ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹುಲಿಗೆಮ್ಮನ ದರ್ಶನ ಪಡೆದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

By Srinivasa
|
Google Oneindia Kannada News

ಕೊಪ್ಪಳ, ಫೆಬ್ರವರಿ 10 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಲ್ಲಿನ ಹುಲಿಗೆಮ್ಮ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದರು. ಹೊಸಪೇಟೆಯಲ್ಲಿ ಕಾಂಗ್ರೆಸ್ ಜನಾಶೀರ್ವಾದ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇಲ್ಲಿನ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿ, ಹೈದರಾಬಾದ್- ಕರ್ನಾಟಕಕ್ಕೆ ಪ್ರತ್ಯೇಕ ಸ್ಥಾನ ಮಾನ ದೊರಕಿಸಿಕೊಟ್ಟಿದ್ದು ಕಾಂಗ್ರೆಸ್. ನಾನೂರು ಕೋಟಿ ಅನುದಾನ ಸಿಗುತ್ತಿದ್ದದ್ದು ಈಗ ಸಾವಿರ ಕೋಟಿಗೂ ಹೆಚ್ಚು ಅನುದಾನ ದೊರೆಯುತ್ತಿದೆ. ಇಲ್ಲಿನ ಜನರಿಗೆ ಮೆಡಿಕಲ್ ಸೀಟು ಹಾಗೂ ಉದ್ಯೋಗ ದೊರೆಯುತ್ತಿದೆ. ಇದು ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಯತ್ನ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಆಗುವುದಿಲ್ಲ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ರಾಜ್ಯ ಸರಕಾರದ ವಿರುದ್ಧ ನರೇಂದ್ರ ಮೋದಿ ಆಧಾರ ರಹಿತವಾದ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ಕೋಮುವಾದಿ ಬಿಜೆಪಿಗೆ ಮತ ಹಾಕಬೇಡಿ, ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಎಂದು ಹೇಳಿದರು.

English summary
AICC president Rahul Gandhi visits famous Huligemma temple in Koppal. After he addressed Congress Janashirvad meeting in Hospet on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X