ಕೊಪ್ಪಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು ಎಂಬುದು ಇನ್ನೂ ನಿಗೂಢ!

ಕೊಪ್ಪಳ, ಮಾರ್ಚ್ 28 : ಹಾಲಿ ಬಿಜೆಪಿಯ ಸಂಸದರಿದ್ದರೂ ಕೊಪ್ಪಳ ಕ್ಷೇತ್ರದ ಅಭ್ಯರ್ಥಿ ಅಂತಿಮಗೊಳಿಸಲು ಪಕ್ಷಕ್ಕೆ ಸಾಧ್ಯವಾಗಿಲ್ಲ. ಕೊಪ್ಪಳದಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದ್ದು, ಇಂದು ಅಧಿಸೂಚನೆ ಪ್ರಕಟವಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಲೋಕಸಭಾ ಚುನಾವಣೆಗೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಕೊಪ್ಪಳ ಜನರ ಪ್ರಶ್ನೆಯಾಗಿದೆ. ಹಾಲಿ ಸಂಸದ ಸಂಗಣ್ಣ ಕರಡಿ ಅವರು ಟಿಕೆಟ್ ಪಡೆಯುವ ಪ್ರಯತ್ನವನ್ನು ಮುಂದುವರೆಸಿದ್ದಾರೆ. ಕೊನೆಗೆ ಪುತ್ರನಿಗೆ ಟಿಕೆಟ್ ಕೊಡಿ ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ.

ಗುರುವಾರ ಕೊಪ್ಪಳ ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ಕಾಂಗ್ರೆಸ್ ರಾಜಶೇಖರ ಹಿಟ್ನಾಳ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಆದರೆ, ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ನೀಡಲು ಇನ್ನೂ ತೀರ್ಮಾನ ಕೈಗೊಂಡಿಲ್ಲ.

ಸಂಗಣ್ಣ ಕರಡಿ ಅವರಿಗೆ ಪುನಃ ಟಿಕೆಟ್ ನೀಡಲು ಹೈಕಮಾಂಡ್ ಇನ್ನೂ ಒಪ್ಪಿಗೆ ನೀಡಿಲ್ಲ. ಆದರೆ, ರಾಜ್ಯ ಘಟಕ ಅವರೊಬ್ಬರ ಹೆಸರನ್ನು ಮಾತ್ರ ಶಿಫಾರಸು ಮಾಡಿದೆ. ಆದ್ದರಿಂದ, ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ.

ಕೇಂದ್ರಕ್ಕೆ ವರದಿ

ಕೇಂದ್ರಕ್ಕೆ ವರದಿ

ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಚನೆ ಮಾಡಿದ ತಂಡ ನಡೆಸಿದ ಸಮೀಕ್ಷೆಯ ವರದಿಯಲ್ಲಿ ಸಂಗಣ್ಣ ಕರಡಿ ಅವರು ಗೆಲ್ಲುವ ಸಾಧ್ಯತೆ ಕಡಿಮೆ ಎಂಬ ಅಂಶವಿದೆ. ಆದ್ದರಿಂದ, ಹಾಲಿ ಸಂಸದರಿಗೆ ಟಿಕೆಟ್ ನೀಡಲು ಕೇಂದ್ರ ಬಿಜೆಪಿ ನಾಯಕರು ಆಲೋಚನೆ ನಡೆಸುತ್ತಿದ್ದಾರೆ. ಬೇರೆ ಪ್ರಭಾವಿ ಅಭ್ಯರ್ಥಿ ಸಿಗಬಹುದೇ? ಎಂಬ ಹುಡುಕಾಟದಲ್ಲಿದ್ದಾರೆ.

ಪುತ್ರನಿಗೆ ಟಿಕೆಟ್ ಕೊಡಿ

ಪುತ್ರನಿಗೆ ಟಿಕೆಟ್ ಕೊಡಿ

ಸಂಗಣ್ಣ ಕರಡಿ ಅವರು ತಮಗೆ ಟಿಕೆಟ್ ಕೊಡದಿದ್ದರೂ ಪರವಾಗಿಲ್ಲ ಪುತ್ರ ಕರಡಿ ಅಮರೇಶ್‌ಗೆ ಟಿಕೆಟ್ ಕೊಡಿ ಎಂಬ ಬೇಡಿಕೆ ಮುಂದಿಟ್ಟಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಕರಡಿ ಅಮರೇಶ್‌ ಸೋಲು ಕಂಡಿದ್ದಾರೆ. ಅರಮೇಶ್‌ ಪರವಾಗಿ ಆರ್‌ಎಸ್‌ಎಸ್‌ನ ಕೆಲವು ನಾಯಕರು ಲಾಬಿ ಮಾಡುತ್ತಿದ್ದಾರೆ.

ಕೆ.ಬಸವರಾಜ್ ಅವರ ಹೆಸರು

ಕೆ.ಬಸವರಾಜ್ ಅವರ ಹೆಸರು

ಮಾಜಿ ಶಾಸಕ ಕೆ.ಶರಣಪ್ಪ ಅವರ ಪುತ್ರ ಕೆ.ಬಸವರಾಜು ಅವರ ಹೆಸರು ಸಹ ಕೇಳಿಬರುತ್ತಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಕುಟುಂಬ ವೈದ್ಯರಿಗೆ ಆಪ್ತರಾಗಿರುವ ಬಸವರಾಜು ಅವರು ಟಿಕೆಟ್ ಪಡೆಯಲು ಪ್ರಯತ್ನವನ್ನು ನಡೆಸಿದ್ದಾರೆ.

ಬಿ.ಶ್ರೀರಾಮುಲು

ಬಿ.ಶ್ರೀರಾಮುಲು

ಮತ್ತೊಂದು ಕಡೆ ಮಾಜಿ ಸಚಿವ, ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಅವರನ್ನು ಕಣಕ್ಕಿಳಿಸುವ ಕುರಿತು ಕೇಂದ್ರ ನಾಯಕರು ಚಿಂತನೆ ನಡೆಸಿದ್ದಾರೆ. ಆದರೆ, ಶ್ರೀರಾಮುಲು ಅವರು ಚುನಾವಣಾ ಕಣಕ್ಕಿಳಿಯಲು ಆಸಕ್ತಿ ತೋರಿಸುತ್ತಿಲ್ಲ.

ಕಾಂಗ್ರೆಸ್‌ನಿಂದ ಯಾರು ಕಣಕ್ಕೆ?

ಕಾಂಗ್ರೆಸ್‌ನಿಂದ ಯಾರು ಕಣಕ್ಕೆ?

ಕಾಂಗ್ರೆಸ್ ಕೊಪ್ಪಳ ಕ್ಷೇತ್ರಕ್ಕೆ ರಾಘವೇಂದ್ರ ಹಿಟ್ನಾಳ್ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಆದರೆ, ಬಿಜಪಿಯಿಂದ ಅಭ್ಯರ್ಥಿ ಯಾರು ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+