ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕಲ್ ಫೈಟ್‌: ಕೊಪ್ಪಳ ಜಿಲ್ಲೆಯಲ್ಲಿ ಕಾಂಗ್ರೆಸ್ ಮುನ್ನಡೆ

By Manjunatha
|
Google Oneindia Kannada News

ಕೊಪ್ಪಳ, ಸೆಪ್ಟೆಂಬರ್ 03: ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಬಹುತೇಕ ಹೊರಬಂದಿದ್ದು. ಕೊಪ್ಪಳ ಜಿಲ್ಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಬಿಜೆಪಿ ಕೇವಲ ಒಂದು ಸ್ಥಳೀಯ ಸಂಸ್ಥೆಯಲ್ಲಿ ಮಾತ್ರವೇ ಅಧಿಕಾರ ಹಿಡಿಯಲಿದೆ.

ಜಿಲ್ಲೆಯ ಎರಡು ನಗರಸಭೆ, ಒಂದು ಪುರಸಭೆ ಹಾಗೂ ಒಂದು ಪಟ್ಟಣ ಪಂಚಾಯ್ತಿಗೆ ಆಗಸ್ಟ್ 31 ರಂದು ಮತದಾನ ನಡೆದಿತ್ತು. ಒಂದರಲ್ಲಿ ಬಿಜೆಪಿ, ಒಂದರಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದ್ದರೆ ಇನ್ನುಳಿದ ಎರಡರಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದ್ದರೂ ಸ್ಪಷ್ಟ ಬಹುಮತ ಪಡೆದಿಲ್ಲ ಆದರೆ ಜೆಡಿಎಸ್ ಜೊತೆ ಅಧಿಕಾರ ಹಿಡಿಯುವ ಸಾಧ್ಯತೆ ಬಲವಾಗಿದೆ.

LIVE: ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಾಧ್ಯತೆLIVE: ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಾಧ್ಯತೆ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಬಹುತೇಕ ಬಿಜೆಪಿ ಅಭ್ಯರ್ಥಿಗಳೇ ಗೆದ್ದಿದ್ದರು. ಕೊಪ್ಪಳದ ಗಂಗಾವತಿಯಲ್ಲಿ, ಯಲಬುರ್ಗದಲ್ಲಿ ಮತ್ತು ಕಸಬಾ ತಾಲ್ಲೂಕಿನಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದರು. ಆದರೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಾತ್ರ ಇಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ.

ಕೊಪ್ಪಳ ನಗರಸಭೆ ಫಲಿತಾಂಶ

ಕೊಪ್ಪಳ ನಗರಸಭೆ ಫಲಿತಾಂಶ

ಕೊಪ್ಪಳ ನಗರಸಭೆ ಕಾಂಗ್ರೆಸ್ ಪಕ್ಷ 15 ಸೀಟುಗಳಲ್ಲಿ ವಿಜಯಯಿಯಾಗಿದೆ. ಬಿಜೆಪಿಯು 10 ಗೆದ್ದಿದ್ದರೆ ಜೆಡಿಎಸ್ 2 ಸೀಟು ಗೆದ್ದಿದೆ. ಪಕ್ಷೇತರರರು 4 ಅಭ್ಯರ್ಥಿಗಳು ಗೆದ್ದಿದ್ದಾರೆ. ಕೊಪ್ಪಳ ನಗರಸಭೆ ಅಧಿಕಾರ ಹಿಡಿಯಲು ಒಟ್ಟು 16 ಸೀಟುಗಳು ಬೇಕಿತ್ತು ಆದರೆ ಕಾಂಗ್ರೆಸ್ 15 ರಲ್ಲಿ ಮಾತ್ರವೇ ಗೆದ್ದಿದೆ. ಆದರೆ ಜೆಡಿಎಸ್ ಎರಡು ಸೀಟು ಗೆದ್ದಿದ್ದು ಈ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳಲಿವೆ.

