ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶುಕ್ರವಾರದಿಂದ ಭಕ್ತರಿಗೆ ಹುಲಿಗೆಮ್ಮ ದೇವಿ ದರ್ಶನ

|
Google Oneindia Kannada News

ಕೊಪ್ಪಳ, ನವೆಂಬರ್ 06: ಕೊಪ್ಪಳ ತಾಲೂಕಿನ ಹುಲಿಗಿಯ ಹುಲಿಗೆಮ್ಮ ದೇವಿ ದೇವಾಲಯಕ್ಕೆ ಶುಕ್ರವಾರದಿಂದ ಭಕ್ತರು ಭೇಟಿ ನೀಡಬಹುದಾಗಿದೆ. ಕೋವಿಡ್ ಲಾಕ್ ಡೌನ್ ಘೋಷಣೆ ಬಳಿಕ ದೇವಾಲಯಕ್ಕೆ ಭಕ್ತರ ಭೇಟಿ ನಿಷೇಧಿಸಲಾಗಿತ್ತು.

ಸರ್ಕಾರದ ಆದೇಶದಂತೆ ದೇವಾಲಯಕ್ಕೆ ಭಕ್ತರ ಭೇಟಿಗೆ ಅವಕಾಶ ನೀಡಲಾಗಿದೆ ಎಂದು ಕೊಪ್ಪಳ ಜಿಲ್ಲಾಡಳಿತ ಹೇಳಿದೆ. ಕೋವಿಡ್ ಲಾಕ್ ಡೌನ್ ಘೋಷಣೆ ಮಾಡಿದ ದಿನದಿಂದ ಇಲ್ಲಿಯ ತನಕ ಭಕ್ತರ ದೇವಿಯ ದರ್ಶನ ಪಡೆಯಲು ಅವಕಾಶವಿರಲಿಲ್ಲ.

ಸಿಗಂದೂರು ದೇವಾಲಯ ಮುಜರಾಯಿ ಇಲಾಖೆಗೆ; ಯಡಿಯೂರಪ್ಪ ಹೇಳಿದ್ದೇನು? ಸಿಗಂದೂರು ದೇವಾಲಯ ಮುಜರಾಯಿ ಇಲಾಖೆಗೆ; ಯಡಿಯೂರಪ್ಪ ಹೇಳಿದ್ದೇನು?

ದೇವಾಲಯಕ್ಕೆ ಬರುವ ಭಕ್ತರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರೆ ನೀಡಲಾಗಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಅಗತ್ಯವಾಗಿದೆ.

ಕಲ್ಲಂಗಡಿ ಬೆಳೆದು ಲಕ್ಷ-ಲಕ್ಷ ಸಂಪಾದಿಸಿದ ಕೊಪ್ಫಳ ರೈತ ಕಲ್ಲಂಗಡಿ ಬೆಳೆದು ಲಕ್ಷ-ಲಕ್ಷ ಸಂಪಾದಿಸಿದ ಕೊಪ್ಫಳ ರೈತ

Devotees Allowed To Huligemma Temple From November 6

ಚಿಕ್ಕ ಮಕ್ಕಳು, ವೃದ್ಧರು ಹಾಗೂ ಅನಾರೋಗ್ಯ ಪೀಡಿತರಿಗೆ ದೇವಾಲಯಕ್ಕೆ ಪ್ರವೇಶವಿಲ್ಲ. ದೇವರ ದರ್ಶನ ಹೊರತುಪಡಿಸಿ ಬೇರೆ ಯಾವುದೇ ಸೇವೆಗಳನ್ನು ಆರಂಭಿಸಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಹಿಂದೂ ಧರ್ಮದ ಪ್ರಸಿದ್ಧ ದೇವಾಲಯ ಚಿದಂಬರಂ ಬಗ್ಗೆ ಗಾಲಿ ರೆಡ್ಡಿ ಹಿಂದೂ ಧರ್ಮದ ಪ್ರಸಿದ್ಧ ದೇವಾಲಯ ಚಿದಂಬರಂ ಬಗ್ಗೆ ಗಾಲಿ ರೆಡ್ಡಿ

ದೇವಾಲಯದಲ್ಲಿ ಭಕ್ತರು ವಾಸ್ತವ್ಯ ಹೂಡಲು, ದಾಸೋಹ, ಪ್ರಸಾದ, ತೀರ್ಥ ವ್ಯವಸ್ಥೆ ಇರುವುದಿಲ್ಲ. ಭಕ್ತರು ಕೋವಿಡ್ ನಿಯಮಗಳನ್ನು ಪಾಲನೆ ಮಾಡುತ್ತಾ ಜಿಲ್ಲಾಡಳಿತ ಜೊತೆ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಪುರಾಣ ಪ್ರಸಿದ್ಧ ಹುಲಿಗಿಯ ಹುಲಿಗೆಮ್ಮ ದೇವಾಲಯಕ್ಕೆ ಕರ್ನಾಟಕ ಮಾತ್ರವಲ್ಲ ಆಂಧ್ರಪ್ರದೇಶ, ಮಹಾರಾಷ್ಟ್ರದಿಂದಲೂ ಭಕ್ತರು ಆಗಮಿಸುತ್ತಾರೆ. ಆದ್ದರಿಂದ ಕೋವಿಡ್ ಹಬ್ಬುವ ಆತಂಕದಿಂದ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು.

Recommended Video

BJP ಯುವ ಮೋರ್ಚಾ ಕಾರ್ಯಕರ್ತರ ಹೋರಾಟ!! | Arnab Goswami | Oneindia Kannada

ಗುರುವಾರ ಕೊಪ್ಪಳ ಜಿಲ್ಲೆಯಲ್ಲಿ 8 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 13,453. ಸಕ್ರಿಯ ಪ್ರಕರಣಗಳ ಸಂಖ್ಯೆ 190.

English summary
Koppal district administration allowed devotees visit to famous Huligemma temple from November 6, 2020. Temple closed for devotees after the announcement of lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X