ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಪ್ಪಳದಲ್ಲಿ ಮಾಜಿ ಸಚಿವ ಶಿವರಾಜ್‌ ತಂಗಡಗಿ ಸೋಲು

By Nayana
|
Google Oneindia Kannada News

ಕೊಪ್ಪಳ, ಮೇ 15: ಕೊಪ್ಪಳ ಜಿಲ್ಲೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದ್ದು, ಐದು ಸ್ಥಾನಗಳ ಪೈಕಿ ಮೂರರಲ್ಲಿ ಮೇಲುಗೈ ಸಾಧಿಸಿದೆ. ಭಾರಿ ವಿವಾದಕ್ಕೆ ಸಿಲುಕಿದ್ದ ಮಾಜಿ ಸಚಿವ ಶಿವರಾಜ ತಂಗಡಗಿ ಪರಾಭವಗೊಂಡಿದ್ದಾರೆ.

ಕೊಪ್ಪಳದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್‌ ಗೆಲುವು ಸಾಧಿಸಿದ್ದಾರೆ. ಇಲ್ಲಿ ಬಿಜೆಪಿ ಹಾಲಿಸಂಸದ ಕರಡಿ ಚಂಗಣ್ಣ ಪುತ್ರ ಬಿಜೆಪಿಯಿಂದ ಕಣಕ್ಕಿಳಿದಿದ್ದರು. ಗಂಗಾವತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ಗೆಲವು ಸಾಧಿಸಿದ್ದಾರೆ. ಇತ್ತೀಚೆಗಷ್ಟೇ ಜೆಡಿಎಸ್‌ ಇಂದ ವಲಸೆ ಬಂದಿದ್ದ ಇಕ್ಬಾಲ್‌ ಅನ್ಸಾರಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದರು. ಕನಕಗಿರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜಗೌಡ ದಡೆಸೂಗೂರು ಗೆಲವು ಸಾಧಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿ

ಕುಷ್ಟಗಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅಮರೇಗೌಡ ಬಯ್ಯಾಪೂರ, ಯಲಬುರ್ಗಾದಲ್ಲಿ ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರ್ ಗೆಲುವುದು ಸಾಧಿಸಿದ್ದಾರೆ. ಯಲಬುರ್ಗಾ ಕ್ಷೇತ್ರದಲ್ಲಿ ಹಾಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಪರಾಭವಗೊಳ್ಳುವ ಸಾಧ್ಯತೆ ಇದೆ ಅಧಿಕೃತ ಫಲಿತಾಂಶ ಇನ್ನು ಲಭ್ಯವಾಗಿಲ್ಲ.

BJP dominants in Koppal district again

ಕೊಪ್ಪಳ ಜಿಲ್ಲೆಯ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಮನ್ನೇರಾಳ ಗ್ರಾಮದ ಮತಗಟ್ಟೆ ಸಂಖ್ಯೆ 20 ಮತ್ತು 21 ರಲ್ಲಿ ಇಂದು ಮರು ಮತದಾನ ನಡೆದಿತ್ತು. ಮೇ. 12 ರಂದು ನಡೆದ ಮತದಾನದ ಸಂದರ್ಭದಲ್ಲಿ ಮನ್ನೇರಾಳ ಗ್ರಾಮದ ಮತಗಟ್ಟೆ ಸಂಖ್ಯೆ 21 ರಲ್ಲಿಯ ಮತದಾರರು ಮತಗಟ್ಟೆ ಸಂಖ್ಯೆ 20 ರಲ್ಲಿ ಮತ ಚಲಾಯಿಸಿರುತ್ತಾರೆ. ಹೀಗಾಗಿ ಮತಗಟ್ಟೆ ಸಂಖ್ಯೆ 20 ರ ಮತದಾನ ಪ್ರಮಾಣ ಶೇ. 100 ಕ್ಕಿಂತ ಹೆಚ್ಚಾಗಿತ್ತು.

ಚುನಾವಣೆ ಫಲಿತಾಂಶ : ಕೊಪ್ಪಳದಲ್ಲಿ ಕೈ ಸಪ್ಪಳ ಚುನಾವಣೆ ಫಲಿತಾಂಶ : ಕೊಪ್ಪಳದಲ್ಲಿ ಕೈ ಸಪ್ಪಳ

English summary
BJP has proved its dominance in Koppal district as minister Basavaraj Rayareddy and former minister shivaraj Tangadagi have lost their battle in their respective constituency
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X