ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಪ್ಪಳದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ; 25 ಜನರು ವಶಕ್ಕೆ

By ಕೊಪ್ಪಳ ಪ್ರತಿನಿಧಿ
|
Google Oneindia Kannada News

ಕೊಪ್ಪಳ, ಆಗಸ್ಟ್‌, 12: ಕೊಪ್ಪಳ ಜಿಲ್ಲೆಯ ಹುಲಿಹೈದರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 25 ಜನರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಗುರುವಾರ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಈ ಹಿನ್ನೆಲೆ ಪೊಲೀಸರು 58 ಜನರ ವಿರುದ್ಧ ಪ್ರಕರಣ ದಾಖಲಿದ್ದರು. ಇದೀಗ ಸಿಸಿ ಕ್ಯಾಮೆರಾದ ದೃಶ್ಯಗಳನ್ನು ಆಧರಿಸಿ 25ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರನ್ನು ವಿಚಾರಣೆ ಮಾಡುತ್ತಿದ್ದಾರೆ.

ಕೊಪ್ಪಳ: ಎರಡು ಗುಂಪಿನ ನಡುವೆ ಮಾರಾಮಾರಿ, ಇಬ್ಬರು ಸಾವುಕೊಪ್ಪಳ: ಎರಡು ಗುಂಪಿನ ನಡುವೆ ಮಾರಾಮಾರಿ, ಇಬ್ಬರು ಸಾವು

ಗುರುವಾರ ತಡರಾತ್ರಿ 25ಕ್ಕೂ ಹೆಚ್ಚು ಜನರನ್ನು ಪೊಲೀರು ವಶಕ್ಕೆ ಪಡೆದಿದ್ದು, ಶುಕ್ರವಾರ ವಿಚಾರಣೆಯನ್ನು ಚುರುಕುಗೊಳಿಸಿದ್ದಾರೆ. ಎರಡು ಗುಂಪುಗಳ ನಡುವೆ ನಡೆದ ಗಲಾಟೆ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ 25ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

Communal Clash In Koppal Hulihaidar 25 Detained

ಹುಲಿಹೈದರ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಪೊಲೀಸ್‌ ಸಿಬ್ಬಂದಿ ಗ್ರಾಮಕ್ಕೆ ಭೇಟಿ ಬಿಗಿಬಂದೋಬಸ್ತ್‌ ಮಾಡಿದ್ದರು. ನಂತರ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇನ್ನು ಈ ಘಟನೆ ನಡೆಯುತ್ತಿದ್ದಂತೆ ಊರಿನಲ್ಲಿದ್ದ ಗ್ರಾಮಸ್ಥರು ಮನೆ ಬಿಟ್ಟು ಹೊರಬರಲು ಹೆದರುತ್ತಿದ್ದಾರೆ.

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್‌ ಗ್ರಾಮದಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಗಲಾಟೆ ವೇಳೆ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಡಿದ್ದ. ಗಲಾಟೆ ಹಿನ್ನಲೆ ಹುಲಿಹೈದರ್ ಗ್ರಾಮದ ಸುತ್ತ 2 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

Communal Clash In Koppal Hulihaidar 25 Detained

ಸ್ಥಳಕ್ಕೆ ಕೊಪ್ಪಳ ಎಸ್‌ಪಿ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿದ್ದಾರೆ. ಜೀವ ಭಯದಿಂದ ಬಹುತೇಕ ಮನೆಯವರು ಊರು ಬಿಟ್ಟು ಪರಾರಿಯಾಗಿದ್ದಾರೆ. ಗ್ರಾಮದಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು, ಯಾರೂ ಹೊರಗಡೆ ಓಡಾಡದಂತೆ ಡಂಗುರ ಹೊಡೆಸಿ ಮಾಹಿತಿ ನೀಡಲಾಗಿತ್ತು.

English summary
Police detained 25 people after communal clash in Koppal distrit Hulihaidar village. Two people killled in clash. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X