ಉಗ್ರರ ಶವದ ಸಾಕ್ಷಿ ಕೇಳಿದ್ದ ಕಾಂಗ್ರೆಸ್ ಶಾಸಕನ ವಿರುದ್ಧ ದೂರು
ಕೊಪ್ಪಳ, ಮಾರ್ಚ್ 10 : ಪಾಕಿಸ್ತಾನದ ಬಾಲಕೋಟ್ ಪ್ರದೇಶದಲ್ಲಿ ಫೆ.26ರಂದು ಭಾರತೀಯ ವಾಯುಪಡೆ ನಡೆಸಿದ ದಾಳಿ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ದಾಳಿಯಲ್ಲಿ ಉಗ್ರರು ಸಾವನ್ನಪ್ಪಿದ್ದಾರೆ ಎಂಬುದಕ್ಕೆ ಸಾಕ್ಷಿ ಕೇಳಿದ್ದ ಕಾಂಗ್ರೆಸ್ ಶಾಸಕನ ವಿರುದ್ಧ ದೂರು ದಾಖಲಾಗಿದೆ.
ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಮಾ.2 ರಂದು ಪತ್ರಿಕಾಗೋಷ್ಠಿ ನಡೆಸಿದ್ದರು. ಆಗ ಉಗ್ರರ ಶವ ಎಲ್ಲಿ? ಎಂದು ಕೇಳಿದ್ದರು. ಈಗ ಶಾಸಕರ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ.
ಶಾಸಕ ರಾಘವೇಂದ್ರ ಹಿಟ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊಪ್ಪಳ ಕ್ಷೇತ್ರದ ಸಂಸದ ಸಂಗಣ್ಣ ಕರಡಿ ಪುತ್ರ ಅಮರೇಶ್ ಕರಡಿ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಾಸಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಉಗ್ರರ ಶವ ಎಲ್ಲಿ ಎಂದು ಕೇಳಿದ ಶಾಸಕರು ಯೋಧರಿಗೆ ಅವಮಾನ ಮಾಡಿದ್ದಾರೆ. ಸಾರ್ವಜನಿಕ ಜೀವನದಲ್ಲಿರೋ ಶಾಸಕರು ಇಂತಹ ಮಾತು ಹೇಳವ ಮೂಲಕ ಕೀಳು ಮಟ್ಟದ ರಾಜಕಾರಣ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಶಾಸಕರು ಉಗ್ರರ ಶವ ಎಲ್ಲಿ. 12 ನಿಮಿಷದಲ್ಲಿ ದಾಳಿ ನಡೆಸಲಾಗಿದೆ ಎಂದು ಹೇಳಿದ್ದಾರೆ. ಒಂದು ಉಗ್ರರ ಶವ ತೋರಿಸಲ್ಲ ಎಂದು ಹೇಳಿಕೆ ನೀಡಿದ್ದರು.
ಬಾಲಕೋಟ್ ಪ್ರದೇಶದಲ್ಲಿ ಫೆ.26ರಂದು ನಡೆಸಿದ ದಾಳಿಯ ಸಾಕ್ಷಿಗಳನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಅದನ್ನು ಬಹಿರಂಗ ಮಾಡುವುದು, ಬಿಡುವುದು ಸರ್ಕಾರಕ್ಕೆ ಸಂಬಂಧಿಸಿದ ವಿಷಯವಾಗಿದೆ ಎಂದು ಭಾರತೀಯ ವಾಯುಪಡೆ ಹೇಳಿದೆ.












Click it and Unblock the Notifications