ಗಂಗಾವತಿ ನಗರಸಭೆ ಫಲಿತಾಂಶ

ಗಂಗಾವತಿ ನಗರಸಭೆ ಫಲಿತಾಂಶ

ಗಂಗಾವತಿ ನಗರಸಭೆಯಲ್ಲಿ ಸಹ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಇಲ್ಲಿ ಒಟ್ಟು 35 ಸ್ಥಾನಗಳಿಗಾಗಿ ಚುನಾವಣೆ ನಡೆಯಿತು. 18 ಸೀಟು ಗೆದ್ದ ಪಕ್ಷ ಅಧಿಕಾರ ಹಿಡಿಯಬಹುದಾಗಿತ್ತು. 17 ಸೀಟು ಗೆದ್ದಿರುವ ಕಾಂಗ್ರೆಸ್ ಅಧಿಕಾರ ಹಿಡಿಯಲು ಒಂದು ಸೀಟಿನಿಂದ ಹಿಂದೆ ಉಳಿದಿದೆ. ಇಲ್ಲಿ ಬಿಜೆಪಿಯು 14 ಸೀಟು ಗೆದ್ದಿದೆ. ಜೆಡಿಎಸ್ ಪಕ್ಷ 2 ಸೀಟು ಗೆದ್ದಿದೆ. ಇಬ್ಬರು ಪಕ್ಷೇತರರು ಗೆಲುವು ಕಂಡಿದ್ದಾರೆ. ಇಲ್ಲಿಯೂ ಸಹ ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸಾಧ್ಯತೆ ಇದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಅಧಿಕಾರದ ಹೆಚ್ಚಿನ ಪಾಲು ಬಿಜೆಪಿಗೆಬಾಗಲಕೋಟೆ ಜಿಲ್ಲೆಯಲ್ಲಿ ಅಧಿಕಾರದ ಹೆಚ್ಚಿನ ಪಾಲು ಬಿಜೆಪಿಗೆ

ಕುಷ್ಟಗಿ ಪುರಸಭೆ ಫಲಿತಾಂಶ

ಕುಷ್ಟಗಿ ಪುರಸಭೆ ಫಲಿತಾಂಶ

ಕುಷ್ಟಗಿ ಪುರಸಭೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದಿದೆ. ಒಟ್ಟು 23 ಸ್ಥಾನಗಳಿಗೆ ಚುನಾವಣೆ ನಡೆದಿದ್ದು. ಅಧಿಕಾರ ಹಿಡಿಯಲು 12 ಸ್ಥಾನ ಬೇಕಿತ್ತು. ಕಾಂಗ್ರೆಸ್ ಪಕ್ಷವು 12 ಸ್ಥಾನಗಳಲ್ಲಿ ಗೆದ್ದು ಬೀಗಿದ್ದಾರೆ. ಬಿಜೆಪಿಯು 8 ಸ್ಥಾನಗಳಲ್ಲಿ ಗೆದ್ದಿದೆ. ಒಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದರೆ. ಇಬ್ಬರು ಪಕ್ಷೇತರರು ಗೆದ್ದಿದ್ದಾರೆ. ಜೆಡಿಎಸ್ ನ ಒಬ್ಬ ಅಭ್ಯರ್ಥಿಯೂ ಗೆದ್ದಿಲ್ಲ.

ಯಲಬುರ್ಗಾ ಪಟ್ಟಣ ಪಂಚಾಯಿತಿ ಫಲಿತಾಂಶ

ಯಲಬುರ್ಗಾ ಪಟ್ಟಣ ಪಂಚಾಯಿತಿ ಫಲಿತಾಂಶ

ಯಲಬುರ್ಗಾ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ವಿಜಯ ಸಾಧಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ಬಿಜೆಪಿ ಗೆದ್ದಿರುವ ಏಕೈಕ ಸ್ಥಳೀಯ ಸಂಸ್ಥೆ ಇದಾಗಿದೆ. ಒಟ್ಟು 15 ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಬಿಜೆಪಿಯು 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಕೇವಲ 3 ಸ್ಥಾನಗಳಲ್ಲಿ ಗೆದ್ದಿದೆ. ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಇಲ್ಲಿ ಅಧಿಕಾರ ಹಿಡಿಯಲು ಅಗತ್ಯವಿದ್ದಿದ್ದು 8 ಸೀಟುಗಳಷ್ಟೆ.

ಪುತ್ತೂರು ನಗರಸಭೆ ಬಿಜೆಪಿ ತೆಕ್ಕೆಗೆ, ಉಳ್ಳಾಲ, ಬಂಟ್ವಾಳದಲ್ಲಿ ಅತಂತ್ರ, ಕೈಗೆ ಮುಖಭಂಗಪುತ್ತೂರು ನಗರಸಭೆ ಬಿಜೆಪಿ ತೆಕ್ಕೆಗೆ, ಉಳ್ಳಾಲ, ಬಂಟ್ವಾಳದಲ್ಲಿ ಅತಂತ್ರ, ಕೈಗೆ ಮುಖಭಂಗ

English summary
Congress is took lead in Koppal district local body elections. Congress will going to take power in 3 civic bodies out of 4. Koppal district has 3 BJP MLA's but in local election congress took the lead.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X