ಕಾರು ಜಪ್ತಿಗೆ ಬಂದರೂ ಕೀ ಕೊಡದ ಕೊಪ್ಪಳ ಡಿಸಿ: ಏನಿದು ಪ್ರಕರಣ ತಿಳಿಯಿರಿ
ಕೊಪ್ಪಳ, ಏಪ್ರಿಲ್, 19: ಕೊಪ್ಪಳ ಜಿಲ್ಲಾಧಿಕಾರಿ ನಳೀನ್ ಅತುಲ್ ನ್ಯಾಯಾಂಗ ನಿಂದನೆಗೆ ಗುರಿಯಾಗಿದ್ದಾರೆ. ಪ್ರಕರಣವೊಂದದರ ವಿಚಾರಣೆ ನಡೆಸಿದ್ದ ಗಂಗಾವತಿಯ ಕೋರ್ಟ್ ಡಿಸಿ ಕಾರನ್ನು ಜಪ್ತಿ ಮಾಡಲು ಆದೇಶ ಹೊರಡಿಸಿತ್ತು. ಆದರೆ ಕಾರು ಜಪ್ತಿ ಮಾಡಲು ಕೋರ್ಟ್ ಅಧಿಕಾರಿಗಳು ಹೋದ ವೇಳೆ ಕೀ ಕೊಡಲು ಹಿಂದೇಟು ಹಾಕಿದ್ದಾರೆ. ಹಾಗಾದ್ರೆ ಏನಿದು ಪ್ರಕರಣ ಎಂದು ಇಲ್ಲಿ ತಿಳಿಯಿರಿ.
ಗಂಗಾವತಿ ನಗರಸಭೆ ವಾಲ್ಮೀಕಿ ವೃತ್ತದಿಂದ ಜಯನಗರ ಬಡಾವಣೆವರೆಗೆ ರಸ್ತೆ ಅಗಲೀಕರಣ ಮಾಡಲಾಗಿದೆ. ಈ ವೇಳೆ ಗಂಗಾವತಿಯ ಕಲ್ಮಠ ಹಾಗೂ ವೀರುಪಾಕ್ಷಪ್ಪ ಅವರ ಭೂಮಿ ಒತ್ತುವರಿ ಮಾಡಿ ರಸ್ತೆ ಅಗಲೀಕರಣ ಮಾಡಲಾಗಿದೆ. ಮಾಲೀಕರ ಗಮನಕ್ಕೆ ತರದೆ, ರಸ್ತೆ ಅಗಲೀಕರಣ ಮಾಡಲಾಗಿದೆ. ಅಲ್ಲದೆ, ಪರಿಹಾರ ಕೊಡದ ಹಿನ್ನೆಲೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

ಸುದೀರ್ಘ 6 ವರ್ಷಗಳ ಕಾಲ ವಿಚಾರಣೆ ನಡೆಸಿದ್ದ ಕೋರ್ಟ್ ಜಿಲ್ಲಾಧಿಕಾರಿಯ ಕಾರು ಜಪ್ತಿ ಮಾಡಲು ಆದೇಶಿಸಿತ್ತು. ವಿಚಾರಣೆ ಬಳಿಕ ಕಲ್ಮಠಕ್ಕೆ ಸುಮಾರು 7 ಲಕ್ಷ ರೂಪಾಯಿ, ವಿರೂಪಾಕ್ಷಪ್ಪ ಅವರಿಗೆ 6 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಿತ್ತು. ಆದರೆ, ಇದುವರೆಗೂ ಯಾವುದೇ ಪರಿಹಾರ ಸಿಕ್ಕಿರಲಿಲ್ಲ. ಆದ್ದರಿಂದ ಮಾಲೀಕರು ಮತ್ತೊಮ್ಮೆ ಕೋರ್ಟ್ ಮೊರೆ ಹೋದಾಗ ಗಂಗಾವತಿಯ ಹಿರಿಯ ಶ್ರೇಣಿಯ ನ್ಯಾಯಾಲಯ ಕಾರು ಜಪ್ತಿ ಮಾಡಲು ಆದೇಶಿಸಿತ್ತು.
ಲೋಕಾಯುಕ್ತ ದಾಳಿ: ಇತ್ತೀಚೆಗಷ್ಟೇ ದಾವಣಗೆರೆ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಜಿಲ್ಲಾ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಘಟಕದ ಜಿಲ್ಲಾ ಸಾಂಖಿಕ ಅಧಿಕಾರಿ ಡಾ.ಜಿ.ಎಸ್.ನಾಗರಾಜು ಅವರಿಗೆ ಸೇರಿದ 5 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.
ನಗರದ ಎಸ್.ನಿಜಲಿಂಗಪ್ಪ ಬಡಾವಣೆಯ ನಾಗರಾಜು ಅವರ ಮನೆ, ತಂದೆ ಷಣ್ಮುಖಪ್ಪ ಅವರ ನಿವಾಸ, ಫಾರಂಹೌಸ್, ಕಚೇರಿ ಹಾಗೂ ಕುಟುಂಬದ ಕಿಡಿತದಲ್ಲಿರುವ ಸಹಕಾರ ಸಂಘದ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಚಿನ್ನಾಭರಣ, ಹಣ ಸೇರಿದಂತೆ ಅಪಾರ ಸಂಪತ್ತು ಪತ್ತೆಯಾಗಿತ್ತು.
ಆದಾಯಕ್ಕಿಂತ ಹೆಚ್ಚು ಸಂಪತ್ತು ಹೊಂದಿದ ಆರೋಪದ ಮೇಲೆ ನಾಗರಾಜು ಅವರಿಗೆ ಸೇರಿದ 5 ಸ್ಥಳಗಳ ಮೇಲೆ ದಾಳಿ ನಡೆದಿದೆ. ಡಿವೈಎಸ್‌ಪಿ, ಎನ್ಸ್‌ಪೆಕ್ಟರ್ ಸೇರಿ ಹಲವು ಸಿಬ್ಬಂದಿ ದಾಳಿ ನಡೆಸಿದ್ದಾರೆ. ಇದೀಗ ದಾಳಿ ಸ್ಥಳಗಳಲ್ಲಿ ಪರಿಶೀಲನೆ ಕಾರ್ಯ ನಡೆಯುತ್ತಿದೆ ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್.ಕೌಲಾಪುರ ಮಾಹಿತಿ ನೀಡಿದ್ದರು.
ಯಾವ ಜಿಲ್ಲೆಗಳಲ್ಲಿ 'ಲೋಕಾ' ದಾಳಿ?: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಕೋಲಾರ, ತುಮಕೂರು, ಕಲಬುರಗಿ, ವಿಜಯಪುರ, ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿತ್ತು.












Click it and Unblock the Notifications