ಸಾವಿರ ಸಲ ಹೇಳುತ್ತೇನೆ, ಹನುಮ ಹುಟ್ಟಿದ್ದು ಅಂಜನಾದ್ರಿಯಲ್ಲಿಯೇ: ಸಿಎಂ ಬೊಮ್ಮಾಯಿ ಘೋಷಣೆ
ಕೊಪ್ಪಳ, ಆಗಸ್ಟ್ 1: ಆಂಜನೇಯ ಹುಟ್ಟಿದ್ದು ಅಂಜನಾದ್ರಿಯಲ್ಲಿ ಎಂಬುದಕ್ಕೆ ಬೇರೆ ದಾಖಲೆ ಬೇಕಿಲ್ಲ, ನಮ್ಮ ನಂಬಿಕೆಯೇ ನಮ್ಮ ಘೋಷಣೆ. ನಾವು ಮತ್ತೆ ಮತ್ತೆ ಘೋಷಣೆ ಮಾಡಿ, ವಿವಾದ ಮಾಡುವ ಅಗತ್ಯ ಇಲ್ಲ. ಸಾವಿರ ಬಾರಿ ಹೇಳುತ್ತೇನೆ ಹನುಮ ಹುಟ್ಟಿದ್ದು ಅಂಜನಾದ್ರಿಯಲ್ಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದಾವಣಗೆರೆಯಿಂದ ಮಧ್ಯಾಹ್ನ 1 ಗಂಟೆಯ ವೇಳೆಗೆ ಗಂಗಾವತಿ ತಾಲೂಕಿನ ಆನೆಗುಂದಿ ಬಳಿಯ ಹೆಲಿಪ್ಯಾಡ್ ಗೆ ಆಗಮಿಸಿದ ಸಿಎಂ ಬೊಮ್ಮಾಯಿ ರಸ್ತೆ ಮಾರ್ಗದ ಮೂಲಕ ಅಂಜನಾದ್ರಿಗೆ ಆಗಮಿಸಿದರು. ಸುಮಾರು 575 ಮೆಟ್ಟಿಲುಗಳುಳ್ಳ ಅಂಜನಾದ್ರಿ ಪರ್ವತವನ್ನು ಏರದೆ ಬೆಟ್ಟದ ಕೆಳಗೆಯೇ ವಿಶೇಷ ಪೂಜೆ ಸಲ್ಲಿಸಿದರು. ಬೆಟ್ಟದ ಕೆಳಗೆ ವಿಶೇಷ ಪೂಜೆ ಸಲ್ಲಿಕೆಗೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿತ್ತು. ವೈದಿಕರು ಸಂಕಲ್ಪದೊಂದಿಗೆ ಪೂಜಾ ಕೈಂಕರ್ಯ ನಡೆಸಿದರು ಅಲ್ಲದೆ ಹನುಮಾನ್ ಚಾಲೀಸ ಪಠಣ ಮಾಡಿದರು.
ಅಂಜನಾದ್ರಿಗೆ ಭೇಟಿಗೂ ಮುನ್ನ ಆನೆಗುಂದಿ ಬಳಿಯ ಹೆಲಿಪ್ಯಾಡ್ ನಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿಯೇ ಆಂಜನೇಯನ ಜನ್ಮಸ್ಥಳ ಎಂದು ಘೋಷಣೆ ಮಾಡಿದರು. ಕಿಷ್ಕಿಂಧಾ ಪ್ರದೇಶವಾಗಿರುವ ಈ ಸ್ಥಳವೇ ಹನುಮ ಜನ್ಮಸ್ಥಳ ಎಂದು ಸಾವಿರ ಬಾರಿ ಹೇಳುತ್ತೇನೆ ಎಂದರು.
"ಆಂಜನೇಯ ಸ್ವಾಮಿ ಜನ್ಮಸ್ಥಳದ ಸಮಗ್ರ ಅಭಿವೃದ್ದಿಗಾಗಿ ಬಜೆಟ್‌ನಲ್ಲಿ ಹಣ ಘೋಷಣೆ ಮಾಡಿದ್ದೇನೆ. ಪ್ರತೀವರ್ಷ ಬಹಳಷ್ಟು ಜನ ಯಾತ್ರಿಕರು ಬರುತ್ತಾರೆ. ಆದರೆ, ಅವರಿಗೆ ಸರಿಯಾದ ವ್ಯವಸ್ಥೆಯಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರವಾಸಿಗರು ಬರುವ ಸಾಧ್ಯತೆ ಇದೆ. ಹಾಗಾಗಿ 100 ಕೋಟಿ ರೂ ಕೊಟ್ಟಿದ್ದೇವೆ," ಎಂದು ಹೇಳಿದರು.
