Get Updates
Get notified of breaking news, exclusive insights, and must-see stories!

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ; ನೋಡಲ್ ಅಧಿಕಾರಿಗಳ ನೇಮಕ

ಕೊಪ್ಪಳ, ಜನವರಿ 21: ಕೊಪ್ಪಳ ಜಿಲ್ಲಾಡಳಿತ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ತಯಾರಿ ನಡೆಸುತ್ತಿದೆ. ಜನವರಿ 23 ರಿಂದ 29ರ ವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸಿ, ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ.

ಜಾತ್ರಾ ಮಹೋತ್ಸವ 2024ಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸುತ್ತಾರೆ. ಆದ್ದರಿಂದ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಕಲ್ಪಿಸುವ, ನಿರ್ವಹಣೆ ಮಾಡುವ ಮೇಲುಸ್ತುವಾರಿಯನ್ನು ಮಾಡಲು ಉಪವಿಭಾಗಾಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಆದೇಶಿಸಿದ್ದಾರೆ.

koppal-jatre

ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ದೇಶದ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಸಾರ್ವಜನಿಕರು, ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ, ಆಹಾರ ವ್ಯವಸ್ಥೆ, ಜನ ಸಂದಣಿ ನಿರ್ವಹಣೆ ಹಾಗೂ ಇನ್ನಿತರ ಕಾರ್ಯಗಳಿಗಾಗಿ ಪೊಲೀಸ್ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಜೆಸ್ಕಾಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಗ್ನಿಶಾಮಕ ಇಲಾಖೆ, ಲೋಕೋಪಯೋಗಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.

ಜಾತ್ರೆಯ ದಿನಾಂಕ, ವಿವಿಧ ಕಾರ್ಯಕ್ರಮ; ಗವಿಸಿದ್ದೇಶ್ವರ ಸಂಸ್ಥಾನ, ಶ್ರೀ ಗವಿಮಠದಿಂದ ಜನವರಿ 23 ರಿಂದ 29ರ ವರೆಗೆ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ-2024ರ ನಿಮಿತ್ತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಜನವರಿ 27ರ ಶನಿವಾರದಂದು ಮಹಾ ರಥೋತ್ಸವ ನಡೆಯಲಿದೆ.

ಪೊಲೀಸ್ ಇಲಾಖೆಯಿಂದ ಕೊಪ್ಪಳ ಉಪ ಪೊಲೀಸ್ ಅಧೀಕ್ಷಕರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಜಾತ್ರೆಯ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್, ಸಿಸಿ ಕ್ಯಾಮರಾಗಳ ಅಳವಡಿಕೆ, ಜಾತ್ರಾ ಸ್ಥಳದಲ್ಲಿ ಔಟ್ ಪೊಲೀಸ್ ಸ್ಟೇಷನ್ ಪ್ರಾರಂಭ, ವಾಹನಗಳ ನಿಲುಗಡೆಗೆ ಸ್ಥಳ ಗುರುತಿಸುವುದು, ನಗರದ ವಿವಿಧ ಸ್ಥಳಗಳಲ್ಲಿ ಪಾರ್ಕಿಂಗ್ ನಕಾಶೆಯ ಬ್ಯಾನರ್‌ಗಳ ಅಳವಡಿಕೆ, ವಾಹನಗಳ ಸಂಚಾರ ನಿಯಂತ್ರಣಕ್ಕಾಗಿ ಸೂಕ್ತ ಪೊಲೀಸ್ ಸಿಬ್ಬಂದಿಗಳ ಹಾಗೂ ಅವಶ್ಯಕವಿದ್ದ ಸ್ಥಳಗಳಲ್ಲಿ ಗೃಹರಕ್ಷಕರ ನಿಯೋಜನೆ ಮುಂತಾದ ವಿಚಾರಗಳನ್ನು ಇವರು ನೋಡಿಕೊಳ್ಳಲಿದ್ದಾರೆ.

ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ಯೋಜನಾ ನಿರ್ದೇಶಕರು ಹಾಗೂ ಕೊಪ್ಪಳ ನಗರಸಭೆಯ ಪೌರಾಯುಕ್ತರು, ಸ್ವಚ್ಛತೆಗೆ ಆದ್ಯತೆ ನೀಡಿ, ಇದಕ್ಕಾಗಿ ವಿವಿಧ ತಾಲ್ಲೂಕುಗಳ ಹೆಚ್ಚುವರಿ ಪೌರ ಕಾರ್ಮಿಕರನ್ನು ನಿಯೋಜನೆ, ಘನತ್ಯಾಜ್ಯ ನಿರ್ವಹಣೆ, ಜಾತ್ರೆಗೆ ನಿಯೋಜಿಸಿದ ಎಲ್ಲಾ ಅಧಿಕಾರಿ ವರ್ಗದವರು ಒಂದೇ ಕಡೆ ಇರಲು ಅನುಕೂಲವಾಗುವಂತೆ ಕಂಟ್ರೋಲ್ ರೂಂ ಹಾಗೂ ಸಹಾಯವಾಣಿ ಕೇಂದ್ರದ ವ್ಯವಸ್ಥೆ, ನೀರು ಸರಬರಾಜು ಪೈಪ್‌ಲೈನ್ ದುರಸ್ಥಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮುಂತಾದ ವ್ಯವಸ್ಥೆಯ ಜವಾಬ್ದಾರಿ ನೀಡಲಾಗಿದೆ.

ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ವಿದ್ಯುತ್ ಸರಬರಾಜು, ವಿದ್ಯುತ್ ತಂತಿಗಳಲ್ಲಿ ಯಾವುದೇ ರೀತಿಯ ಶಾರ್ಟ್ ಸರ್ಕ್ಯೂಟ್ ಆಗದಂತೆ ಮುನ್ನೆಚ್ಚರಿಕೆ ಕ್ರಮ, ಪರಿವರ್ತಕ ವಿಫಲವಾಗದಂತೆ ಹೆಚ್ಚುವರಿ ಪರಿವರ್ತಕಗಳ ವ್ಯವಸ್ಥೆ, ವಿದ್ಯುತ್ ಲೈನ್‌ಗಳು ಹಾದು ಹೋದ ಸ್ಥಳಗಳಲ್ಲಿನ ಸುರಕ್ಷತೆ ಮುಂತಾದವುಗಳ ಕಡೆ ನಿಗಾವಹಿಸಲಿದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಆಹಾರ ಸುರಕ್ಷಾಧಿಕಾರಿಯವರು ಗವಿಮಠದ ಅಡುಗೆ ಸಿಬ್ಬಂದಿಯೊಂದಿಗೆ ವಿಶೇಷ ಸಭೆ ನಡೆಸಿ, ಆಹಾರ ಸುರಕ್ಷಾ ಕ್ರಮಗಳನ್ನು ಕೈಗೊಂಡು, ಮಠಕ್ಕೆ ಬಂದಂತಹ ಎಲ್ಲಾ ತರಹದ ಆಹಾರ ಪದಾರ್ಥ ಹಾಗೂ ಸಾಮಗ್ರಿಗಳನ್ನು ಪರಿಶೀಲನೆ ನಡೆಸಿ, ಭಕ್ತಾಧಿಗಳಿಗೆ ನೀಡುವ ಕುರಿತು ಕ್ರಮ ವಹಿಸಲಿದ್ದಾರೆ.

ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು, ರಥೋತ್ಸವದ 3 ದಿನಗಳ ಪೂರ್ವದಲ್ಲಿ ರಥದ ಎಲ್ಲಾ ಚಕ್ರಗಳನ್ನು ಹಾಗೂ ರಥದ ಎಲ್ಲಾ ಭಾಗಗಳನ್ನು ಪರಿಶೀಲನೆ ಮಾಡಿ, ಮಹಾರಥೋತ್ಸವ ಜರುಗುವುದಕ್ಕೆ ಸೂಕ್ತ ಇರುವ ಅಥವಾ ಇಲ್ಲದಿರುವ ಬಗ್ಗೆ ದೃಢೀಕರಣ ಪತ್ರವನ್ನು ಒದಗಿಸಲಿದ್ದಾರೆ. ರಥೋತ್ಸವದ ದಿನದಂದು ಆಗಮಿಸುವ ಗಣ್ಯರ ವೇದಿಕೆಯನ್ನು ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿಗಳು ಶ್ರೀ ಗವಿಸಿದ್ದೇಶ್ವರ ಜಾತ್ರೆಯ ಅಂಗವಾಗಿ ನಗರದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ನಗರ ಹಾಗೂ ಗ್ರಾಮೀಣ ಸಾರಿಗೆ ಬಸ್‌ಗಳ ಸಮಯವನ್ನು ವಿಸ್ತರಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಿದ್ದಾರೆ. ಬಸ್‌ಗಳ ನಿಲುಗಡೆಗಾಗಿ ನಿಗದಿತ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+