ಕೊಪ್ಪಳ; ನರೇಗಾ ಕೂಲಿಕಾರರಿಗೆ ಸ್ಥಳದಲ್ಲೇ ಕೋವಿಡ್ ಲಸಿಕೆ
ಕೊಪ್ಪಳ, ಜೂನ್ 23; ಕೊಪ್ಪಳದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರರಿಗೆ ಸ್ಥಳದಲ್ಲೇ ಕೋವಿಡ್-19 ಲಸಿಕೆಯನ್ನು ನೀಡಲಾಯಿತು. 248 ಜನರು ಸ್ಥಳದಲ್ಲಿಯೇ ಕೋವ್ಯಾಕ್ಸಿನ್ ಲಸಿಕೆಯನ್ನು ಪಡೆದರು.
ಕೊಪ್ಪಳ ತಾಲೂಕು ಪಂಚಾಯತಿ ವತಿಯಿಂದ ಗುಳದಳ್ಳಿ ಗ್ರಾಮ ಪಂಚಾಯತಿಯ ಗಬ್ಬೂರ ಗ್ರಾಮದಲ್ಲಿ ನರೇಗಾ ಕೂಲಿಕಾರರಿಗೆ ಕೋವಿಡ್ ಲಸಿಕೆಯನ್ನು ನೀಡಲಾಯಿತು. ಉದ್ಯೋಗ ಹುಡುಕಿಕೊಂಡು ಗುಳೆ ಹೊಗದೇ ಸ್ಥಳೀಯವಾಗಿ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿ ಎಂದು ಮನವಿ ಮಾಡಲಾಯಿತು.
ತಾಲೂಕ ಪಂಚಾಯತಿ ಸಹಾಯಕ ನಿರ್ದೇಶಕರಾದ (ಗ್ರಾಮೀಣ ಉದ್ಯೋಗ) ಸೌಮ್ಯ ಕೆ. ಮಾತನಾಡಿ, "ಕೂಲಿ ಕೆಲಸಕ್ಕಿಂತ ದೇಹದ ಆರೋಗ್ಯ ಮುಖ್ಯವಾಗಿದ್ದು, ಗ್ರಾಮೀಣ ಭಾಗದಲ್ಲಿ ನರೇಗಾ ಯೋಜನೆಯಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರು ಪ್ರಮುಖ ಘಟ್ಟದಲ್ಲಿ ಬರುವುದರಿಂದ ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡಲ್ಲಿ ಕೋವಿಡ್‌ನಿಂದ ಪಾರಾಗಬಹುದು" ಎಂದರು.

ನರೇಗಾ ಯೋಜನೆಯಡಿ ಪ್ರಸ್ತುತ ಪ್ರತಿ ದಿನಕ್ಕೆ ಕೂಲಿ 289 ರೂ. ನಿಗದಿ ಮಾಡಲಾಗಿದೆ ಮತ್ತು ಉಪಕರಣಗಳ ಬಳಕೆಗಾಗಿ (ಗುದ್ದಲಿ, ಸಲಿಕೆ ಹರಿತಕ್ಕಾಗಿ) 10 ರೂ. ಹೆಚ್ಚುವರಿಯಾಗಿ ಪಾವತಿಸಲು ಅವಕಾಶವಿದೆ.
ಉದ್ಯೋಗಕ್ಕಾಗಿ ಜನರು ಸ್ಥಳೀಯ ಗ್ರಾಮ ಪಂಚಾಯತಿಯನ್ನು ಸಂಪರ್ಕಿಸಿದರೆ ಸಾಮುದಾಯಿಕ ಕಾಮಗಾರಿಗಳಾದ ಕೆರೆ ಹೂಳೆತ್ತುವುದು, ಚೆಕ್ ಡ್ಯಾಂ ಹೂಳೆತ್ತುವದು, ಕೃಷಿಹೊಂಡ ನಿರ್ಮಾಣ ಮತ್ತು ಬದು ನಿರ್ಮಾಣ ಮುಂತಾದ ಕಾಮಗಾರಿಗಳಲ್ಲಿ ಪಾಲ್ಗೊಳ್ಳಬಹುದುದ.
ಕೆಲಸ ನಿರ್ವಹಿಸಿದ ಬಳಿಕ ಕೂಲಿಯನ್ನು ನೇರವಾಗಿ ತಮ್ಮ ಬ್ಯಾಂಕ್ ಖಾತೆಗೆ ಪಡೆಯಬಹುದು. ನಗರ ಪ್ರದೇಶಗಳಲ್ಲಿ ಲಾಕ್‌ಡೌನ್ ಆದ ಕಾರಣ ಬಹಳಷ್ಟು ಕೂಲಿಕಾರರು ಗ್ರಾಮಗಳಿಗೆ ವಾಪಸ್ ಆಗಿದ್ದು, ಗ್ರಾಮ ಪಂಚಾಯತಿಯಿಂದ ಕೂಲಿ ಕೆಲಸ ನೀಡಲಾಗಿದೆ.
ಈ ವರ್ಷದ ಏಪ್ರಿಲ್‌ನಿಂದ ಜೂನ್ ತನಕ 24595 ಮಾನವ ದಿನಗಳ ಕೆಲಸವನ್ನು ಮಾಡಿಸುವ ಗುರಿ ಇದೆ. ಒಟ್ಟು 32,501 ಮಾನವ ದಿನಗಳನ್ನು ಸೃಜಿಸಲಾಗಿದ್ದು, 2,251 ಕೂಲಿಕಾರರಿಗೆ ಕೂಲಿ ಕೆಲಸ ಒದಗಿಸಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications