ಕೊಪ್ಪಳ : ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ, ಜೂನ್ 27 : ಕರ್ಕಿಹಳ್ಳಿ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಖಾಲಿ ಇರುವ ವಿಜ್ಞಾನ ಮತ್ತು ದೈಹಿಕ ಶಿಕ್ಷಣ ವಿಷಯದ ಸಹ ಶಿಕ್ಷಕರ ಹುದ್ದೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಕೊಪ್ಪಳ ತಾಲೂಕು ಕರ್ಕಿಹಳ್ಳಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜ್ಞಾನ (ಸಿಬಿಝಡ್) ಮತ್ತು ದೈಹಿಕ ಶಿಕ್ಷಣ ವಿಷಯದ ಸಹ ಶಿಕ್ಷಕರ ತಲಾ ಒಂದು ಹುದ್ದೆ ಖಾಲಿ ಇದೆ. ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಬಿ.ಎಸ್ಸಿ. (ಸಿಬಿಝಡ್) ಹಾಗೂ ಬಿ.ಎ. ಬಿ.ಪಿ.ಎಡ್. ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 02 ಕೊನೆಯ ದಿನವಾಗಿದೆ. ಅಂದು ಮಧ್ಯಾಹ್ನ 2 ಗಂಟೆಗೆ ಮಾದರಿ ಬೋಧನೆಯೊಂದಿಗೆ ಮೆರಿಟ್ ಆಧಾರೆದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ವಿಳಾಸ : ಇಂದಿರಾ ಗಾಂಧಿ ವಸತಿ ಶಾಲೆ, ಕರ್ಕಿಹಳ್ಳಿ, ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರನ್ನು ಸಂಪರ್ಕಿಸಬಹುದಾಗಿದೆ.












Click it and Unblock the Notifications