರಷ್ಟು ಮೀಸಲಾತಿ ಇರುವ ಇಡಬ್ಲ್ಯೂಎಸ್ ಕೋಟಾಕ್ಕೆ ಸ್ಥಳಾಂತರಿಸುತ್ತಿರುವುದಾಗಿ ಘೋಷಣೆ ಮಾಡಲಾಗಿದೆ.
ಚುನಾವಣೆ ಸಮಯದಲ್ಲಿಯೇ ವಿವಾದಾತ್ಮಕ ವಿಷಯವಾದ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಗೆ ಒಪ್ಪಿಗೆ ನೀಡಿದ್ದು, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ನಿರ್ಧರಿಸಿದೆ. ಹೊಸ ಮೀಸಲಾತಿ ಸೂತ್ರದ ಪ್ರಕಾರ, ಮಾದಿಗ ಸಂಬಂಧಿತ ಜಾತಿಗಳಿಗೆ ಶೇ. 6ರಷ್ಟು, ಹೊಲೆಯ ಸಂಬಂಧಿತ ಜಾತಿಗಳಿಗೆ ಶೇ.5.5, ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯಗಳಿಗೆ ಶೇಕಡಾ 4.5, ಇತರೆ ಅಲೆಮಾರಿ ಸಮುದಾಯಗಳಿಗೆ ಶೇ. 1ಎಷ್ಟು ಮೀಸಲಾತಿಯನ್ನು ಹಂಚಿಕೆ ಮಾಡುವ ನಿರ್ಣಯವನ್ನು ಸರ್ಕಾರ ಕೈಗೊಂಡಿದೆ.
ಸರ್ಕಾರವು ಈಗಾಗಲೇ ಎಸ್‌ಸಿ ಕೋಟಾವನ್ನು ಶೇಕಡಾ 15ರಿಂದ 17ಕ್ಕೆ ಮತ್ತು ಎಸ್‌ಟಿ ಶೇಕಡಾ 3ರಿಂದ 7ಕ್ಕೆ ಹೆಚ್ಚಿಸಿದೆ. ಅದನ್ನು ಸಂವಿಧಾನದ 9ನೇ ವಿಧಿಯಲ್ಲಿ ಸೇರಿಸಲು ಕೇಂದ್ರಕ್ಕೆ ಉಲ್ಲೇಖಿಸಲಾಗಿದೆ. ಜೊತೆಗೆ, ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅಧ್ಯಯನ ಮಾಡಿದ್ದ ಸಚಿವ ಸಂಪುಟ ಉಪಸಮಿತಿ ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಕುರಿತು ಇರುವ ಶಿಫಾರಸುಗಳನ್ನು ಅಂಗೀಕರಿಸಲು ನಿರ್ಧರಿಸಿದೆ.

ಮುಸ್ಲಿಮರಿಗೆ 2ಬಿ ಕೆಟಗರಿಯಲ್ಲಿ ನೀಡಲಾಗುತ್ತಿದ್ದ 4ರಷ್ಟು ಮೀಸಲಾತಿಯನ್ನು ರದ್ದುಪಡಿಸಿದ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಎಎಪಿ ನಿರ್ಧರಿಸಿದೆ.
ಒಳಮೀಸಲಾತಿ ಶಿಫಾರಸುಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿಗಾರರಿಗೆ ಇತ್ತಿಚೆಗಷ್ಟೇ ತಿಳಿಸಿದ್ದರು. ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದ ಸಂಪುಟ ಉಪಸಮಿತಿ ಎಲ್ಲಾ ಪರಿಶಿಷ್ಟ ಜಾತಿಗಳಿಗೆ ಅವರ ಜನಸಂಖ್ಯೆಯ ಆಧಾರದ ಮೇಲೆ ನ್ಯಾಯ ಒದಗಿಸಲು ಒಳ ಮೀಸಲಾತಿಯನ್ನು ಶಿಫಾರಸು ಮಾಡಿದೆ. ಸಂವಿಧಾನದ 341 (2) ನೇ ವಿಧಿಯ ಅಡಿಯಲ್ಲಿ ವರ್ಗಗಳನ್ನು ಮಾಡಲಾಗಿದೆ ಎಂದಿದ್ದರು.
ಒಳಮೀಸಲಾತಿ ಕೋರಿ ರಾಜ್ಯದಲ್ಲಿ ಪ್ರತಿಭಟನೆ ನಡೆಯುತ್ತಲೇ ಇದೆ. 101 ಎಸ್‌ಸಿ ಜಾತಿಗಳಲ್ಲಿ, ಬಂಜಾರ, ಕುರುಮ ಮತ್ತು ಭೋವಿಯಂತಹ ಕೆಲವು ಸಮುದಾಯಗಳನ್ನು ಎಸ್‌ಸಿ ಪಟ್ಟಿಯಿಂದ ತೆಗೆದುಹಾಕುವ ಆತಂಕವಿದೆ. ಆದರೆ ಅವರನ್ನು ಎಸ್‌ಸಿ ಕೋಟಾದಲ್ಲಿ ಮುಂದುವರಿಸಲಾಗುವುದು. ಮತ್ತೊಂದು ಕಾಡು ಕುರುಬರು, ಜೇನು ಕುರುಬರು ಮತ್ತು ಗೊಂಡ ಕುರುಬ ಜನಾಂಗದವರನ್ನು ಪರಿಶಿಷ್ಟ ಪಂಗಡದ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂಬ ಬೇಡಿಕೆಗೆ ಸಂಪುಟ ಒಪ್ಪಿಗೆ ನೀಡಿದೆ. ನಾವು ಮೈಸೂರು ವಿಶ್ವವಿದ್ಯಾನಿಲಯದಿಂದ ಈ ಸಮುದಾಯಗಳ ಕುರಿತು ಮಾನವಶಾಸ್ತ್ರೀಯ ಅಧ್ಯಯನ ವರದಿ ಕೇಳಿದ್ದೇವೆ ಎಂದು ಹೇಳಿದ್ದರು.
ಎಲ್ಲಾ ವಿವರಗಳನ್ನು ನೀಡುವ ಮೂಲಕ ಕೇಂದ್ರಕ್ಕೆ ಶಿಫಾರಸು ಮಾಡಲು ಮುಂದಿನ ಕ್ರಮ ಕೈಗೊಳ್ಳಲು ನಾವು ಕಾನೂನು ಇಲಾಖೆಗೆ ಸಲಹೆ ನೀಡಿದ್ದೇವೆ. ಪರಿಶಿಷ್ಟ ಪಂಗಡದ ಅಡಿಯಲ್ಲಿ ಸೇರಿಸಲು ಕಾಡು ಗೊಲ್ಲರು ಮತ್ತು ಕೋಲಿ ಸಮಾಜದ ಹೆಚ್ಚಿನ ವಿವರಗಳನ್ನು ಕೇಂದ್ರ ಸರ್ಕಾರವೂ ಕೋರಿದೆ. ವಿವರಗಳನ್ನು ನೀಡಲು ಸಂಬಂಧಿಸಿದ ಇಲಾಖೆಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.
ಆದರೆ ಇದೀಗ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿ ರದ್ದು ಮಾಡಲು ಮುಂದಾಗಿದ್ದು, ಸರ್ಕಾರದ ಈ ನಿರ್ಧಾರದ ವಿರುದ್ಧ ಮುಸ್ಲಿಂ ಸಮುದಾಯ ಕೆಂಡಕಾರುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications