ಅಂಜನಾದ್ರಿ ಬೆಟ್ಟದ ಹುಂಡಿ ಎಣಿಕೆ; 6 ಲಕ್ಷ ರೂ. ಸಂಗ್ರಹ
ಕೊಪ್ಪಳ, ಮೇ 31; ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿನ ಹುಂಡಿಯನ್ನು ಎಣಿಕೆ ಮಾಡಲಾಗಿದೆ. ಒಟ್ಟು 6,37,458 ರೂ. ಸಂಗ್ರಹವಾಗಿದ್ದು, 2 ನೇಪಾಳ ದೇಶದ ನಾಣ್ಯಗಳು ಸಹ ಪತ್ತೆಯಾಗಿವೆ.
ಶ್ರೀ ಆಂಜನೇಯ ದೇವಾಲಯ ಅಂಜನಾದ್ರಿ ಬೆಟ್ಟ ಆನೆಗುಂದಿಯಲ್ಲಿ ಸೋಮವಾರ ಗಂಗಾವತಿ ತಹಶೀಲ್ದಾರ್ ನಾಗರಾಜ ನೇತೃತ್ವದಲ್ಲಿ ಹುಂಡಿಯ ಎಣಿಕೆ ನಡೆಯಿತು. ಲಾಕ್ಡೌನ್ ಸಮಯದಲ್ಲಿ ಹುಂಡಿಯಲ್ಲಿನ ಹಣ ಹಾಳಾಗುವ ಸಾಧ್ಯತೆ ಇರುವುದರಿಂದ ಏಣಿಕೆ ಮಾಡಲಾಗಿದೆ.
ಪೊಲೀಸ್ ಬಂದೋಬಸ್ತ್ ಹಾಗೂ ಸಿಸಿಟಿವಿ ಕಣ್ಗಾವಲಿನಲ್ಲಿ ಎಣಿಕೆ ನಡೆಯಿತು. ಕಳೆದ ಬಾರಿ 18-03-2021 ರಂದು ಹುಂಡಿ ತೆರೆಯಲಾಗಿತ್ತುಆಗ 15,42,204 ರೂ. ಸಂಗ್ರಹವಾಗಿತ್ತು. ಕೋವಿಡ್ ಕಾರಣದಿಂದ ದೇವಾಲಯ ಬಂದ್ ಇರುವ ಕಾರಣ ಈಗ ಹುಂಡಿ ಏಣಿಕೆ ಮಾಡಲಾಗಿದೆ.

33 ದಿನದಲ್ಲಿ 6,37,458 ರೂಪಾಯಿ ಸಂಗ್ರಹವಾಗಿದೆ. ಮಾರ್ಚ್ 18 ರಿಂದ ಏಪ್ರಿಲ್ 21ರ ತನಕ ಹುಂಡಿಯಲ್ಲಿ ಸಂಗ್ರವಾದ ಹಣದ ಎಣಿಕೆ ಇಂದು ನಡೆದಿದೆ. ದೇವಾಲಯದ ಆಡಳಿತ ಮಂಡಳಿ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ತೊಡಗಿದ್ದರು.
ಆಂಜನೇಯ ಜನಿಸಿರುವ ಅಂಜನಾದ್ರಿ ಬೆಟ್ಟದ ಮೂಲಭೂತ ಸೌಕರ್ಯ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ 2 ಹಂತದ ಯೋಜನೆಯನ್ನು ರೂಪಿಸಿದೆ. ಮೊದಲ ಹಂತದಲ್ಲಿ ರೂ. 50 ಕೋಟಿ ವೆಚ್ಚದಲ್ಲಿ ಅತೀ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ.
ಅಂಜನಾದ್ರಿ ಬೆಟ್ಟದಲ್ಲಿ 2ನೇ ಹಂತದಲ್ಲಿ ರೋಪ್ ವೇ, ಯಾತ್ರಿ ನಿವಾಸ, ವಾಟರ್ ಸ್ಪೋರ್ಟ್ಸ್ ಆರಂಭ ಸೇರಿದಂತೆ ವಿವಿಧ ಯೋಜನೆಗಳನ್ನು ಕೈಗೊಳ್ಳಲಾಗುತ್ತದೆ. ವಿವಿಧ ಇಲಾಖೆಗಳು ಜಂಟಿಯಾಗಿ ಈ ಕಾರ್ಯವನ್ನು ಕೈಗೊಳ್ಳಲಿವೆ. ಲಾಕ್ಡೌನ್ ಪರಿಣಾಮ ಕೆಲಸಗಳು ಸ್ಥಗಿತವಾಗಿವೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications