ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೂಲಿಬೆಲೆಗೆ ದೇಶದ್ರೋಹಿ ಎಂದಿಲ್ಲ: ಕೇಂದ್ರ ಸಚಿವ ಸದಾನಂದ ಗೌಡ ಸ್ಪಷ್ಟನೆ

|
Google Oneindia Kannada News

ಗಂಗಾವತಿ, ಅಕ್ಟೋಬರ್ 5: ದೇಶದ್ರೋಹಿ ಎಂಬ ಹೇಳಿಕೆ ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಉದ್ದೇಶಿಸಿ ಹೇಳಿದ್ದಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿವಿ ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ: ಡಿವಿಎಸ್ ಪರೋಕ್ಷ ಆರೋಪಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ: ಡಿವಿಎಸ್ ಪರೋಕ್ಷ ಆರೋಪ

ಶನಿವಾರ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

'ಅನವಶ್ಯಕವಾಗಿ ಮಾತನಾಡುವವರು, ಸುಳ್ಳು ಸುದ್ದಿಗಳನ್ನು ಹರಡುವವರನ್ನು ಕುರಿತು ದೇಶದ್ರೋಹಿ ಎಂದು ಹೇಳಿದ್ದೇನೆಯೇ ವಿನಾ ಚಕ್ರವರ್ತಿ ಸೂಲಿಬೆಲೆ ಅವರಿಗೆ ಅಲ್ಲ. ನನ್ನ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆಯಿರಲಿ' ಎಂದು ಹೇಳಿದರು.

Did Not Called Chakravarty Sulibele As a Traitor DV Sadananda Gowda

ರಾಜ್ಯದಿಂದ ಬಿಜೆಪಿಯ 25 ಸಂಸದರು ಇದ್ದರೂ ನೆರೆ ಪರಿಹಾರಕ್ಕಾಗಿ ಏನನ್ನೂ ಮಾಡಿಲ್ಲ ಎಂಬ ಆರೋಪ ಮನಸ್ಸಿಗೆ ನೋವುಂಟು ಮಾಡಿತ್ತು. ಕೇಂದ್ರ ಸರ್ಕಾರವು ಪ್ರವಾಹ ಸಮಸ್ಯೆಯ ಪರಿಹಾರಕ್ಕಾಗಿ 1,200 ಕೋಟಿ ರೂ. ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹಣ ಬಿಡುಗಡೆ ಮಾಡಲಿದೆ ಎಂದು ತಿಳಿಸಿದರು.

'ಸೂಲಿಬೆಲೆ ದೇಶದ್ರೋಹಿ': ಸದಾನಂದಗೌಡ ವಿರುದ್ಧ ಮುಗಿಬಿದ್ದ ಬಿಜೆಪಿ ಬೆಂಬಲಿಗರು'ಸೂಲಿಬೆಲೆ ದೇಶದ್ರೋಹಿ': ಸದಾನಂದಗೌಡ ವಿರುದ್ಧ ಮುಗಿಬಿದ್ದ ಬಿಜೆಪಿ ಬೆಂಬಲಿಗರು

ಮಳೆ ಬರುವ ಸಂದರ್ಭದಲ್ಲಿ ನೀಡುವ ಪರಿಹಾರದ ಹಣ ಯಾವುದಕ್ಕೂ ಉಪಯೋಗವಾಗುವುದಿಲ್ಲ. ಮಳೆ ನಿರಂತರವಾಗಿ ಮುಂದುವರಿದಿದ್ದರಿಂದ ಪರಿಹಾರ ಘೋಷಣೆ ಮಾಡಿರಲಿಲ್ಲ. ಎರಡು ತಿಂಗಳು ವಿಳಂಬವಾಗಿ ಪರಿಹಾರ ನೀಡಲಾಗಿದೆ ಎಂದರೆ ಮಳೆ ನಿಂತ ಮೇಲೆ ಪರಿಹಾರಕ್ಕೆ ಬಳಕೆಯಾಗುತ್ತದೆ ಎಂದು. ದೇಶದ 9 ರಾಜ್ಯಗಳಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ. ಇವುಗಳ ಪೈಕಿ ಕರ್ನಾಟಕಕ್ಕೆ ಮೊದಲು ಪರಿಹಾರವನ್ನು ನೀಡಲಾಗಿದೆ. ಈ ವಾಸ್ತವಗಳನ್ನು ಅರ್ಥ ಮಾಡಿಕೊಂಡ ಬಳಿಕ ಟೀಕೆ ಮಾಡಲಿ ಎಂದು ವಿರೋಧಿಗಳಿಗೆ ಹೇಳಿದರು.

ದೇಶದ್ರೋಹಿ ಹೇಳಿಕೆಗೆ ಕ್ಷಮೆ ಕೋರುತ್ತೇನೆ, ಆದರೆ ಹಿಂಪಡೆಯೊಲ್ಲ: ಡಿವಿಎಸ್ದೇಶದ್ರೋಹಿ ಹೇಳಿಕೆಗೆ ಕ್ಷಮೆ ಕೋರುತ್ತೇನೆ, ಆದರೆ ಹಿಂಪಡೆಯೊಲ್ಲ: ಡಿವಿಎಸ್

ಅನಂತಕುಮಾರ್ ಅವರ ನಿಧನದ ಬಳಿಕ ಯಾವ ಸಂಸದರೂ ಕೇಂದ್ರ ನಾಯಕರೊಂದಿಗೆ ಉತ್ತಮ ಸಂಪರ್ಕ ಹೊಂದಿಲ್ಲ ಎಂಬ ಆರೋಪಕ್ಕೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ಎರಡು ದಿನಗಳ ಹಿಂದಷ್ಟೇ ಮೋದಿ ಮತ್ತು ಅಮಿತ್ ಶಾ ಅವರನ್ನು ಭೇಟಿಯಾಗಿದ್ದೆ. ಒಂದೇ ದಿನದಲ್ಲಿ ಪರಿಹಾರ ಘೋಷಣೆ ಮಾಡಿದ್ದಾರೆ ಎಂದರೆ ನೀವೇ ಅರ್ಥಮಾಡಿಕೊಳ್ಳಬೇಕು. ಇದು ನಮ್ಮ ಕರ್ತವ್ಯ. ಇದರಲ್ಲಿ ಪ್ರಶಂಸೆ ತೆಗೆದುಕೊಳ್ಳುವುದೇನೂ ಇಲ್ಲ ಎಂದರು.

English summary
Union Minister DV Sadananda Gowda on Saturday in Gangavati made clarification that, he didn't called Chakravarty Sulibele as a traitor.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X