ಗಂಗಾವತಿ: ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಹಾಗೂ ಮಾರಾಟ
ಕೊಪ್ಪಳ, ಆಗಸ್ಟ್ 09 : ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮವು ಶ್ರಾವಣ ಮಾಸದಲ್ಲಿ ಬರಲಿರುವ ಸಾಲು ಸಾಲು ಹಬ್ಬಗಳ ನಿಮಿತ್ಯ, ಕರ್ನಾಟಕದ ಪಾರಂಪರಿಕ ಉತ್ಪನ್ನವಾದ ಮೈಸೂರು ಸಿಲ್ಕ್ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಗಸ್ಟ್ 13 ರಿಂದ 17 ರವರೆಗೆ ಐದು ದಿನಗಳ ಕಾಲ ಗಂಗಾವತಿ-ಆನೆಗೊಂದಿ ರಸ್ತೆಯಲ್ಲಿನ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದೆ.
ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮವು ಆರನೆ ಬಾರಿಗೆ ಗಂಗಾವತಿಯಲ್ಲಿ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಹಮ್ಮಿಕೊಂಡಿದ್ದು, ಗಂಗಾವತಿಯ ಸರೋಜಮ್ಮ ಕಲ್ಯಾಣ ಮಂಟಪದಲ್ಲಿ ಮಾರಾಟ ಮೇಳ ನಡೆಯಲಿದೆ.
ಆ. 13 ರಿಂದ 17 ರವರೆಗೆ ಪ್ರತಿದಿನ ಬೆಳಗ್ಗೆ 10.00ರಿಂದ ರಾತ್ರಿ 8.00 ಗಂಟೆಯವರೆಗೆ ಐದು ದಿನಗಳ ಕಾಲ ಮೈಸೂರು ಸಿಲ್ಕ್ ಸೀರೆಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ವಿಶೇಷವಾಗಿ ಈ ಬಾರಿ ನಿಗಮವು ತನ್ನ ಉತ್ಪನ್ನಗಳ ಮೇಲೆ ಶೇ. 25 ರ ರಿಯಾಯಿತಿ ನೀಡಲಿದೆ. ಶ್ರಾವಣ ಮಾಸದಲ್ಲಿ ಬರುವ ವಿವಿಧ ಹಬ್ಬಗಳ ಸಡಗರವನ್ನು ಮೈಸೂರು ಸಿಲ್ಕ್ ರೇಷ್ಮೆ ಖರೀದಿಸುವುದರೊಂದಿಗೆ ಆಚರಿಸಲು ಇದು ಉತ್ತಮ ಅವಕಾಶವಾಗಿದೆ.

ಸಾಂಪ್ರದಾಯಿಕ ರೀತಿಯಲ್ಲದೆ, ಕೆ.ಎಸ್.ಐ.ಸಿ.ಯು ಈಗ ನಾಜೂಕಾದ ವಿನ್ಯಾಸದ ಸಂಗ್ರಹಿತ "ಕ್ರೇಪ್ ಡಿ ಚೈನ್" ಸೀರೆಗಳನ್ನು, "ಕಸೂತಿ" ಎಂಬ್ರಾಯಿಡರಿ ಸೀರೆಗಳನ್ನು ಹಾಗೂ ಜಾರ್ಜೆಟ್ ಮತ್ತು ಸಾದಾ ಮುದ್ರಿತ ಸೀರೆಗಳನ್ನು, ಟೈಯ್ಸ್, ಸ್ಕಾರ್ಫ್ ಇತ್ಯಾದಿ ಉತ್ಪನ್ನಗಳನ್ನು ಪ್ರದರ್ಶಿತಗೊಳಿಸುತ್ತಿದೆ.
ಇದಲ್ಲದೆ ನವನವೀನ "ವಿವಾಹ ಸಂಗ್ರಹ" ಸೀರೆಗಳನ್ನು ಪರಿಚಯಿಸಲಾಗಿದೆ ಹಾಗೂ ಕೆ.ಎಸ್.ಐ.ಸಿ.ಯು ಇತ್ತೀಚೆಗೆ ಹಲವು ವಿನ್ಯಾಸಗಳ ಸೀರೆಗಳನ್ನು ಉತ್ಪಾದಿಸಿ ಗ್ರಾಹಕರುಗಳಿಗೆ ಪರಿಚಯಿಸಿದೆ.
ಮೈಸೂರ್ ಸಿಲ್ಕ್ ಸೀರೆಗಳ ಸಾಂಪ್ರದಾಯಿಕ ರೀತಿಯ ಉತ್ಪಾದನೆ, ಬಟ್ಟೆಯಲ್ಲಿ ಅಳವಡಿಸಲಾಗಿರುವ ಹುರಿ ಮಾಡುವ ವಿಧಾನ, ಭಾರತದಲ್ಲಿ ದೊರೆಯುವ ಕ್ರೇಪ್ ಸಿಲ್ಕ್ ಬಟ್ಟೆಗಳಲ್ಲಿಯೇ ಅತ್ಯುತ್ತಮವಾಗಿರುವುದಲ್ಲದೆ, ಬಟ್ಟೆಗೆ ವಿಶೇಷ ಮೆರುಗನ್ನು ನೀಡಿದೆ.
ಮೈಸೂರ್ ಸಿಲ್ಕ್ಸ್ ಗೆ ಉಪಯೋಗಿಸಲ್ಪಡುವ ರೇಷ್ಮೆಯು ಪರಿಶುದ್ಧವಾಗಿದ್ದು ಹಾಗೂ ಜರಿಯು ಪರಿಶುದ್ಧ ಚಿನ್ನದ್ದಾಗಿದ್ದು, ಶೇ. 0.65 ಚಿನ್ನ ಮತ್ತು ಶೇ. 65 ರಷ್ಟು ಬೆಳ್ಳಿಯಿಂದ ತಯಾರಿಸಲ್ಪಟ್ಟಿದೆ. ವಿನ್ಯಾಸಗಳು ಸಾಂಪ್ರದಾಯಿಕ ಮತ್ತು ಆಧುನಿಕತೆಯಿಂದ ಕೂಡಿವೆ.
ಕೆ.ಎಸ್.ಐ.ಸಿ. ನಿಗಮಕ್ಕೆ 2016-17 ನೇ ಸಾಲಿನಲ್ಲಿ ಕರ್ನಾಟಕ ಸಾರ್ವಜನಿಕ ಉದ್ದಿಮೆಗಳಿಗೆ ಕೊಡಮಾಡುವ 'ಮುಖ್ಯಮಂತ್ರಿಗಳ ವಾರ್ಷಿಕ ರತ್ನ' ಪ್ರಶಸ್ತಿ ಲಭಿಸಿದೆ. ಕಸೂತಿ ಮೈಸೂರ್ ಸಿಲ್ಕ್ ಸೀರೆಗಳು ಬಹಳ ಮನಮೋಹಕ ಮತ್ತು ಇವುಗಳ ಸೌಂದರ್ಯ ಕಣ್ಸೆಳೆಯುತ್ತದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications