ಮೇ 10ರಂದು ಮತದಾನ, ಕೊಪ್ಪಳ ಜಿಲ್ಲಾಡಳಿತದ ಸಿದ್ಧತೆಗಳು

ಕೊಪ್ಪಳ, ಮೇ 8; ಕರ್ನಾಟಕ ವಿಧಾನಸಭೆ ಚುನಾವಣೆಯ ಮೇ 10ರ ಮತದಾನಕ್ಕೆ ಮತ್ತು ಮೇ 13ರಂದು ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜಾಗಿದೆ. ಚುನಾವಣಾ ಕಾರ್ಯಗಳು ಸುಗಮವಾಗಿ ಸಾಗಲು ಎಲ್ಲರೂ ಸಹಕಾರ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ, ಕೊಪ್ಪಳ ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ಮನವಿ ಮಾಡಿದರು.

ಸೋಮವಾರ ಜಿಲ್ಲಾಡಳಿತ ಭವನದಲ್ಲಿ ಅವರು ಮತದಾನದ ಸಿದ್ಧತೆ ಕುರಿತು ಪತ್ರಿಕಾಗೋಷ್ಠಿ ನಡೆಸಿದರು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

District Administration Koppal All Set For Voting On May 10

ಈ ಬಾರಿಯ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ 5,66,381 ಪುರುಷರು ಹಾಗೂ 5,70,407 ಮಹಿಳೆಯರು ಮತ್ತು ಇತರೆ 50 ಸೇರಿ ಒಟ್ಟು 11,36,838 ಮತದಾರರು ಮತದಾನಕ್ಕೆ ಅರ್ಹರು. ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಒಟ್ಟು 30,511 ಯುವ ಮತದಾರರು, 14,145 ವಿಕಲಚೇತನರು, 80 ವರ್ಷ ಮೇಲ್ಪಟ್ಟ 18,309 ಮತ್ತು 536 ಸೇವಾ ಮತರರಿದ್ದಾರೆ.

ಒಟ್ಟು 5 ವಿಧಾನಸಭಾ ಕ್ಷೇತ್ರಗಳು; ಕೊಪ್ಪಳ ಜಿಲ್ಲೆಯಲ್ಲಿ ಕೊಪ್ಪಳ, ಕನಕಗಿರಿ, ಯಲಬುರ್ಗ, ಗಂಗಾವತಿ ಮತ್ತು ಕುಷ್ಟಗಿ ಸೇರಿ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿವೆ. ಮತದಾನಕ್ಕಾಗಿ ಒಟ್ಟು 1,322 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಇವುಗಳಲ್ಲಿ 28 ಮಾದರಿ ಮತಗಟ್ಟೆ, 12 ಸಖಿ ಮತಗಟ್ಟೆ, ತಲಾ 5 ವಿಶೇಷಚೇತನರ ಮತಗಟ್ಟೆ ಮತ್ತು ಯುವ ಸಿಬ್ಬಂದಿ ನಿರ್ವಹಿಸುವ ಮತಗಟ್ಟೆಗಳಿವೆ.

ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿಕಲಚೇತನರಿಗೆ ರ‍್ಯಾಂಪ್ ವ್ಯವಸ್ಥೆ, ವಿದ್ಯುತ್ ಸಂಪರ್ಕ, ನೆರಳಿನ ವ್ಯವಸ್ಥೆ ಮಾಡಲಾಗಿದೆ. ವಿಕಲಚೇತನರಿಗೆ ಅನುಕೂಲವಾಗಲು ಪ್ರತಿ ಮತಟ್ಟೆಗಳಲ್ಲಿ ಗಾಲಿ ಕುರ್ಚಿ ಮತ್ತು ಭೂತಗನ್ನಡಿಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಮತಗಟ್ಟೆಗಳಲ್ಲಿ ಅಂಧ ಮತದಾರರಿಗೆ ಅನುಕೂಲವಾಗಲು ಬ್ರೈಲ್ ಮಾದರಿ ಮತಪತ್ರಗಳನ್ನು ಸಹ ಇರಿಸಲಾಗಿದೆ.

District Administration Koppal All Set For Voting On May 10

ಮತದಾನದ ಬಳಿಕ ಮತಯಂತ್ರ ಮತ್ತು ದಾಖಲೆಗಳನ್ನು ಮತ ಎಣಿಕೆ ಕೇಂದ್ರವಾದ ಗವಿಸಿದ್ಧೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ಇಲ್ಲೇ ಮತ ಎಣಿಕೆ ಕಾರ್ಯ ಮೇ 13ರಂದು ನಡೆಯಲಿದೆ. ಮತಯಂತ್ರಗಳನ್ನು ಇಟ್ಟಿರುವ ಭದ್ರತಾ ಕೊಠಡಿಗಳಿಗೆ 3 ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಟಿಯಿಂದ ಮತ್ತು ಮುಕ್ತ, ಶಾಂತ ಹಾಗೂ ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸಲು ಮೇ 8ರ ಸಂಜೆ 5 ಗಂಟೆಯಿಂದ ಮೇ 10ರ ರಾತ್ರಿ 11 ಗಂಟೆಯವರೆಗೆ ಎಲ್ಲಾ ತರಹದ ಮದ್ಯ ತಯಾರಿಕೆ, ಮಾರಾಟ, ಸಂಗ್ರಹಣೆ ಹಾಗೂ ಸಾಗಣೆ ನಿರ್ಬಂಧಿಸಲಾಗಿದೆ.

ಬಸ್ ಸಂಚಾರದಲ್ಲಿ ವ್ಯತ್ಯಯ; ಚುನಾವಣಾ ಕಾರ್ಯಕ್ಕಾಗಿ ಮತಗಟ್ಟೆಗಳಿಗೆ ವೆಬ್‌ಕಾಸ್ಟಿಂಗ್, ಸಿಎಪಿಎಫ್, ಮೈಕ್ರೋ ಆಬ್ಜರ್ವರ್‌ಗಳ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿನ ಎಲ್ಲಾ ಮತದಾರರಿಗೆ ಮತದಾರರ ಮಾಹಿತಿ ಚೀಟಿಗಳನ್ನು ಮತ್ತು ಪ್ರತಿ ಮನೆಗಳಿಗೆ ಮತದಾರರ ಮಾರ್ಗದರ್ಶಿಗಳನ್ನು ಹಂಚಿಕೆ ಮಾಡಲಾಗಿದೆ.

ಮೇ 9ರಂದು ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕಾರ್ಯವನ್ನು ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಕೈಗೊಳ್ಳಲಾಗುತ್ತಿದ್ದು, ಚುನಾವಣಾಧಿಕಾರಿಗಳು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡಿರುತ್ತಾರೆ. ಎಲ್ಲ ಅರ್ಹ ಮತದಾರರು ತಪ್ಪದೇ ಮತ ಚಲಾವಣೆ ಮಾಡಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.

ಮೇ 10ರ ಬುಧವಾರ ಚುನಾವಣೆ ನಡೆಯುವುದರಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದಿಂದ 208 ವಾಹನಗಳನ್ನು ಚುನಾವಣಾ ಕರ್ತವ್ಯದ ಸಿಬ್ಬಂದಿಗಳಿಗೆ ನೀಡಲಾಗಿದೆ. ಆದ್ದರಿಂದ ಮೇ 9 ಮತ್ತು ಮೇ 10ರಂದು ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಕರಿಸುವಂತೆ ಮನವಿ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+