"ಬೆಟ್ಟದ ಕೆಳಗಡೆ ಯಾತ್ರಿಕರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡುವ ಯೋಜನೆಯಿದೆ. ಮಾರುಕಟ್ಟೆ, ವಸತಿ, ಆಸ್ಪತ್ರೆ ಎಲ್ಲಾ ಸೌಲಭ್ಯ ಸಿಗಬೇಕು, ವಯಸ್ಸಾದವರಿಗೆ ನೆರವಾಗಲು ರೋಪ್ ವೇ ನಿರ್ಮಾಣ ಮಾಡುವ ಯೋಜನೆಯಿದೆ. ರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಬೇಕೆಂಬ ಪರಿಕಲ್ಪನೆಯಿಂದ ಅಭಿವೃದ್ದಿ ಕಾರ್ಯಕ್ಕೆ ಚಾಲನೆ ನೀಡಲು ಮಾತನಾಡಿಕೊಂಡಿದ್ದೆವು, ಅದಕ್ಕಾಗಿ ಸಮೀಕ್ಷೆಗಾಗಿ ಬಂದಿದ್ದೇನೆ," ಎಂದು ಬೊಮ್ಮಾಯಿ ಹೇಳಿದರು.

ಶೀಘ್ರದಲ್ಲೇ ರೋಪ್ ವೇಗೆ ಟೆಂಡರ್ ಕರೆಯಲಿದ್ದೇವೆ. ಕೇವಲ ಅಂಜನಾದ್ರಿ ಮಾತ್ರವಲ್ಲಿ ಸುತ್ತಮುತ್ತಲ ಸ್ಥಳವನ್ನು ಅಭಿವೃದ್ಧಿ ಮಾಡಲಿದ್ದೇವೆ. ಅದಕ್ಕಾಗಿ ಮಾಸ್ಟರ್ ಪ್ಲಾನ್ ಮಾಡಿ ಸಮಗ್ರ ಅಭಿವೃದ್ದಿ ಮಾಡುವಂತಹ ಯೋಜನೆ ನಮ್ಮ ಮುಂದಿದೆ. ಕರ್ನಾಟದಲ್ಲಿ ಮೈಸೂರು ಮತ್ತು ಹಂಪಿಯನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವಾಗಿ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದೇವೆ. ಅದರ ಪ್ರಕಾರ ಅಕ್ಕಪಕ್ಕದ ಸ್ಥಳಗಳನ್ನು ಅಭಿವೃದ್ಧಿ ಮಾಡಲಿದ್ದೇವೆ ಎಂದು ಸಿಎಂ ತಿಳಿಸಿದರು.
ಅಂಜನಾದ್ರಿ ಸುತ್ತಮುತ್ತ ಅಭಿವೃದ್ಧಿ ಕಾರ್ಯಕ್ಕಾಗಿ ಕೆಲವು ಜಮೀನುಗಳನ್ನು ವಶಪಡಿಸಿಕೊಳ್ಳಬೇಕಾಗಿದೆ. ಅದಕ್ಕಾಗಿ 24 ಕೋಟಿ ರೂ. ಮೀಸಲಿಟ್ಟಿದ್ದೇವೆ. ಶೀಘ್ರದಲ್ಲೇ ಆ ಕಾರ್ಯ ನಡೆಯಲಿದೆ, ಬೆಂಗಳೂರಿನಲ್ಲಿ ಸಭೆ ಮಾಡಿದ್ದೇವೆ ಎಂದರು.

ಚಕ್ರವರ್ತಿ ಸೂಲಿಬೆಲೆ ಸರಕಾರದ ವಿರುದ್ಧ ಮಾಡಿರುವ ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿ" ಚಕ್ರವರ್ತಿ ಸೂಲಿಬೆಲಿ ನಮ್ಮವರು,ಆತ್ಮೀಯರು, ಯಾವಾಗಲೂ ಹಿಂದುತ್ವದ ವಿಚಾರವಾಗಿ ಧ್ವನಿ ಎತ್ತುವವರು. ಹಿಂದುತ್ವದ ಕಾರ್ಯಕರ್ತರು ಕೊಲೆಯಾದಾಗ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಅವರ ಜೊತೆಗೆ ಮಾತನಾಡುತ್ತೇವೆ ಮತ್ತು ಎಲ್ಲರೂ ಒಟ್ಟಾಗಿ ಮತ್ತೆ ಮುಂದುವರಿದುಕೊಂಡು ಹೋಗಲಿದ್ದೇವೆ" ಎಂದು ತಿಳಿಸಿದರು.
ಆಂಜನೇಯನಿಗೆ ಪೂಜೆ
ಅಂಜನಾದ್ರಿಗೆ ಕಾರಿನಲ್ಲಿ ಆಗಮಿಸಿದ ಬೊಮ್ಮಾಯಿ ಬೆಟ್ಟದ ಕೆಳಗಿರುವ ಹನುಮ ಮೂರ್ತಿಗೆ ಪೂಜೆ ಸಲ್ಲಿಸಿದರು. ಕಾಲು ನೋವಿನ ಹಿನ್ನಲೆ ಬೆಟ್ಟ ಏರಲಾಗದೆ ತಳಬೆಟ್ಟದಲ್ಲೇ ಪೂಜೆ ಸಲ್ಲಿಸಿದರು. ಸಚಿವರಾದ ಡಿ.ಸುಧಾಕರ, ಬೈರತಿ ಬಸವರಾಜ, ಹಾಲಪ್ಪ ಆಚಾರ್, ಶಶಿಕಲಾ ಜೊಲ್ಲೆ ಸಾಥ್ ನೀಡಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications