ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೈದ್ಯರು ಸರ್ಕಾರಿ ಸೇವೆಯತ್ತ ಹೆಚ್ಚಿನ ಆಸಕ್ತಿ ತೋರಲಿ: ಬಿ.ಸಿ.ಪಾಟೀಲ್

By ಕೊಪ್ಪಳ ಪ್ರತಿನಿಧಿ
|
Google Oneindia Kannada News

ಕೊಪ್ಪಳ, ಮೇ 18: ಉನ್ನತ ವೈದ್ಯಕೀಯ ಶಿಕ್ಷಣ ಪಡೆದ ನಂತರ ವೈದ್ಯರು ಖಾಸಗಿ ಸೇವೆಗಿಂತ ಸರ್ಕಾರಿ ಸೇವೆಗೆ ಹೆಚ್ಚಿನ ಆಸಕ್ತಿ ತೋರಲಿ ಎಂದು ಕೃಷಿ ಸಚಿವ, ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟರು.

ಪ್ರಗತಿಪರಿಶೀಲನಾ ಸಭೆಗೂ ಮುನ್ನ ಇಲ್ಲಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕೊಪ್ಪಳ ಅಷ್ಟೇ ಅಲ್ಲದೇ ರಾಜ್ಯದ ಬಹುತೇಕ ಕಡೆ ಸರ್ಕಾರಿ ವೈದ್ಯರ ಕೊರತೆಯಿದೆ. ಇದಕ್ಕೆ ವೈದ್ಯರು ಖಾಸಗಿ ಸೇವೆಯತ್ತ ಹೆಚ್ಚು ಆಸಕ್ತಿ ತೋರುತ್ತಿರುವುದೇ ಕಾರಣ. ವೈದ್ಯರು ಸರ್ಕಾರಿ ಸೇವೆಗೆ ಹೆಚ್ಚಿನ ಆದ್ಯತೆ ಕೊಡಲಿ. ಇದರಿಂದ ಗ್ರಾಮೀಣ ಜನರಲ್ಲಿಯೂ ಸರ್ಕಾರಿ ವೈದ್ಯರ ಬಗ್ಗೆ ಉತ್ತಮ ಅಭಿಪ್ರಾಯ ಮೂಡಲು ಸಾಧ್ಯ. ಸರ್ಕಾರ ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಿದೆ" ಎಂದರು.

 ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೃಷಿ ಸಚಿವ ಬಿ.ಸಿ.ಪಾಟೀಲ್

Doctors Should Come To Public Service Said BC Patil

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ತಾವು ಕಳೆದ ತಿಂಗಳು ಕೋವಿಡ್-19 ಲಾಕ್ ಡೌನ್ ನಿಂದ ರೈತರು ಮತ್ತು ಕೃಷಿ ಚಟುವಟಿಕೆಗಳ ಸ್ಥಿತಿಗತಿ ಬಗ್ಗೆ ಅರಿಯಲು ಭೇಟಿ ನೀಡಿ ಸಭೆ ನಡೆಸಿದ್ದು, ಈಗ ತಾವು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚರ್ಚಿಸಲು ಎಲ್ಲಾ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲು ಆಗಮಿಸಿರುವುದಾಗಿ ಬಿ.ಸಿ.ಪಾಟೀಲ್ ತಿಳಿಸಿದರು.

English summary
To solve the problem of shortage of government doctors, doctors should come to publisc service said agriculture minister bc patil in koppal,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X