ರೈತರ ಮಕ್ಕಳಿಗೆ ಕನ್ಯೆ ಹುಡುಕಿಕೊಡಿ ಸಾರ್..ಪುಣ್ಯ ಬರುತ್ತೆ: ಕೊಪ್ಪಳದ ಜಿಲ್ಲಾಧಿಕಾರಿಗೆ ಯುವಕ ಮನವಿ
ಕೊಪ್ಪಳ, ಜೂನ್, 26: ಇತ್ತೀಚಿನ ದಿನಗಳಲ್ಲಿ ರೈತರ ಮಕ್ಕಳಿಗೆ ಕನ್ಯೆ ಸಿಗುವುದೇ ಕಷ್ಟವಾಗಿಬಿಟ್ಟಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದರ ನಡುವೆಯೇ ಇದೀಗ ಯುಕವನೊಬ್ಬ ಜಿಲ್ಲಾಧಿಕಾರಿಗೆ ವಿಶೇಷ ಬೇಡಿಕೆಯೊಂದನ್ನು ಇಟ್ಟು ಗಮನ ಸೆಳೆದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳದಲ್ಲಿ ಇಂದು (ಜೂನ್ 26) ಜನಸ್ಪಂದನ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಯುವಕನೊಬ್ಬ "ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ," ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಡೆದಿದೆ.

ಕನಕಗಿರಿ ಪಟ್ಟಣದ ಎಪಿಎಂಸಿ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಟ್ಟಣದ ನಿವಾಸಿ ಸಂಗಪ್ಪ ಎಂಬಾತ ಕೊಪ್ಪಳ ಜಿಲ್ಲಾಧಿಕಾರಿ ನಲೀನ್ ಅತುಲ್ಗೆ ಅರ್ಜಿ ನೀಡಿ, "ನಾನು ಕೃಷಿಕ ಕುಟುಂಬಕ್ಕೆ ಸೇರಿದ್ದೇನೆ. ಕಳೆದ 10 ವರ್ಷಗಳಿಂದ ಕನ್ಯಾ ಹುಡುಕುತ್ತಿದ್ದೇನೆ. ಆದರೆ, ಇಲ್ಲಿಯವರಗೆ ಯಾವುದೇ ಹುಡುಗಿ ವಿವಾಹ ಮಾಡಿಕೊಳ್ಳಲು ಒಪ್ಪುತ್ತಿಲ್ಲ. ಇದರಿಂದ ನಾನು ಮಾನಸಿಕವಾಗಿ ನೊಂದಿದ್ದೇನೆ," ಎಂದು ಅಳಲು ತೋಡಿಕೊಂಡಿದ್ದಾನೆ.
ಇನ್ನು "ಸರ್ಕಾರದಿಂದ ಒಂದೊಳ್ಳೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಆ ಮೂಲಕ ರೈತರ ಮಕ್ಕಳ ಬಾಳು ಬೆಳಗಲು ನೆರವಾಗಬೇಕು," ಎಂದು ಮನವಿ ಸಲ್ಲಿಸಿದ್ದಾರೆ. ಬಳಿಕ ಯುವಕನ ಮನವಿ ಕೇಳಿದ ಜಿಲ್ಲಾಧಿಕಾರಿ ನಕ್ಕು ನಕ್ಕು ಸಾಕಾಗಿದ್ದಾರೆ. ಇನ್ನು ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿ ಯುವಕನ ಮನವಿ ಪತ್ರವನ್ನು ಸ್ವೀಕರಿಸಿದ್ದಾರೆ.
ರಥೋತ್ಸವಕ್ಕೆ ವರ್ತೂರ್ ಸಂತೋಷ್ ಭಾಗಿ: ಗುಂಡ್ಲುಪೇಟೆ ತಾಲೂಕಿನ ಕಂದೇಗಾಲದ ಸ್ಕಂದಗಿರಿ ಪಾರ್ವತಾಂಭ ರಥೋತ್ಸವವು ಗುರುವಾರ (ಮೇ 23) ವೈಭವದಿಂದ ನಡೆದಿದ್ದು, ಜಾತ್ರೆಗೆ ವಿಶೇಷ ಅತಿಥಿಯಾಗಿ ಬಿಗ್ ಬಾಸ್ ಸ್ಪರ್ಧಿ ಹಳ್ಳಿಕಾರ್ ಒಡೆಯ ವರ್ತೂರ್ ಸಂತೋಷ್ ಭಾಗಿಯಾಗಿ ಗಮನ ಸೆಳೆದರು.
ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಪಾರ್ವತಿ ಬೆಟ್ಟದಲ್ಲಿ ವರ್ಷಕ್ಕೊಮ್ಕೆ ನಡೆಯುವ ರಥೋತ್ಸವಕ್ಕೆ ಸಹಸ್ರಾರು ಮಂದಿ ಪಾಲ್ಗೊಂಡು ತೇರು ಎಳೆದು ಪುನೀತರಾದರು.
ದೇವಸ್ಥಾನ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಹಿನ್ನೆಲೆ, ತಾಲೂಕು ಆಡಳಿತದಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿತ್ತು. ಕಳೆದ ಎರಡು ವರ್ಷದ ಹಿಂದೆ ರಥೋತ್ಸವದ ಸಂದರ್ಭದಲ್ಲಿ ಚಕ್ರಕ್ಕೆ ಸಿಲುಕಿ ಕಂದೇಗಾಲ ಗ್ರಾಮದ ಸರ್ಪಭೂಷಣ್ ಹಾಗೂ ಕಬ್ಬಹಳ್ಳಿ ಗ್ರಾಮದ ಸ್ವಾಮಿ ಎಂಬ ಇಬ್ಬರು ಯುವಕರು ಮೃತ ಪಟ್ಟಿದ್ದರಿಂದ ಜಿಲ್ಲಾಡಳಿತವು ರಥೋತ್ಸವದ ವೇಳೆ ಯಾವುದೇ ಅಹಿತರಕರ ಘಟನೆ ಜರುಗದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಒಗದಿಸಿತ್ತು.
ರಥೋತ್ಸವಕ್ಕೆ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ, ಶಿಂಡನಪುರ, ಕೊಡಸೋಗೆ, ಸೋಮನಪುರ, ಬೊಮ್ಮಲಾಪುರ, ತೆರಕಣಾಂಬಿ ಸೇರಿದಂತೆ ನೆರೆ ಜಿಲ್ಲೆಗಳಿಂದಲೂ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು.












Click it and Unblock the Notifications