ಕೊಪ್ಪಳ: ಅತಿಥಿ ಉಪನ್ಯಾಸಕ, ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ, ಮೇ 12: ಕೊಪ್ಪಳ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. 2025-26ನೇ ಸಾಲಿಗೆ ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ವಸತಿ ಕಾಲೇಜು, ಮೌಲಾನಾ ಆಜಾದ್ ಮಾದರಿ ಶಾಲೆ ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕೊಪ್ಪಳ ಜಿಲ್ಲೆಯ ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ, ಕನಕಗಿರಿ, ಕಾರಟಗಿ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗೆ ಶಿಕ್ಷಕರ ನೇಮಕಾತಿ ನಡೆಯುತ್ತಿದೆ.

Apply Guest Teacher And Lecturer Recruitment At Koppal

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು, ಮೌಲಾನಾ ಆಜಾದ್ ಮಾದರಿ ಶಾಲೆ ಹಾಗೂ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರು ಮತ್ತು ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ಆಸಕ್ತ, ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ https://dom.karnataka.gov.in ಮೂಲಕ ಅಥವಾ ಶಾಲೆ, ಕಾಲೇಜುಗಳಿಗೆ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಸಲ್ಲಿಸಬೇಕು.

ಅಭ್ಯರ್ಥಿಗಳು ಅರ್ಜಿಗಳನ್ನು ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಕಛೇರಿ ವೇಳೆಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರ ವಸತಿ ಶಾಲೆ, ಕಾಲೇಜು ಅಥವಾ ಮೌಲಾನಾ ಆಜಾದ್ ಶಾಲೆ, ಕಾಲೇಜುಗಳಿಗೆ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಾಹಿತಿ ಕೇಂದ್ರ ಮತ್ತು ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಇವರನ್ನು ಸಂಪರ್ಕಿಸಬಹುದು.

ಮೌಲಾನಾ ಆಜಾದ್ ಭವನದ ದೂರವಾಣಿ ಸಂಖ್ಯೆ 08539-225070, ಕುಷ್ಟಗಿ ಮತ್ತು ಕೊಪ್ಪಳ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ 9738467445, ಗಂಗಾವತಿ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ 9740346533, ಯಲಬುರ್ಗಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ 9611419830ಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ.

ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ: ದಾವಣಗೆರೆಯಲ್ಲಿ ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ, ಕಾಲೇಜು ಮತ್ತು ಮಾದರಿ ಶಾಲೆ, ಕಾಲೇಜುಗಳಲ್ಲಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಲು ಅರ್ಜಿ ಕರೆಯಲಾಗಿದೆ.

ಕನ್ನಡ ಉಪನ್ಯಾಸಕರ ಹುದ್ದೆ 3, ಕನ್ನಡ ಅತಿಥಿ ಶಿಕ್ಷಕರ ಹುದ್ದೆ 7, ಇಂಗ್ಲೀಷ್ ಉಪನ್ಯಾಸಕರ ಹುದ್ದೆ 4, ಇಂಗ್ಲೀಷ್ ಶಿಕ್ಷಕರ ಹುದ್ದೆ 3, ಉರ್ದು ಉಪನ್ಯಾಸಕರ ಹುದ್ದೆ 3, ಗಣಿತ ಶಿಕ್ಷಕರ ಹುದ್ದೆ 8, ಗಣಿತ ಉಪನ್ಯಾಸಕರ ಹುದ್ದೆ 4, ಸಾಮಾನ್ಯ ವಿಜ್ಞಾನ ಶಿಕ್ಷಕರು 3, ಭೌತಶಾಸ್ತ್ರ ಉಪನ್ಯಾಸಕರ ಹುದ್ದೆ 3, ಸಮಾಜ ವಿಜ್ಞಾನ ಶಿಕ್ಷಕರು 6, ರಸಾಯನಶಾಸ್ತ್ರ ಉಪನ್ಯಾಸಕರ ಹುದ್ದೆ 3, ಉರ್ದು ಶಿಕ್ಷಕರು 2, ಜೀವಶಾಸ್ತ್ರ ಉಪನ್ಯಾಸಕರ ಹುದ್ದೆ 4, ಹಿಂದಿ ಶಿಕ್ಷಕರ ಹುದ್ದೆ 4, ದೈಹಿಕ ಶಿಕ್ಷಕರು 2 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಮೇ 19ರೊಳಗಾಗಿ ವೆಬ್ ಸೈಟ್ http://dom.karnataka.gov.in ನಲ್ಲಿ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-250022 ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+